ಪೊಲೀಸರ ಕಣ್ತಪ್ಪಿಸಿ ಬೆಳಗಾವಿಗೆ ಬಂದ ಎನ್ ಸಿಪಿ ನಾಯಕಿ ರೂಪಾಲಿ ಚಾಕನಕರ
Team Udayavani, Nov 1, 2020, 3:31 PM IST
ಬೆಳಗಾವಿ: ಪೊಲೀಸರ ಕಣ್ಣುತಪ್ಪಿಸಿ ಎನ್‌ಸಿಪಿ ಮಹಿಳಾ ಘಟಕದ ರೂಪಾಲಿ ಚಾಕನಕರ ಬೆಳಗಾವಿಗೆ ಆಗಮಿಸಿ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ್ದಾರೆ.
ನಾಡದ್ರೋಹಿ ಎಂಇಎಸ್‌ಗೆ ಮಹಾರಾಷ್ಟ್ರ ನಾಯಕರು ಬೆಂಬಲ ಸೂಚಿಸಿದ್ದಾರೆ. ಎಂಇಎಸ್ ಪ್ರತಿಭಟನಾ ಸಭೆಯಲ್ಲಿ ಭಾಗಿಯಾಗಿರುವ ಮಹಾರಾಷ್ಟ್ರ ಎನ್‌ಸಿಪಿ ನಾಯಕಿ ರೂಪಾಲಿ ಭಾಷಣ ಮಾಡಿ ಕರ್ನಾಟಕ ಸರ್ಕಾರದ ವಿರುದ್ಧ ಹರಿಹಾಯ್ದರು.
ಎನ್‌ಸಿಪಿ ವರಿಷ್ಠ ಶರದ್ ಪವಾರ್ ಆದೇಶ ಮೇರೆಗೆ ಸಭೆಗೆ ಬಂದಿದ್ದೇನೆ. ಕರ್ನಾಟಕ ಸರ್ಕಾರ ಕರಾಳ ದಿನ ನಿಷೇಧಿಸಿದ್ದರೂ ನಾವು ಮಹಾರಾಷ್ಟ್ರದಲ್ಲಿ ಆಚರಿಸುತ್ತಿದ್ದೇವೆ. ಮಹಾರಾಷ್ಟ್ರದಲ್ಲಿ ನಾವು ಕಪ್ಪುಪಟ್ಟಿ ಧರಿಸಿ ಕರಾಳ ದಿನ ಆಚರಿಸುತ್ತಿದ್ದೇವೆ. ಪೊಲೀಸರು ತಡೆಯೊಡ್ಡುತ್ತಾರೆಂದು ಗೊತ್ತಿದ್ದರೂ ಅವರ ಕಣ್ತಪ್ಪಿಸಿ ಸಭೆಗೆ ಬಂದಿದ್ದೇನೆ. ಗಡಿಭಾಗದ ಮರಾಠಿಗರ ಮೇಲೆ ಕರ್ನಾಟಕ ಸರ್ಕಾರ ದಬ್ಬಾಳಿಕೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ಬೆಳಗಾವಿ: ರಾಜ್ಯೋತ್ಸವದಂದು ಎಂಇಎಸ್ ನಿಂದ ನಾಡದ್ರೋಹಿ ಘೋಷಣೆ, ಪುಂಡಾಟಿಕೆ
ಎಂಇಎಸ್ ಕರಾಳ ದಿನಾಚರಣೆಗೆ ತಡೆಯೊಡ್ಡಿದ ಹಿನ್ನೆಲೆಯಲ್ಲಿ ನಗರದಲ್ಲಿ ಪ್ರತಿಭಟನಾ ಸಭೆ ನಡೆಸುತ್ತಿರುವ ಎಂಇಎಸ್, ಶಿವಸೇನೆ ಮುಖಂಡರು ನಾಡದ್ರೋಹಿ ಘೋಷಣೆ ಕೂಗಿ ಪುಂಡಾಟಿಕೆ ಮೆರೆದರು.
ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಭಾಲ್ಕಿ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಬೇಕೆಂದು ಘೋಷಣೆ ಕೂಗಿದರು. ಬೆಳಗಾವಿಯ ಮರಾಠಾ ಮಂದಿರ ಮಂಗಲ ಕಾರ್ಯಾಲಯದಲ್ಲಿ ಎಂಇಎಸ್ ಸಭೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.