ಪ್ರಥಮ ದಿನವೇ 22 ನಾಮಪತ್ರ ಸಲ್ಲಿಕೆ

Team Udayavani, Oct 31, 2020, 1:45 PM IST

ಪ್ರಥಮ ದಿನವೇ 22 ನಾಮಪತ್ರ ಸಲ್ಲಿಕೆ

ಶಿರಸಿ: ಈಗಾಗಲೇ ಗರಿ ಗೆದರಿದ ಜಿಲ್ಲಾ ಮಧ್ಯವರ್ತಿ ಬ್ಯಾಂಕ್‌ ಕೆಡಿಸಿಸಿ ಚುನಾವಣೆ ಅಖಾಡ ರಂಗೇರಲು ಶುಕ್ರವಾರದಿಂದ ಆರಂಭಗೊಂಡಿದೆ.  ನಾಮಪತ್ರ ಸಲ್ಲಿಕೆ ಪ್ರಥಮ ದಿನವೇ ತುರುಸು ಉಂಟಾಗಿದೆ. ಹದಿನಾಲ್ಕು ಆಕಾಂಕ್ಷಿಗಳಿಂದ 22 ನಾಮಪತ್ರಗಳು ಸಲ್ಲಿಕೆಯಾಗಿವೆ.

ಶುಕ್ರವಾರದಿಂದಲೇ ಕೆಡಿಸಿಸಿ ಬ್ಯಾಂಕ್‌ ಪ್ರಧಾನ ಕಚೇರಿ ಆವಾರದಲ್ಲಿ ಬೆಂಬಲಿಗರ ಜೊತೆ ಬಂದ ಆಕಾಂಕ್ಷಿಗಳು ನಾಮಪತ್ರ ಸಲ್ಲಿಸಿದ್ದಾರೆ. ಹಳಬರ ಜೊತೆ ಹೊಸ ಮುಖಗಳೂ ನಾಮಪತ್ರ ಸಲ್ಲಿಸುತ್ತಿರುವುದು ವಿಶೇಷ. ಬೇರೆ ಬೇರೆ ಸಂಘ ಸಂಸ್ಥೆಗಳಲ್ಲಿ ಕೆಲಸ ಮಾಡಿದವರೂ ಕೆಡಿಸಿಸಿ ಗಾದಿಯ ಕನಸು ಹೆಣೆಯುತ್ತಿದ್ದಾರೆ. ಮಾಜಿ ಶಾಸಕ ಮಂಕಾಳು ವೈದ್ಯ, ನಿಕಟಪೂರ್ವ ಉಪಾಧ್ಯಕ್ಷ ಭಾಸ್ಕರ ಹೆಗಡೆ ಕಾಗೇರಿ, ನಿಕಟಪೂರ್ವ ನಿರ್ದೇಶಕ ಷಣ್ಮುಖ ಗೌಡ, ನಿಕಟಪೂರ್ವ ನಿರ್ದೇಶಕ ಜಿ.ಆರ್‌. ಹೆಗಡೆ ಸೋಂದಾ ಸೇರಿದಂತೆ ಹಲವರು ನಾಮಪತ್ರ ಸಲ್ಲಿಸಿದ್ದರೆ, ಟಿಎಸ್‌ಎಸ್‌ ಉಪಾಧ್ಯಕ್ಷ ರಾಮಕೃಷ್ಣ ಹೆಗಡೆ ಕಡವೆ, ಬೆಳ್ಳೇಕೇರಿಯ ಜಿ.ಆರ್‌. ಹೆಗಡೆ, ಸಿದ್ದಾಪುರದ ಗಡಿಹಿತ್ಲು ವಿವೇಕ, ಕಾಮಧೇನು ಸೊಸೈಟಿಯ ವಿನಾಯಕ ಮುಂಡಗೇಸರ ಸೇರಿದಂತೆ ಹೊಸಬರೂ ನಾಮಪತ್ರ ಸಲ್ಲಿಸಿದ್ದಾರೆ.

ಸಿದ್ದಾಪುರ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮತಕ್ಷೇತ್ರದಿಂದ ಅಲ್ಲಿನ ತಾಪಂ ಸದಸ್ಯ ವಿವೇಕ ಭಟ್ಟ ಗಡಿಹಿತ್ಲು, ಮಾಜಿನಿರ್ದೇಶಕ, ಅಪೆಕ್ಸ್‌ ಬ್ಯಾಂಕ್‌ ನಿರ್ದೇಶಕರೂ ಆಗಿದ್ದ ಷಣ್ಮುಖ ಗೌಡ, ಜೋಯಿಡಾದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮತಕ್ಷೇತ್ರದಿಂದ ಕೃಷ್ಣ ಶಾಂತಾರಾಮ ದೇಸಾಯಿ, ಗ್ರಾಹಕರ ಸಹಕಾರಿ ಸಂಘಗಳು ಹಾಗೂ ಮತ್ತು ಸಂಸ್ಕರಣ ಸಹಕಾರಿ ಸಂಘಗಳ ಮತಕ್ಷೇತ್ರದಿಂದ ಜಿ.ಆರ್‌. ಹೆಗಡೆ ಸೋಂದಾ, ಪತ್ರಕರ್ತರಾಗಿ ಕಾರ್ಯ ಮಾಡಿದ್ದ ವಿನಾಯಕ ಹೆಗಡೆ ಮುಂಡಿಗೇಸರ ನಾಮಪತ್ರ ಸಲ್ಲಿಸಿದ್ದಾರೆ.

ಔದ್ಯೋಗಿಕ ಸಹಕಾರಿ ಸಂಘಗಳ ಮತ ಕ್ಷೇತ್ರದಿಂದ ಜಿ.ಟಿ. ಹೆಗಡೆ ತಟ್ಟಿಸರ ಹಾಗೂ ಹೊನ್ನಾವರದ ತಲಗೆರೆ ವಿಶ್ವನಾಥ ಸುಬ್ರಾಯ ಭಟ್ಟ, ಅರ್ಬನ್‌ ಬ್ಯಾಂಕ್‌ ಮತ್ತು ಕೃಷಿಯೇತರ ಸಹಕಾರಿ ಸಂಘಗಳಿಂದ ಎಸ್‌.ಎಂ. ಹೆಗಡೆಮಾನಿಮನೆ ನಾಮಪತ್ರ ಸಲ್ಲಿಸಿದ್ದರೆ, ಕಾರವಾರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮತಕ್ಷೇತ್ರದಿಂದ ಪ್ರಕಾಶ ಗುನಗಿ, ಸುರೇಶ ಪೆಡ್ನೆಕರ್‌, ಶಿರಸಿ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮತಕ್ಷೇತ್ರದಿಂದ ರಾಮಕೃಷ್ಣ ಹೆಗಡೆ ಕಡವೆ, ಯಡಹಳ್ಳಿ ಸೊಸೈಟಿ ಅಧ್ಯಕ್ಷ ಜಿ.ಆರ್‌. ಹೆಗಡೆ ಬೆಳ್ಳೇಕೇರಿ ನಾಮಪತ್ರ ಸಲ್ಲಿಸಿದ್ದಾರೆ.

ಹಾಲು ಉತ್ಪಾದಕರ, ಕಾರ್ಮಿಕರ, ಕೂಲಿಕಾರರ ಹಾಗೂ ಇತರೇ ಸಹಕಾರಿ ಸಂಘಗಳಿಂದ ಭಾಸ್ಕರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಸಲಿದ್ದಾರೆ. ಇನ್ನು ಒಂದೆರಡು ದಿನಗಳಲ್ಲಿ ಶಿವರಾಮ ಹೆಬ್ಟಾರ್‌, ಶ್ರೀಕಾಂತ ಘೋಕ್ಲೃಕರ್‌, ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ಸೇರಿದಂತೆ ಅನೇಕರು ನಾಮಪತ್ರ ಸಲ್ಲಿಸಲಿದ್ದಾರೆ.

ಟಾಪ್ ನ್ಯೂಸ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!

ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.