ರಾಜಕಾಲುವೆ ಮೇಲೆ ವಾಣಿಜ್ಯ ಮಳಿಗೆ-ಆರೋಪ
ವಾಣಿಜ್ಯ ಮಳಿಗೆ ನಿರ್ಮಿಸಿಕೊಂಡು ವ್ಯಾಪಾರ ನಡೆಸುತ್ತಿದ್ದರೂ ಅಧಿಕಾರಿಗಳ ಜಾಣಕುರುಡು: ಸ್ಥಳೀಯರ ಆಕ್ರೋಶ
Team Udayavani, Oct 31, 2020, 7:22 PM IST
ಶಿವಮೊಗ್ಗ: ನಗರದ ಆಟೋ ಕಾಂಪ್ಲೆಕ್ಸ್‌ನಲ್ಲಿ ಹಾದು ಹೋಗಿರುವ ರಾಜಾಕಾಲುವೆ ಮೇಲೆಯೇ ವಾಣಿಜ್ಯ ಮಳಿಗೆಗಳು ನಿರ್ಮಾಣಗೊಳ್ಳುತ್ತಿದ್ದು, ಈ ಬಗ್ಗೆ ಅಧಿಕಾರಿಗಳು ಕಂಡೂ ಕಾಣದಂತೆ ವರ್ತಿಸುತ್ತಿದ್ದಾರೆ ಎಂಬ ಆರೋಪ ಸ್ಥಳೀಯರಿಂದ ಕೇಳಿ ಬರುತ್ತಿದೆ.
ಆಟೋ ಕಾಂಪ್ಲೆಕ್ಸ್‌ನಲ್ಲಿ ರಾಜಾ ಕಾಲುವೆಯನ್ನು ನಿರ್ಮಿಸುವ ಜವಾಬ್ದಾರಿಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಬೋರ್ಡ್‌ಗೆ (ಕೆಐಎಡಿಬಿ)ವಹಿಸಲಾಗಿತ್ತು. ಈಗಾಗಲೇ ಈ ಪ್ರದೇಶದಲ್ಲಿ ರಾಜಾ ಕಾಲುವೆಯನ್ನು ನಿರ್ಮಿಸಲಾಗಿದೆ. ಆದರೆ ಪಾಲಿಕೆಗೆ ಇದುವರೆಗೂ ಹಸ್ತಾಂತರಗೊಂಡಿಲ್ಲ. ಈ ಕಾರ್ಯ ಮುಗಿಯುವವರೆಗೂ ಇದರ ನಿರ್ವಹಣೆ ಕೆಐಎಡಿಬಿ ಮೇಲಿದೆ. ಆದರೆ ಇಲ್ಲಿನ ಅಧಿಕಾರಿಗಳು ರಾಜಾ ಕಾಲುವೆ ಮೇಲೆಯೇ ಕೆಲವರು ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿಕೊಂಡು ವ್ಯಾಪಾರ- ವಹಿವಾಟು ನಡೆಸುತ್ತಿದ್ದರೂ ಸಹ ಇದರ ಬಗ್ಗೆ ಯಾವುದೇ ಗಮನ ಹರಿಸಿಲ್ಲ. ಕಂಡರೂ ಕೂಡಾ ಕಣ್ಮುಚ್ಚಿ ಕುಳಿತಿದ್ದಾರೆ ಎಂಬ ಆಕ್ರೋಶ ಇಲ್ಲಿನ ಸ್ಥಳೀಯರಿಂದ ಕೇಳಿ ಬರುತ್ತಿದೆ.
ರಾಜಾ ಕಾಲುವೆಯ ಉಳಿದ ಭಾಗದಲ್ಲೂ ಸಹ ವಾಣಿಜ್ಯ ಕಾರ್ಯಕ್ಕಾಗಿ ಮಳಿಗೆಗಳನ್ನು ನಿರ್ಮಿಸಿಕೊಳ್ಳಲು ಸ್ಲ್ಯಾಬ್ ನಿರ್ಮಿ ಸಲಾಗುತ್ತಿದೆ. ಅಲ್ಲದೆ, ಜಲ್ಲಿ ಹಾಗೂ ಕಬ್ಬಿಣದ ರಾಡ್‌ಗಳನ್ನು ಶೇಖರಿಸಿಡಲಾಗಿದೆ. ಇವುಗಳನ್ನು ತೆರವುಗೊ ಳಿಸಬೇಕು ಮತ್ತು ಯಾವುದೇ ಕಾರಣಕ್ಕೂ ರಾಜಾಕಾಲುವೆ ಮೇಲೆ ವ್ಯಾಪಾರ- ವಹಿವಾಟಿಗೆ ಅವಕಾಶ ಮಾಡಿಕೊಡಬಾರದು ಎಂಬ ಮನವಿಯನ್ನು ಹಲವು ಬಾರಿ ಮಾಡಿದ್ದರೂ ಸಹ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಮಳಿಗೆಗಳ ನಿರ್ಮಾಣ ಕಾರ್ಯ ಮುಂದುವರಿದೇ ಇದೆ. ಕೂಡಲೇ ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ ರಾಜಾ ಕಾಲುವೆ ಮೇಲಿನ ಮಳಿಗೆಗಳನ್ನು ತೆರವುಗೊಳಿಸಬೇಕು ಮತ್ತು ನಿರ್ಮಾಣ ಹಂತದ ಕಾರ್ಯವನ್ನು ಸ್ಥಗಿತಗೊಳಿಸಬೇಕೆಂಬ ಒತ್ತಾಯ ಸ್ಥಳೀಯರಿಂದ ಕೇಳಿಬರುತ್ತಿದೆ.
ಈಗಾಗಲೇ ರಾಜಾಕಾಲುವೆ ಮೇಲೆ ವಾಣಿಜ್ಯ ಉದ್ದೇಶಕ್ಕೆ ಮಳಿಗೆಗಳನ್ನು ಹಾಕಲಾಗಿದ್ದು, ಇವುಗಳನ್ನು ತೆರವುಗೊಳಿಸುವಂತೆ ಸಂಬಂಧಪಟ್ಟವರಿಗೆ ಮನವಿ ಮಾಡಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು. ಕೆಐಎಡಿಬಿ ಅಧಿಕಾರಿಗಳು ಯಾವುದೇ ಕಾರಣಕ್ಕೂ ರಾಜಾಕಾಲುವೆ ಮೇಲೆ ವಾಣಿಜ್ಯ ಮಳಿಗೆಗಳ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬಾರದು. –ರಾಹುಲ್ ಬಿದರೆ, ಪಾಲಿಕೆ ಸದಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Sagara: ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ
Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.