ಭತ್ತ ಕಟಾವು ಯಂತ್ರದ ಬಾಡಿಗೆ ದರ ನಿಗದಿಪಡಿಸಿದ ಜಿಲ್ಲಾಧಿಕಾರಿ: ತಪ್ಪಿದಲ್ಲಿ ಕಾನೂನು ಕ್ರಮ
Team Udayavani, Oct 30, 2020, 10:06 AM IST
ದಾವಣಗೆರೆ: ಕೋವಿಡ್-19 ಸೋಂಕಿನ ಸಂಕಷ್ಟದ ಸಂದರ್ಭದಲ್ಲಿ ಭತ್ತದ ಕಟಾವು ಯಂತ್ರಗಳಿಗೆ ಪ್ರತಿ ಗಂಟೆಗೆ 1,800 ರೂ. ಮೀರದಂತೆ ಬಾಡಿಗೆ ನಿಗದಿಪಡಿಸಬೇಕು. ತಪ್ಪಿದಲ್ಲಿ ಭತ್ತ ಕಟಾವು ಯಂತ್ರದ ಮಾಲಿಕರ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಸಿದ್ದಾರೆ.
ಜಿಲ್ಲೆಯಲ್ಲಿ 2020-21ನೇ ಸಾಲಿನ ಮುಂಗಾರಿನ ಹಂಗಾಮಿನಲ್ಲಿ 66,046 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದ್ದು, ಸದ್ಯ ಭತ್ತದ ಬೆಳೆಯು ಬಹುತೇಕ ಕಾಳು ಬೆಳೆಯುವ ಹಂತದಲ್ಲಿರುವುದರಿಂದ ಇನ್ನು 2 ರಿಂದ 3 ವಾರಗಳಲ್ಲಿ ಕಟಾವು ಪ್ರಾರಂಭವಾಗಲಿದೆ. ಶೇ. 95 ರಷ್ಟು ರೈತರು ಭತ್ತದ ಬೆಳೆಯನ್ನು ಭತ್ತ ಕಟಾವು ಯಂತ್ರಗಳ ಮೂಲಕ ಕಟಾವು ಮಾಡುತ್ತಿದ್ದು, ತಮ್ಮ ಸಮೀಪದ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಲಭ್ಯಯವಿರುವ ಭತ್ತ ಕಟಾವು ಯಂತ್ರಗಳ ಪ್ರಯೋಜನ ಪಡೆಯಬಹುದಾಗಿರುತ್ತದೆ.
ಇದನ್ನೂ ಓದಿ:ನದಿ ಹರಿಯುವ ಊರಿನಲ್ಲಿ ಮರಳಿಗೆ ಈಗ ಬರ
ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲಿಕರು ರೈತರಿಂದ ಪ್ರತಿ ಗಂಟೆಗೆ 2,500 ರಿಂದ 3 ಸಾವಿರದವರೆಗೆ ಬಾಡಿಗೆ ಹಣ ನಿಗದಿಪಡಿಸುತ್ತಿರುವುದು ಕಂಡುಬಂದಿರುವುದರಿಂದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ. ಪ್ರತಿ ಗಂಟೆಗೆ 1,800 ರೂ. ಮೀರದಂತೆ ಬಾಡಿಗೆ ನಿಗದಿಪಡಿಸಿಬೇಕು. ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
MUST WATCH
ಹೊಸ ಸೇರ್ಪಡೆ
Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.