ಮತದಾರರ ಪಟ್ಟಿ ಗುದುಮುರಿಗೆ ಶುರು

| ವಾಕರಸಾ ಸಂಸ್ಥೆ ನೌಕರರ ಸಹಕಾರಿ ಸಂಘದ ಚುನಾವಣೆ | ಆಡಳಿತ ಮಂಡಳಿ ಸದಸ್ಯರಿಂದಲೇ ದೂರು

Team Udayavani, Oct 31, 2020, 12:31 PM IST

huballi-tdy-3

ಹುಬ್ಬಳ್ಳಿ: ಅನುಮಾನಕ್ಕೆ ಕಾರಣವಾಗಿರುವ ಪಟ್ಟಿ.

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಹಕಾರಿ ಪತ್ತಿನ ಸಂಘದ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಮತದಾರರ ಪಟ್ಟಿಯ ಗುದುಮುರಿಗೆ ಶುರುವಾಗಿದೆ. ಸಂಘದ ಚುಕ್ಕಾಣಿ ಹಿಡಿಯಲು ಒಂದು ಬಣ ಖೊಟ್ಟಿ ಮತದಾರರ ಪಟ್ಟಿ ಸಿದ್ಧಪಡಿಸಿದೆ ಎನ್ನುವ ಆರೋಪಗಳು ಬಲವಾಗಿ ಕೇಳಿಬರುತ್ತಿದ್ದು, ಈ ಕುರಿತು ಸಂಘದ ಆಡಳಿತ ಮಂಡಳಿ ಸದಸ್ಯರೇ ಸಹಕಾರಿ ಇಲಾಖೆಗೆ ದೂರು ಸಲ್ಲಿಸಿದ್ದಾರೆ.

ಸಾರಿಗೆ ನೌಕರರ ಪತ್ತಿನ ಸಂಘದ ಚುನಾವಣೆ ಪ್ರತಿಷ್ಠೆಯಾಗಿ ಪರಿಣಮಿಸಿದ್ದು; ಕೊಪ್ಪಳ, ಗದಗ, ಹಾವೇರಿ ಹಾಗೂ ಧಾರವಾಡ ನಾಲ್ಕು ಜಿಲ್ಲೆಯ ಆರು ವಿಭಾಗ ವ್ಯಾಪ್ತಿಯ 4922 ನೌಕರರು ಸದಸ್ಯರಿದ್ದು, 224 ಸದಸ್ಯರು ಕಟುಬಾಕಿದಾರರಾಗಿದ್ದಾರೆ. 2302 ಸದಸ್ಯರು ಮತದಾನ ಹಕ್ಕು ಪಡೆದಿದ್ದಾರೆ. ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ತಯಾರಿಸಿರುವ ಮತದಾರರ ಪಟ್ಟಿ ಖೊಟ್ಟಿ ಎನ್ನುವ ಆರೋಪಗಳು ಬಲವಾಗಿ ಕೇಳಿಬರುತ್ತಿದೆ. ಚುನಾವಣೆಗಾಗಿಯೇ ಒಂದು ಬಣ ಖೊಟ್ಟಿ ಮತದಾರರ ಪಟ್ಟಿ ಸಿದ್ಧಪಡಿಸಿದೆ. ಆದರೆ ಚುನಾವಣೆ ದಿನಾಂಕ ನಿಗದಿಯಾದರೂ ಮತದಾರರ ಪಟ್ಟಿ ಪ್ರಕಟಿಸಿಲ್ಲ ಎನ್ನುವ ಆರೋಪ ದಟ್ಟವಾಗಿದೆ.

ಮತದಾರರ ಪಟ್ಟಿ ನಿಜವೇ?: ಐದು ಸಾಮಾನ್ಯ ಸಭೆಗಳಲ್ಲಿ ಕನಿಷ್ಠ ಮೂರರಲ್ಲಿ ಪಾಲ್ಗೊಂಡವರು ಮಾತ್ರ ಮತದಾನ ಮಾಡಲು ಅರ್ಹತೆ ಪಡೆಯುತ್ತಾರೆ ಎನ್ನುವ ಸಹಕಾರಿ ಇಲಾಖೆ ನಿಯಮದ ಪ್ರಕಾರ ಪಟ್ಟಿಸಿದ್ಧಪಡಿಸಲಾಗಿದೆ. 4922 ಮತದಾರರ ಪೈಕಿ ಕೇವಲ2302 ಮತದಾರರು ಮಾತ್ರ ಅರ್ಹತೆ ಪಡೆದಿದ್ದಾರೆ. ಈ ಪಟ್ಟಿಯೇ ಖೊಟ್ಟಿ ಎಂದು ದೂರುಗಳು ಸಲ್ಲಿಕೆಯಾಗಿವೆ.ಐದು ವರ್ಷದಲ್ಲಿ ನಡೆದ ಐದು ಸಾಮಾನ್ಯ ಸಭೆಗೆ ಒಂದೇ ಮಾದರಿಯ ದಾಖಲೆ ನಿರ್ವಹಣೆ, ಒಂದೇ ಪೆನ್ನು ಬಳಸಿದ್ದಾರೆ ಎಂದು ಆಡಳಿತ ಮಂಡಳಿ ಸದಸ್ಯರು ದೂರಿನಲ್ಲಿ ಉಲ್ಲೇಖೀಸಿದ್ದಾರೆ.

ದೂರಿನಲ್ಲಿ ಏನಿದೆ?: ಆಡಳಿತ ಮಂಡಳಿಯ ಕೆಲ ಸದಸ್ಯರು ದೂರು ಸಲ್ಲಿಸಿದ್ದು, ಸಂಘದ ಕಾರ್ಯದರ್ಶಿ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಚುನಾವಣೆ ದಿನಾಂಕ ಪ್ರಕಟವಾಗುವ ಮುಂಚೆ ಅರ್ಹತಾ ಕರಡು, ಕರ್ತವ್ಯ ಲೋಪವೆಸಗಿದವರಪಟ್ಟಿ, ಮರುಪಾವತಿ ಮಾಡದ ಸದಸ್ಯರ ಬಾಕಿ ಪಟ್ಟಿ ಪ್ರಕಟಿಸಬೇಕು. ಆದರೆ ಇದು ಇನ್ನೂ ಕಾರ್ಯಗತವಾಗಿಲ್ಲ. ಐದು ವರ್ಷದ ಸಾಮಾನ್ಯ ಸಭೆಗೆ ಹಾಜರಾದವರ ಪಟ್ಟಿ ಖೊಟ್ಟಿಯಾಗಿದೆ. ಈ ಕುರಿತು ಮತದಾರರ ಯಾದಿ ಪರಿಶೀಲನಾಧಿಕಾರಿ ಗಮನಕ್ಕೆ ತಂದಾಗ್ಯೂ ಸಹಕಾರ ಚುನಾವಣಾ ಅಯುಕ್ತರಿಗೆ ದೂರು ಸಲ್ಲಿಸುವಂತೆ ನಮ್ಮ ಮನವಿ ತಳ್ಳಿಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಸಾಮಾನ್ಯ ಸಭೆ ಕಷ್ಟ: ಉಳಿದ ಸಹಕಾರಿ ಪತ್ತಿನ ಸಂಘಗಳಂತೆ ಸಾರಿಗೆ ನೌಕರರ ಪತ್ತಿನ ಸಹಕಾರಿ ಸಂಘದ ಸಾಮಾನ್ಯ ಸಭೆಗಳಿಗೆ ಎಲ್ಲಾ ಸದಸ್ಯರು ಹಾಜರಾಗುವುದು ಅಸಾಧ್ಯವಾಗಿದೆ. ಈ ನೌಕರರು ತುರ್ತು ಸೇವೆಯಡಿ ಬರುವುದರಿಂದ ಏಕಕಾಲಕ್ಕೆ ಐದು ಸಾವಿರ ನೌಕರರು ರಜೆ ಹಾಕಿ ಸಾಮಾನ್ಯ ಸಭೆಗೆ ಹಾಜರಾಗಲು ಸಾಧ್ಯವಿಲ್ಲ. ಈನಿಯಮದ ಪ್ರಕಾರ 2302 ಸದಸ್ಯರು ಮಾತ್ರ ಅರ್ಹತೆಪಡೆದುಕೊಂಡಿದ್ದು, ಉಳಿದವರು ಮತದಾನದಿಂದ ವಂಚಿತರಾಗಿದ್ದಾರೆ. ಆಡಳಿತದಲ್ಲಿರುವ ಬಣ ಪುನಃ ಅಧಿಕಾರಕ್ಕೆ ಬರಲು ನಿಯಮಬಾಹಿರವಾಗಿ ಖೊಟ್ಟಿ ಮತದಾರರ ಯಾದಿ ತಯಾರಿಸಿದ್ದಾರೆ ಎನ್ನುವುದು ವಿರೋಧಿ ಬಣದ ಆರೋಪವಾಗಿದ್ದು, ಸಹಕಾರಿ ಇಲಾಖೆಯ ನಿಬಂಧಕರವರೆಗೂ ದೂರು ನೀಡಿದ್ದಾರೆ.

ಸಂಬಂಧಿಕರ ನೇಮಕಾತಿ! :  ಇತ್ತೀಚೆಗಷ್ಟೆ ಸಂಘದಲ್ಲಿ ಖಾಲಿಯಿದ್ದ ಹುದ್ದೆಗಳಿಗೆ ಸಂಘದ ಪ್ರಮುಖರು ತಮ್ಮ ಸಂಬಂಧಿಗಳನ್ನು ನೇಮಕಾತಿ ಮಾಡುವ ಮೂಲಕ ಸಂಘದ ಬೈಲಾ ಉಲ್ಲಂಘಿಸಿದ ವಿದ್ಯಮಾನ ನಡೆದಿತ್ತು. ಇದು ಸದಸ್ಯರ ಆಕ್ರೋಶಕ್ಕೂ ಕಾರಣವಾಗಿತ್ತು. ಪ್ರಕರಣ ಹೊರಬರುತ್ತಿದ್ದಂತೆ ಪ್ರಮುಖ ಸ್ಥಾನದಲ್ಲಿದ್ದವರು ರಾಜೀನಾಮೆ ಸಲ್ಲಿಸಿದ್ದರು. ಎರಡು ಬಣಗಳ ನಡುವಿನ ಜಿದ್ದಾಜಿದ್ದಿಗೆ ಮತ್ತೂಂದು ಹೊಸ ಬಣ ಪ್ರಬಲ ಪೈಪೋಟಿ ನಡೆಸಲು ಸಿದ್ಧತೆ ನಡೆಸಿದೆ.

ಸಂಘದಿಂದ ತಯಾರಿಸಿರುವ ಮತದಾರರ ಪಟ್ಟಿ ಖೊಟ್ಟಿಯಾಗಿದೆ. ಅಂದು ಸಭೆಗೆ ಹಾಜರಾಗಿದ್ದಾರೆ ಎಂದು ಸಹಿ ಮಾಡಿದವರು ಕರ್ತವ್ಯದಲ್ಲಿರುವುದು ಖಚಿತವಾಗಿದೆ. ಚುನಾವಣೆ ಘೋಷಣೆಯಾಗಿದ್ದರೂ ನಮ್ಮ ಬಣದ ಸದಸ್ಯರಿಗೆ ಮತದಾರರ ಪಟ್ಟಿ ನೀಡುತ್ತಿಲ್ಲ.ಕೂಡಲೇ ಈ ಪಟ್ಟಿ ರದ್ದುಪಡಿಸಿ ಎಲ್ಲ ಅರ್ಹ ಸದಸ್ಯರಿಗೆ ಮತದಾನಕ್ಕೆ ಅವಕಾಶನೀಡಬೇಕು.  ಆರ್‌.ಎಫ್‌. ಕವಳಿಕಾಯಿ, ಉಪಾಧ್ಯಕ್ಷ,ಕೆಎಸ್‌ಆರ್‌ಟಿಸಿ ಸ್ಟಾಫ್‌ ಆ್ಯಂಡ್‌ ವರ್ಕರ್ì ಫೆಡರೇಶನ್‌

ಸಹಕಾರಿ ಇಲಾಖೆ ನಿಯಮದ ಪ್ರಕಾರ ಐದರಲ್ಲಿ ಕನಿಷ್ಠ ಮೂರು ವಾರ್ಷಿಕ ಸಭೆಗಳಿಗೆ ಆಗಮಿಸದೆ ಸಹಕಾರಿ ಕಾರ್ಯಗಳಿಂದ ದೂರವಿದ್ದವರು ಮತದಾನದ ಹಕ್ಕನ್ನು ಕಳೆದುಕೊಂಡವರು ಹತಾಶೆಯಿಂದ ದೂರು ಸಲ್ಲಿಸುತ್ತಿದ್ದಾರೆ. ಸಂಘ ಮತದಾರರ ಪಟ್ಟಿಯನ್ನು ಕಳುಹಿಸುತ್ತದೆ. ಸಹಕಾರ ಇಲಾಖೆ ಅಧಿಕಾರಿಗಳು ಕೂಲಂಕುಷವಾಗಿ ಪರಿಶೀಲಿಸಿ ಅಂತಿಮ ಪಟ್ಟಿ ಹೊರಡಿಸುತ್ತಾರೆ. ಸಂಘದ ಮತದಾರರ ಯಾದಿ ಕಾನೂನಾತ್ಮಕವಾಗಿ ಮಾಡಲಾಗಿದೆ.  -ವೈ.ಎಸ್‌. ಹುಳ್ಳಿ, ಅಧ್ಯಕ್ಷ, ನೌಕರರ ಸಹಕಾರಿ ಪತ್ತಿನ ಸಂಘ

ಟಾಪ್ ನ್ಯೂಸ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.