77 ಬಾರಿ ಟ್ರಾಫಿಕ್ ರೂಲ್ಸ್ ಬ್ರೇಕ್ : ಬೆಂಗಳೂರು ತರಕಾರಿ ವ್ಯಾಪಾರಿಗೆ 42,000 ಸಾವಿರ ದಂಡ.!
Team Udayavani, Oct 31, 2020, 9:10 PM IST
ಬೆಂಗಳೂರು : 77 ಬಾರಿ ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದ ತರಕಾರಿ ವ್ಯಾಪಾರಿಗೆ ಬರೋಬ್ಬರಿ 42,000 ಸಾವಿರ ದಂಡ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಪೊಲೀಸರು ಹೇಳುವ ಪ್ರಕಾರ ಮಡಿವಾಳದ ನಿವಾಸಿ ಅರುಣ್ ಕುಮಾರ್ ಇದುವರೆಗೆ 77 ಬಾರಿ ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಅಂತೆ. ಶುಕ್ರವಾರ ಬೆಂಗಳೂರು ಟ್ರಾಫಿಕ್ ಪೊಲೀಸರು ಹೆಲ್ಮೆಟ್ ಹಾಕದಿರುವ ಕಾರಣಕ್ಕಾಗಿ ಅರುಣ್ ಕುಮಾರ್ ಗಾಡಿಯನ್ನು ನಿಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ದಂಡ ವಿಧಿಸಲು ಅಧಿಕಾರಿಗಳು ಹೋದಾಗ, ಅರುಣ್ ಕುಮಾರ್ ಹೆಸರಿನಲ್ಲಿ ಬಾಕಿ ಉಳಿದಿರುವ ದಂಡದ ಮೊತ್ತವನ್ನು ನೋಡಿ ಸ್ವತಃ ಪೊಲೀಸರೇ ದಂಗಾಗಿ ಹೋಗಿದ್ದಾರೆ.
ಅರುಣ್ ಕುಮಾರ್ ಇದುವರೆಗೆ 77 ಬಾರಿ ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಉಲ್ಲಂಘಿಸಿದ್ದಕ್ಕಾಗಿ ಹೇರಿರುವ ದಂಡವನ್ನು ಕೋರ್ಟಿಗೆ ಕಟ್ಟಲು ಸಾಧ್ಯವಾಗಿಲ್ಲ.ಬಾಕಿರುವ ಮೊತ್ತವನ್ನು ಕಟ್ಟದೆ ಇರುವ ಕಾರಣಕ್ಕೆ ಮಡಿವಾಳ ಪೊಲೀಸರು ಅರುಣ್ ಕುಮಾರ್ ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ. ಎಲ್ಲಾ ದಂಡದ ಮೊತ್ತ ಒಟ್ಟು 42 ಸಾವಿರವಾಗಿದ್ದು, ಅರುಣ್ ಕುಮಾರ್ ಬಳಿಯಿರುವ ಸೆಕೆಂಡ್ ಹ್ಯಾಂಡ್ ಬೈಕ್ ನ ಮೊತ್ತ 20 ಸಾವಿರ. ಟ್ರಾಫಿಕ್ ದಂಡದ ಮೊತ್ತವೇ ಸೆಕೆಂಡ್ ಹ್ಯಾಂಡ್ ಬೈಕ್ ಮೊತ್ತಕ್ಕಿಂತ ದುಪ್ಪಟ್ಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.