ಉಡುಪಿ ನಗರಸಭೆ; ಸುಮಿತ್ರಾ ನಾಯಕ್ ಅಧ್ಯಕ್ಷೆ , ಲಕ್ಷ್ಮೀ ಉಪಾಧ್ಯಕ್ಷೆಯಾಗಿ ಆಯ್ಕೆ
Team Udayavani, Oct 30, 2020, 1:02 AM IST
ಉಡುಪಿ: ಉಡುಪಿ ನಗರಸಭೆ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಪರ್ಕಳ ವಾರ್ಡ್ನ ಬಿಜೆಪಿ ಅಭ್ಯರ್ಥಿ ಸುಮಿತ್ರಾ ನಾಯಕ್ ಅಧ್ಯಕ್ಷೆ ಮತ್ತು ಕೊಳ ವಾರ್ಡ್ನ ಲಕ್ಷ್ಮೀ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.
ನಗರಸಭೆಯ ಒಟ್ಟು 35 ವಾರ್ಡ್ಗಳಲ್ಲಿ 31 ಸ್ಥಾನಗಳನ್ನು ಬಿಜೆಪಿ, ಕಾಂಗ್ರೆಸ್ 4 ಸ್ಥಾನಗಳನ್ನು ಹೊಂದಿದೆ. ಹೀಗಾಗಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಪೂರ್ವ ಮತ್ತು ಪಶ್ಚಿಮ ವಾರ್ಡ್ನ ಬಿಜೆಪಿ ಸದಸ್ಯರು ಅವಿರೋಧವಾಗಿ ಆಯ್ಕೆಯಾದರು. ಮೀಸಲಾತಿ ಪಟ್ಟಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ (ಎ) ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ನಿಗದಿಯಾ ಗಿತ್ತು. ಈಗಾಗಲೇ ಇರುವ ಸಮಸ್ಯೆಗಳನ್ನು ಬಗೆಹರಿಸಿ ಕೆಲಸಕ್ಕೆ ಆದ್ಯತೆ ಕೊಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸುಮಿತ್ರಾ ನಾಯಕ್ ಘೋಷಿಸಿದರು.
ಸತ್ಯಮೂರ್ತಿ ಸ್ಮಾರಕ ಸಭಾಂಗಣದಲ್ಲಿ ಗುರುವಾರ ನಡೆದ ಚುನಾವಣ ಪ್ರಕ್ರಿಯೆಯನ್ನು ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ರಾಜು ಅವರು ನಡೆಸಿಕೊಟ್ಟರು. ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಮೀನು ಮಾರಾಟ ಫೇಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ಪೌರಾಯುಕ್ತ ಆನಂದ ಸಿ. ಕಲ್ಲೊಳಿಕರ್, ಕಂದಯಾಧಿಕಾರಿ ಧನಂಜಯ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.