ಸಿದ್ದರಾಮಯ್ಯಗೆ ಮತ್ತಷ್ಟು ಶಾಸಕರು ಪಕ್ಷ ಬಿಡುವ ಹತಾಶೆ: ಗೋವಿಂದ ಕಾರಜೋಳ
Team Udayavani, Nov 1, 2020, 1:08 PM IST
ಬಾಗಲಕೋಟೆ: ಕಾಂಗ್ರೆಸ್‌ನ ಇನ್ನಷ್ಟು ಶಾಸಕರು ಪಕ್ಷ ಬಿಡುವ ಭೀತಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗಿದೆ. ಹೀಗಾಗಿ ಹತಾಶೆಗೊಂಡಿರುವ ಅವರು ಏನೇನೋ ಹೇಳುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋಗಿರುವ ಎಲ್ಲ ಶಾಸಕರಿಗೆ ಉಪಚುನಾವಣೆಯ ಬಳಿಕ ನಾಯಿಪಾಡು ಆಗಲಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾರಜೋಳ, ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದಿರುವ ಎಲ್ಲ ಶಾಸಕರಿಗೆ ಸಚಿವ ಸ್ಥಾನ ನೀಡುವ ಜತೆಗೆ ಗೌರವಯುತವಾಗಿ ನಡೆಸಿಕೊಳ್ಳಲಾಗಿದೆ ಎಂದರು.
ಕಾಂಗ್ರೆಸ್‌ನ ಇನ್ನಷ್ಟು ಶಾಸಕರು ಆ ಪಕ್ಷ ಬಿಡುವ ಭೀತಿ ಸ್ವತಃ ಸಿದ್ದರಾಮಯ್ಯ ಅವರಿಗಿದೆ. ಹೀಗಾಗಿ ಹತಾಶೆಗೊಂಡು ಈ ರೀತಿ ಹೇಳುತ್ತಿದ್ದಾರೆ. ನಾವು ಕಾಂಗ್ರೆಸ್‌ನ ಇನ್ನಷ್ಟು ಶಾಸಕರನ್ನು ಕರೆತರುವ ಕೆಲಸ ಮಾಡಲ್ಲ. ಆದರೆ, ಯಾರೇ ಬಂದರೂ ಪಕ್ಷ ಅವರನ್ನು ಕರೆದುಕೊಳ್ಳುತ್ತದೆ. ಪಕ್ಷ ಬೆಳೆಯಬೇಕು. ಬಿಜೆಪಿ ನಿಂತ ನೀರಲ್ಲ ಎಂದು ಹೇಳಿದರು.
ತನ್ವೀರ್ ಶೇಠ್‌ಗೆ ನರಿ ಕಥೆ ಪರಿಸ್ಥಿತಿ
ಉಪಚುನಾವಣೆ ಬಳಿಕ ಬಿಜೆಪಿ ಸರ್ಕಾರ ಬೀಳುತ್ತದೆ ಎಂದು ಹೇಳಿರುವ ಮಾಜಿ ಸಚಿವ ತನ್ವೀರ್ ಶೇಠ್‌ರನ್ನು ನರಿ ಕಥೆಗೆ ಹೋಲಿಸಿದ ಕಾರಜೋಳ, ಹೋರಿಯೊಂದು ಮುಂದೆ ಹೋಗುತ್ತಿರುತ್ತದೆ. ಅದರ ಹಿಂದೆ ನರಿ ಬೆನ್ನು ಹತ್ತಿ, ಹೋರಿ ಬಾಯಿಯಿಂದ ಬೀಳುವ ಅನ್ನ ತಿನ್ನಲು ಹಾತೋರೆಯುತ್ತದೆ. ಹೋರಿಯ ಬಾಯಿಯಿಂದ ಏನೂ ಬೀಳಲ್ಲ, ನರಿಗೆ ಏನೂ ಸಿಗುವುದೂ ಇಲ್ಲ. ಈ ಕಥೆಯಂತೆ ತನ್ವೀರ ಶೇಠ್ ಹೇಳುತ್ತಲೇ ಹೋಗುತ್ತಾರೆ. ಸರ್ಕಾರ ಬೀಳುವುದಿಲ್ಲ ಎಂದರು.
ನ್ಯಾ.ಸದಾಶಿವ ವರದಿ ಬಗ್ಗೆ ಸಂಪುಟದಲ್ಲಿ ಚರ್ಚೆ
ನ್ಯಾ.ಸದಾಶಿವ ಆಯೋಗದ ವರದಿ ಕುರಿತು ಬರುವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ ಎಂದು ಪ್ರಶ್ನೆಯೊಂದಕ್ಕೆ ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.