ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನ: 10ಕ್ಕೂ ಹಚ್ಚು ಜನರು ಪೊಲೀಸ್ ವಶಕ್ಕೆ
Team Udayavani, Nov 1, 2020, 11:25 AM IST
ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನ: 10ಕ್ಕೂ ಹಚ್ಚು ಜನರು ಪೊಲೀಸ್ ವಶಕ್ಕೆ
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಬಗ್ಗೆ ನಿರ್ಲಕ್ಷ್ಯ ಖಂಡಿಸಿ ರವಿವಾರ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದ ಹತ್ತಕ್ಕೂ ಹಚ್ಚು ಜನರನ್ನು ಬಂಧಿಸಲಾಯಿತು.
ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದಾಗ ಸಮಿತಿ ಅಧ್ಯಕ್ಷ ಎಂ.ಎಸ್.ಪಾಟೀಲ್ ನರಿಬೋಳ ಹಾಗೂ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದರು.
ಕಲ್ಯಾಣ ಕರ್ನಾಟಕಕ್ಕೆ ಪದೇ ಪದೇ ಮಲತಾಯಿ ಧೋರಣೆ ಮಾಡಲಾಗುತ್ತಿದೆ. ಈ ಭಾಗದ ಕೇಂದ್ರ ಸ್ಥಾನ ಕಲಬುರಗಿಗೆ ಒಂದೂ ಸಚಿವ ಸ್ಥಾನ ನೀಡದೆ ಅನ್ಯಾಯ ಮಾಡಲಾಗಿದೆ. ಸಂವಿಧಾನದ ಕಲಂ 371 ಕ್ಕೆ ತಿದ್ದುಪಡಿ ತಂದ್ರೂ ಪ್ರಯೋಜನವಾಗುತ್ತಿಲ್ಲ. ಈ ಭಾಗಕ್ಕೆ ಸಿಗಬೇಕಾದ ಉದ್ಯೋಗ ಮೀಸಲಾತಿಯಲ್ಲಿಯೂ ತಾರತಮ್ಯ ಮಾಡಲಾಗುತ್ತಿದೆ. ಅನ್ಯಾಯದ ಮೇಲೆ ಅನ್ಯಾಯ ನಡೆಯುತ್ತದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ, ಪ್ರತ್ಯೇಕ ರಾಜ್ಯ ಸಮಿತಿಯಿಂದ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣೆಗೂ ಸ್ಪರ್ಧಿಸುವುದಾಗಿ ಸಮಿತಿ ಅಧ್ಯಕ್ಷ ಎಂ.ಎಸ್.ಪಾಟೀಲ್ ತಿಳಿದಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?