ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಳ : ಸಚಿವ ಸುರೇಶ್‌ ಕುಮಾರ್‌


Team Udayavani, Nov 1, 2020, 6:58 PM IST

ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಳ : ಸಚಿವ ಸುರೇಶ್‌ ಕುಮಾರ್‌

ಬೆಂಗಳೂರು: ಕಳೆದ 14 ವರ್ಷದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹೇಳಿದರು.

ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೋವಿಡ್ ಅವಧಿಯಲ್ಲಿ ದುರ್ಬಲ ಕುಟುಂಬಗಳ ಮಕ್ಕಳು, ಪಾಲಕ, ಪೋಷಕರು ಸರ್ಕಾರಿ ಶಾಲೆಯತ್ತ ಮುಖ ಮಾಡಿದ್ದಾರೆ. ಸುಮಾರು 90 ಸಾವಿರ ಮಕ್ಕಳು ಈಗಾಗಲೇ ಸರ್ಕಾರಿ ಶಾಲೆಗಳಿಗೆ ಸೇರ್ಪಡೆಯಾಗಿದ್ದಾರೆ. ಇದು ಕಳೆದ 14 ವರ್ಷಗಳಲ್ಲಿ ಸರ್ಕಾರಿ ಶಾಲೆಯ ದಾಖಲಾತಿ ಇದೇ ಮೊದಲ ಬಾರಿಗೆ ಗಣನೀಯವಾಗಿ ಹೆಚ್ಚಾಗಿದೆ ಎಂದರು.

ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ರಾಜ್ಯ ಸರ್ಕಾರ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಮುಂದೆ ಸಾಗುತ್ತಿದೆ. ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ನಮ್ಮ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ಸಲುವಾಗಿ ಉಭಯ ಮಾಧ್ಯಮ ಶಾಲೆಗಳನ್ನು ಆರಂಭಿಸಲಾಗಿದೆ. ಉಭಯ ಮಾಧ್ಯಮ ಶಾಲೆಗಳು ಕನ್ನಡದ ವಾತಾವರಣದಲ್ಲಿ ಆಂಗ್ಲಭಾಷೆಯನ್ನು ಕಲಿಯುವ ನಮ್ಮ ವಿದ್ಯಾರ್ಥಿಗಳನ್ನು ಜಾಗತಿಕ ಸ್ಪರ್ಧೆಗಳನ್ನು ಎದುರಿಸಲು ಸಜ್ಜುಗೊಳಿಸುವ ಉದಾತ್ತ ನಿಲುವು ಹೊಂದಿವೆ ಎಂದು ಹೇಳಿದರು.

ವಿಶ್ವದಲ್ಲಿ ಅದೆಷ್ಟೋ ಭಾಷೆಗಳು ಅವಸಾನ ಕಂಡಿವೆ. ಅದಕ್ಕೆಲ್ಲ ಭಾಷೆ ಮತ್ತು ನುಡಿಯ ಮೇಲಿನ ನಿಷ್ಕಾಳಜಿ ಕಾರಣವಾಗಿದೆ. ಕನ್ನಡ ಭಾಷೆ ಪ್ರತಿದಿನವೂ ಪ್ರತಿ ಕ್ಷಣವೂ ಇನ್ನೂ ಗಟ್ಟಿಗೊಳ್ಳುತ್ತಲೇ ಸಾಗಿದೆ. ಕನ್ನಡಿಗರು ವಿಶ್ವದ ಯಾವುದೇ ಭಾಗದಲ್ಲಿರಲಿ, ನಾಡುನುಡಿಯ ಕುರಿತ ಕಾಳಜಿ ಹೊಂದುವ ಮೂಲಕ ತಾಯಿನುಡಿಗೆ ಗೌರವ ಸಲ್ಲಿಸಬೇಕು. ಈಗಲೂ ಕನ್ನಡ ಭಾಷೆ ಉಳಿದಿದೆ ಎಂದರೆ ಅದರ ಗಟ್ಟಿತನ ಮತ್ತು ನಮ್ಮ ಭಾಷೆ ಕುರಿತ ನಮ್ಮೆಲ್ಲರ ಕಾಳಜಿಯೇ ಕಾರಣ ಎಂದರು.

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮತ್ತು ಕನ್ನಡ ಭಾಷೆಯ ಉಳಿವಿಗಾಗಿ ಯಾವುದೇ ಭಾಷಿಕ ಹಿನ್ನೆಲೆಯ ಮಕ್ಕಳೂ ಸಹ ಕನ್ನಡವನ್ನು ಒಂದು ಭಾಷೆಯಾಗಿ ಕಲಿಯಲೇಬೇಕು ಎಂಬ ಕನ್ನಡ ಕಲಿಕಾ ಕಾಯ್ದೆ -2017ನ್ನು ಅನುಷ್ಠಾನಗೊಳಿಸುವಲ್ಲಿ ನಾವು ಕಠಿಣ ಕ್ರಮಗಳನ್ನು ಕೈಗೊಂಡಿದ್ದೇವೆ. ಈ ನೆಲದಲ್ಲಿ ಕಲಿಯುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಕನ್ನಡ ಕಲಿಯುವುದರೊಂದಿಗೆ ಕನ್ನಡದ ಜತೆ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಬೇಕು ಎಂಬುದು ಸರ್ಕಾರದ ನಿಲುವುವಾಗಿದೆ. ಕನ್ನಡ ಮಾಧ್ಯಮದ ಪಿಯುಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಪಿಯುಸಿ ವಿಜ್ಞಾನದ ಎನ್‌ಸಿಇಆರ್‌ಟಿ ಪುಸ್ತಕಗಳನ್ನು ಕನ್ನಡ ಮಾಧ್ಯಮದಲ್ಲಿ ತಯಾರು ಮಾಡಿ ನೀಡಿದ್ದೇವೆ ಎಂದರು.

ಸರಳವಾಗಿ ನಡೆದ ಕಾರ್ಯಕ್ರಮ: 
ಕನ್ನಡ ರಾಜ್ಯೋತ್ಸ ಕಾರ್ಯಕ್ರಮ ಪ್ರತಿ ವರ್ಷ ಕಂಠೀರವ ಕ್ರೀಡಾಂಗಣದಲ್ಲಿ ಬಹಳ ಅದ್ಧೂರಿಯಾಗಿ ನಡೆಯುತಿತ್ತು. ಬೆಂಗಳೂರು ನಗರದ ವಿವಿಧ ಭಾಗದ ಶಾಲಾ ಮಕ್ಕಳಿಂದ ನಾನಾ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನಗೊಳ್ಳುತ್ತಿದ್ದವು. ಈ ಬಾರಿ ಕೊರೊನಾ ಕಾರಣದಿಂದ ಯಾವುದೇ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮ ಇರಲಿಲ್ಲ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಾಯಿ ಭುವನೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ, ಸಭಾ ಕಾರ್ಯಕ್ರಮ ನಡೆಸಿದರು. ಒಂದು ಗಂಟೆಯ ಅವಧಿಯಲ್ಲಿ ಸರಳ ಕಾರ್ಯಕ್ರಮ ಮುಗಿದಿತ್ತು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲಿಸಿದ್ದರು

ಟಾಪ್ ನ್ಯೂಸ್

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.