ವಿವಿಧ ಕಡೆಗಳಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ
Team Udayavani, Nov 1, 2020, 12:42 PM IST
ಪುತ್ತೂರು, ಅ. 31: ಬುಡಕಟ್ಟು ಜನಾಂಗ ದಲ್ಲಿಯೂ ಪ್ರತಿಭಾವಂತರಿದ್ದಾರೆ. ಅಂತಹ ಪ್ರತಿಭೆಗಳನ್ನು ಸಮಾಜ ಗುರುತಿಸಿ, ಗೌರವಿಸ ಬೇಕು. ಆ ಸಮಾಜಕ್ಕೂ ಗೌರವ ಕೊಡುವ ಮುಖಾಂತರ ಸಮಾಜದ ಪ್ರತಿಯೊಬ್ಬ ನಾಗರಿ ಕರನ್ನೂ ಸಮಾನವಾಗಿ ಕಾಣಬೇಕು ಎಂಬ ಉದ್ದೇಶದಿಂದ ರಾಜ್ಯ ಸರಕಾರ ವಾಲ್ಮೀಕಿ ಜಯಂತಿಯನ್ನು ಆಚರಿಸುತ್ತಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು.
ಪುತ್ತೂರು ಮಿನಿ ವಿಧಾನಸೌಧದಲ್ಲಿರುವ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಯನ್ನು ಉದ್ಘಾಟಿಸಿ, ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ತಹಶೀಲ್ದಾರ್ ರಮೇಶ್ ಬಾಬು, ತಾ.ಪಂ.ಸ್ಥಾಯೀ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಹರೀಶ್ ಬಿಜತ್ರೆ, ಮೀನಾಕ್ಷಿ ಮಂಜುನಾಥ ಅತಿಥಿಗಳಾಗಿದ್ದರು.
ನಗರಸಭಾ ಸದಸ್ಯ ಮನೋಹರ್ ಕಲ್ಲಾರೆ, ಉಪತಹಶೀಲ್ದಾರ್ ರಾಮಣ್ಣ ನಾಯ್ಕ, ತಾಲೂಕು ಕಚೇರಿಯ ನಾಗೇಶ್, ದಯಾನಂದ, ಸಮಾಜ ಕಲ್ಯಾಣ ಇಲಾಖೆಯ ಸಿಬಂದಿ ಚನಿಯಪ್ಪ ನಾಯ್ಕ, ಅನ್ನಪೂರ್ಣ ಮುಂತಾದವರು ಭಾಗವಹಿಸಿದ್ದರು. ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕ ಕೃಷ್ಣ ಬಿ. ಸ್ವಾಗತಿಸಿ, ಪ್ರೇಮಲತಾ ವಂದಿಸಿದರು.
ಸುಳ್ಯ, ಅ. 31: ಸುಳ್ಯ ತಾಲೂಕು ನಾಡಹಬ್ಬಗಳ ದಿನಾಚರಣೆ ಸಮಿತಿಯ ಆಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯು ಸುಳ್ಯ ತಾಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆಯಿತು.
ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ಕಾರ್ಯಕ್ರಮವನ್ನು ಉದ್ಘಾಟಿಸಿ ವಾಲ್ಮೀಕಿ ಮಹರ್ಷಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ನಿವೃತ್ತ ಮುಖ್ಯ ಶಿಕ್ಷಕ ಚಿದಾನಂದ ಯು.ಎಸ್. ಉಪನ್ಯಾಸ ನೀಡಿದರು. ತಾ.ಪಂ. ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ, ತಹಶೀಲ್ದಾರ್ ಅನಂತಶಂಕರ್, ಉಪ ತಹಶೀಲ್ದಾರ್ ಚಂದ್ರಕಾಂತ್ ಎಂ.ಆರ್., ಬಿ.ಸಿ.ಎಂ. ವಿಸ್ತರಣಾಧಿಕಾರಿ ವಿಜಯ್, ತಾ.ಪಂ.ನ ರಾಜಲಕ್ಷ್ಮೀ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಚಂದ್ರಶೇಖರ ಉಪಸ್ಥಿತರಿದ್ದರು. ತಾಲೂಕು ಸಮಾಜ ಕಲ್ಯಾಣಾಧಿಕಾರಿ ಚಂದ್ರಶೇಖರ ಪೇರಾಲು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.