ಕಟ್ಟಡ ಕುಸಿತ ರಕ್ಷಣಾ ಕಾರ್ಯ ಅಣಕು ಪ್ರದರ್ಶನ
|ಎನ್‌ಡಿಆರ್‌ಎಫ್ ತಂಡದಿಂದ ಕಾರ್ಯಾಚರಣೆ | ಹಿಂದಿ ಪ್ರಚಾರ ಸಭಾ ಕಟ್ಟಡದ ಆವರಣದಲ್ಲಿ 40 ಸಿಬ್ಬಂದಿ ಭಾಗಿ
Team Udayavani, Oct 31, 2020, 12:07 PM IST
ಧಾರವಾಡ: ಜಿಲ್ಲಾಡಳಿತ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಹು-ಧಾ ಮಹಾನಗರ ಪಾಲಿಕೆ ಆಶ್ರಯದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (ಎನ್ ಡಿಆರ್‌ಎಫ್) ತಂಡದಿಂದ ಕುಸಿತಗೊಂಡ ಕಟ್ಟಡದ ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ ದಕ್ಷಿಣ ಭಾರತೀಯ ಹಿಂದಿ ಪ್ರಚಾರ ಸಭಾ ಕಟ್ಟಡದ ಆವರಣದಲ್ಲಿ ಶುಕ್ರವಾರ ಜರುಗಿತು.
ಬೆಂಗಳೂರಿನ 40ಕ್ಕೂ ಹೆಚ್ಚು ಎನ್ ಡಿಆರ್‌ಎಫ್ ತಂಡದ ಸಿಬ್ಬಂದಿ ಭಾಗವಹಿಸಿ, ಕಟ್ಟಡ ಕುಸಿದ ಸಂದರ್ಭದಲ್ಲಿ ಕಟ್ಟಡದಲ್ಲಿ ಸಿಲುಕಿಕೊಂಡವರ ರಕ್ಷಣೆ ಮಾಡುವುದು, ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡುವುದು, ಕಟ್ಟಡದಲ್ಲಿ ಸಿಲುಕಿದ ವ್ಯಕ್ತಿಯನ್ನು ರಕ್ಷಿಸಿ ಅಲ್ಲಿಂದ ರೂಪ್ ಮೂಲಕ ಹೇಗೆ ರಕ್ಷಣೆ ಮಾಡುತ್ತಾರೆ ಎಂಬುದರ ಬಗ್ಗೆ ಸಾರ್ವಜನಿಕ ಜಾಗೃತಿ ಮೂಡಿಸಿ ಅಣಕು ಪ್ರದರ್ಶನ ಮಾಡಲಾಯಿತು. ಅಣಕು ಪ್ರದರ್ಶನ ಉದ್ಘಾಟಿಸಿದ ಡಿಸಿ ನಿತೇಶ ಪಾಟೀಲ ಮಾತನಾಡಿ, ಆಕಸ್ಮಿಕವಾಗಿ ಸಂಭವಿಸುವ ಘಟನೆಗಳಲ್ಲಿ ಎನ್‌ಡಿಆರ್ ಎಫ್ ಅಂತಹ ರಕ್ಷಣಾ ತಂಡಗಳು ಆಗಮಿಸಿ ರಕ್ಷಣಾ ಕಾರ್ಯ ಕೈಗೊಂಡಾಗ ಸಾರ್ವಜನಿಕರಿಗೆ ರಕ್ಷಣಾ ಕಾರ್ಯದ ರೀತಿ ಮತ್ತು ಮಹತ್ವದ ಅರಿವು ಮೂಡಿಸಲು ಅನುಕೂಲವಾಗುವಂತೆ ಪ್ರದರ್ಶನ ಏರ್ಪಡಿಸಲಾಗಿದೆ ಎಂದರು.
ಕಟ್ಟಡ ಕುಸಿತ, ಪ್ರವಾಹ, ಬೆಂಕಿ ಆಕಸ್ಮಿಕದಂತಹ ವಿಕೋಪದ ಘಟನೆಗಳು ಜರುಗಿದಾಗ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ, ರಾಜ್ಯ ವಿಪತ್ತು ನಿರ್ವಹಣಾ ದಳ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖಜಂಟಿಯಾಗಿ ರಕ್ಷಣಾ ಕಾರ್ಯವನ್ನು ಕೈಗೊಳ್ಳುತ್ತಾರೆ. ಸಾರ್ವಜನಿಕರು ಅಥವಾ ಆಪತ್ತಿಗೆ ಸಿಲುಕಿದ ವ್ಯಕ್ತಿಗಳಿಗೆ ರಕ್ಷಣಾ ಕಾರ್ಯದ ಕ್ರಮಗಳ ಬಗ್ಗೆ ಅರಿವು ಇದ್ದರೆ ಉತ್ತಮವಾಗಿ ಸ್ಪಂದಿಸುತ್ತಾರೆ. ಇದರಿಂದ ರಕ್ಷಣಾ ಕಾರ್ಯ ಸುಗಮ ಮತ್ತು ಯಶಸ್ವಿಯಾಗಲು ಸಹಾಯ ವಾಗುತ್ತದೆ ಎಂದು ಹೇಳಿದರು.
ಎಸ್‌ಪಿ ಪಿ. ಕೃಷ್ಣಕಾಂತ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಎಸಿ ಡಾ|ಬಿ. ಗೋಪಾಲಕೃಷ್ಣ, ಮಹಾನಗರ ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ಎನ್ ಡಿಆರ್‌ಎಫ್ 10ನೇ ಬಟಾಲಿಯನ್‌ನ ಡೆಪ್ಯುಟಿ ಕಮಾಂಡರ್ ಸುಖೇಂದ್ರ ದತ್ತಾ, ಟೀಮ್ ಕಮಾಂಡರ್ ಸಂತೋಷ ಕುಮಾರ್ ಮತ್ತು ಆರ್.ಪಿ. ಚೌಧರಿ, ಜಾವೀದ ಖಾಜಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ಯಶವಂತ ಮದೀನಕರ ಇನ್ನಿತರರಿದ್ದರು. ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿ ಕಾರದ ಸಭೆ ಜರುಗಿತು. ಪ್ರಾಧಿಕಾರದ ಸದ್ಯಸರು, ವಿವಿಧ ಇಲಾಖೆ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
2019 ಮಾರ್ಚ್‌ನಲ್ಲಿ ಧಾರವಾಡದಲ್ಲಿ ಸಂಭವಿಸಿದ್ದ ಕಟ್ಟಡ ದುರಂತ ಅನೇಕ ಪಾಠಗಳನ್ನು ಕಲಿಸಿದೆ. ಹು-ಧಾ ಮಹಾನಗರ ಸೇರಿದಂತೆ ಜಿಲ್ಲೆಯಲ್ಲಿರುವ ಹಳೆಯ, ಶೀತಲ ಕಟ್ಟಡ ಹಾಗೂ ವಾಸಯೋಗ್ಯವಲ್ಲದ ಕಟ್ಟಡಗಳನ್ನು ಗುರುತಿಸಿ ಅವುಗಳ ಮಾಲೀಕರಿಗೆ ನೋಟಿಸ್ ನೀಡಲು ಮಹಾನಗರ ಪಾಲಿಕೆ ಹಾಗೂ ಗ್ರಾಪಂಗಳಿಗೆ ಜಿಲ್ಲಾಡಳಿತ ಸೂಚನೆ ನೀಡಲಿದೆ. ಸಮೀಕ್ಷೆ ನಂತರ ಕಟ್ಟಡ ಮಾಲೀಕರಿಗೆ ಎಚ್ಚರಿಕೆ ನೀಡಿ, ಕಟ್ಟಡ ಸುರಕ್ಷತೆಯ ಬಗ್ಗೆ ತಜ್ಞರಿಂದ ಪ್ರಮಾಣಪತ್ರ ಸಲ್ಲಿಸುವಂತೆ ಸೂಚಿಸಲಾಗುವುದು. –ನಿತೇಶ ಪಾಟೀಲ, ಅಧ್ಯಕ್ಷರು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.