ಪೇಜಾವರ ಶ್ರೀಗಳು ಇಂದು ಅಯೋಧ್ಯೆಗೆ

ಉಜ್ಜಯಿನಿಯಲ್ಲಿ ಮಹಾಕಾಲೇಶ್ವರ ದರ್ಶನ 

Team Udayavani, Oct 31, 2020, 1:30 AM IST

ಪೇಜಾವರ ಶ್ರೀಗಳು ಇಂದು ಅಯೋಧ್ಯೆಗೆ

ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು ಉಜ್ಜಯಿನಿ ಯಲ್ಲಿ ಮಹಾಕಾಲೇಶ್ವರನ ದರ್ಶನ ಪಡೆದರು.

ಉಡುಪಿ: ಉತ್ತರ ಭಾರತ ಪ್ರವಾಸದಲ್ಲಿರುವ ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು ಉಜ್ಜಯಿನಿ ಕ್ಷೇತ್ರಕ್ಕೆ ಭೇಟಿ ನೀಡಿ ಮಹಾಕಾಲೇಶ್ವರನ ದರ್ಶನ ಪಡೆದರು. ಆ ಬಳಿಕ ಚಿತ್ರಕೂಟಕ್ಕೆ ಭೇಟಿ ನೀಡಿರುವ ಅವರು ಶನಿವಾರ ಅಯೋಧ್ಯೆ ರಾಮಜನ್ಮಭೂಮಿಗೆ ಭೇಟಿ ನೀಡುವರು.

ಅಯೋಧ್ಯೆಲ್ಲಿ ನಡೆಯುವ ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಟ್ರಸ್ಟ್‌ನ ಟ್ರಸ್ಟಿಯಾಗಿರುವ ಸ್ವಾಮೀಜಿ ಪಾಲ್ಗೊಳ್ಳುವರು. ಟ್ರಸ್ಟ್‌ ರಚನೆಯಾದ ಬಳಿಕ ಅವರು ಇದೇ ಮೊದಲ ಬಾರಿಗೆ ಅಯೋಧ್ಯೆಗೆ ತೆರಳುತ್ತಿದ್ದಾರೆ.

ನ. 10-11ರಂದು ಹೊಸದಿಲ್ಲಿಯಲ್ಲಿ ವಿಶ್ವ ಹಿಂದೂ ಪರಿಷತ್‌ ಮತ್ತು ತೀರ್ಥ ಕ್ಷೇತ್ರ ಟ್ರಸ್ಟ್‌ನ ಎರಡು ಸಭೆಗಳು ನಡೆಯಲಿದ್ದು ಅದರಲ್ಲೂ ಸ್ವಾಮೀಜಿ ಭಾಗವಹಿಸುವರು. ಅಯೋಧ್ಯೆಯಲ್ಲಿ ನಡೆಯುವ ಸಭೆಯಲ್ಲಿ ಕಾಮಗಾರಿ ಕುರಿತಂತೆ, ದಿಲ್ಲಿಯಲ್ಲಿ ನಡೆಯುವ ಸಭೆಯಲ್ಲಿ ಮುಂದಿನ ದಿನಗಳಲ್ಲಿ ಮಂದಿರ ನಿರ್ಮಾಣ ಕುರಿತು ನಡೆಸಬಹುದಾದ ಆಂದೋಲನದ ಕುರಿತು ಚರ್ಚೆ ನಡೆದು ನಿರ್ಣಯ ತಳೆಯಲಾಗುವುದು.

ಅಯೋಧ್ಯೆಯಲ್ಲಿ 1992ರ ಡಿ. 6ರ ಕರಸೇವೆಯ ಮರುದಿನ ಮುಂಜಾವ ತರಾತುರಿಯಲ್ಲಿ ಪೇಜಾವರ ಹಿರಿಯ ಸ್ವಾಮೀಜಿ ಪ್ರತಿಷ್ಠಾಪಿಸಿದ ರಾಮಲಲ್ಲಾನ ದರ್ಶನ ಮಾಡಿದ ಬಳಿಕ ಸ್ವಾಮೀಜಿ ಹರಿದ್ವಾರ, ಸಾಧ್ಯವಾದರೆ ಬದರಿ ಕ್ಷೇತ್ರಕ್ಕೆ ಭೇಟಿ ನೀಡುವರು. ಮುಂದಿನ ದೀಪಾವಳಿ ತೈಲಾಭ್ಯಂಗವನ್ನು ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ನಡೆಸುವರು. ಹಿಂದೆ ಹಿರಿಯ ಸ್ವಾಮೀಜಿಯವರು ಇರುವಾಗ ಪರ್ಯಾಯದ ಅವಧಿ ಹೊರತುಪಡಿಸಿ ಉಳಿದ ಎಲ್ಲ ದೀಪಾವಳಿಯನ್ನು ವಿದ್ಯಾಪೀಠದ ವಿದ್ಯಾರ್ಥಿಗಳೊಂದಿಗೆ ಆಚರಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾ ಕಾರಣದಿಂದ ವಿದ್ಯಾರ್ಥಿಗಳು ಇಲ್ಲ. ಕೇವಲ ಹಿರಿಯ 31 ವಿದ್ಯಾರ್ಥಿಗಳು ಮಾತ್ರ ಇದ್ದು ಇವರ ಜತೆಯೇ ಹಬ್ಬದ ಸ್ನಾನವನ್ನು ನಡೆಸುವರು. ಹಿರಿಯ ವಿದ್ಯಾರ್ಥಿಗಳ ಒಂದು ತಂಡ ಸ್ವಾಮೀಜಿಯವರೊಂದಿಗೆ ಇದ್ದು ಅವರಿಗೆ ಶಾಸ್ತ್ರ ಪಾಠಗಳು ಸ್ವಾಮೀಜಿಯವರಿಂದ ನಡೆಯುತ್ತಿವೆ. ಉಳಿದ ಒಂದು ತಂಡ ವಿದ್ಯಾಪೀಠದಲ್ಲಿದೆ. ಗೋಪೂಜೆಯನ್ನು ನೀಲಾವರ ಗೋಶಾಲೆಯಲ್ಲಿ ಸ್ವಾಮೀಜಿ ನಡೆಸಲಿದ್ದಾರೆ.

ಟಾಪ್ ನ್ಯೂಸ್

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

11(1)

Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ

8

Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.