ಈರುಳ್ಳಿ ಬೆಳೆಗಾರರಿಗೆ ಬೆಂಬಲ: ಸಿಎಂ ಉದ್ಧವ್
Team Udayavani, Oct 30, 2020, 7:20 PM IST
ಮುಂಬಯಿ: ರಾಜ್ಯದಲ್ಲಿಯ ಈರುಳ್ಳಿ ಬೆಳೆಗಾರರ ಸಮಸ್ಯೆಗಳು ನಮ್ಮ ಗಮನಕ್ಕೆ ಬಂದಿದ್ದು, ಅವುಗಳನ್ನು ಪರಿಹರಿಸಲು ನಾವು ಕೇಂದ್ರ ಸರಕಾರದ ಬಳಿ ಚರ್ಚೆ ನಡೆಸಲಿದ್ದೇವೆ. ಸರಕಾರವು ಯಾವಾಗಲೂ ಈರುಳ್ಳಿ ಬೆಳೆಗಾರರ ಪರವಾಗಿದೆ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಮಹಾರಾಷ್ಟ್ರ ರಾಜ್ಯ ಈರುಳ್ಳಿ ಬೆಳೆಗಾರರ ಸಂಘದ ನಿಯೋಗವು ಶುಕ್ರವಾರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ವರ್ಷಾ ನಿವಾಸದಲ್ಲಿ ಭೇಟಿಯಾಗಿ ತಮ್ಮ ಸಮಸ್ಯೆಗಳನ್ನು ಸಿಎಂ ಮುಂದೆ ಪ್ರಸ್ತುತಪಡಿಸಿತು. ಈ ವೇಳೆ ಕೃಷಿ ಸಚಿವ ದಾದಾಜಿ ಭೂಸೆ, ಇಲಾಖೆಯ ಕಾರ್ಯದರ್ಶಿ ಏಕನಾಥ್ ಡವಾಲೆ, ಮಹಾರಾಷ್ಟ್ರ ರಾಜ್ಯ ಈರುಳ್ಳಿ ಬೆಳೆಗಾರರ ಸಂಘ ಮತ್ತು ಲಸಲ್ಗಾಂವ್ ಮರ್ಚೆಂಟ್ಸ್ ಅಸೋಸಿಯೇಶನ್‌ನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಗಟು ವ್ಯಾಪಾರಿಗಳಿಗೆ 25 ಮೆಟ್ರಿಕ್ ಟನ್ ಮತ್ತು ಚಿಲ್ಲರೆ ವ್ಯಾಪಾರಿಗಳಿಗೆ 2 ಟನ್ ವರೆಗೆ ಈರುಳ್ಳಿ ಸಂಗ್ರಹಿಸಬಹುದಾಗಿದೆ. ಇದರ ಪರಿಣಾಮವಾಗಿ ವ್ಯಾಪಾರಿಗಳು ಈರುಳ್ಳಿ ಖರೀದಿಸುವುದನ್ನು ನಿಲ್ಲಿಸಿದ್ದು, ಇದು ರೈತರನ್ನು ಸಂಕಷ್ಟ ಸ್ಥಿತಿಗೆ ತಳ್ಳಿದೆ. ಈ ಹಿನ್ನೆಲೆಯಲ್ಲಿ ಈರುಳ್ಳಿ ಬೆಳೆಗಾರರ ಮತ್ತು ವ್ಯಾಪಾರಿಗಳ ಸಂಘಗಳ ಪ್ರತಿನಿಧಿಗಳು ಮುಖ್ಯಮಂತ್ರಿಯನ್ನು ಭೇಟಿಯಾಗಿ ತಮ್ಮ ಕಳವಳವನ್ನು ಅವರೊಂದಿಗೆ ಹಂಚಿಕೊಂಡರು. ಮುಖ್ಯಮಂತ್ರಿಯವರ ಕರೆಗೆ ಸ್ಪಂದಿಸಿದ ವ್ಯಾಪಾರ ಸಂಘವು ನಾಳೆಯಿಂದ ಈರುಳ್ಳಿ ಖರೀದಿಸಲು ಪ್ರಾರಂಭಿಸುವುದಾಗಿ ಭರವಸೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.