ಚಾಮರಾಜನಗರ :16 ಮಂದಿಗೆ ಕೋವಿಡ್ ಸೋಂಕು ದೃಢ! 15 ಮಂದಿ ಗುಣಮುಖ
Team Udayavani, Nov 1, 2020, 7:34 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ ಹೊಸದಾಗಿ 16 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. 15 ಮಂದಿ ಗುಣಮುಖರಾಗಿದ್ದಾರೆ. ಓರ್ವ ವೃದ್ಧರು ಮೃತಪಟ್ಟಿದ್ದಾರೆ.
ಚಾಮರಾಜನಗರ ತಾಲೂಕು ರೇಚಂಬಳ್ಳಿ ಗ್ರಾಮದ 85 ವರ್ಷದ ವೃದ್ಧರು ಅ. 20ರಂದು ನಗರದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅ. 31ರಂದು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಜಿಲ್ಲೆಯಲ್ಲಿ ಒಟ್ಟು 5980 ಮಂದಿ ಸೋಂಕಿಗೊಳಗಾಗಿದ್ದಾರೆ. ಇವರಲ್ಲಿ 5628 ಮಂದಿ ಗುಣಮುಖರಾಗಿದ್ದಾರೆ. 228 ಸಕ್ರಿಯ ಪ್ರಕರಣಗಳಿವೆ. 105 ಮಂದಿ ಕೋವಿಡ್ನಿಂದ 19 ಮಂದಿ ಕೋವಿಡ್ ಅಲ್ಲದ ಕಾರಣದಿಂದ ಮೃತಪಟ್ಟಿದ್ದಾರೆ. 40 ಮಂದಿ ಐಸಿಯುನಲ್ಲಿದ್ದಾರೆ. 129 ಮಂದಿ ಹೋಂ ಐಸೋಲೇಷನ್ಲ್ಲಿದ್ದಾರೆ.
ಭಾನುವಾರ 1029 ಮಾದರಿಗಳನ್ನು ಪರೀಕ್ಷಿಸಲಾಗಿತ್ತು. ಇದರಲ್ಲಿ 16 ಮಾತ್ರ ಪಾಸಿಟಿವ್ ಬಂದಿದೆ. ಚಾಮರಾಜನಗರ ತಾಲೂಕಿನಿಂದ 4, ಗುಂಡ್ಲುಪೇಟೆ ತಾಲೂಕಿನಿಂದ 8, ಕೊಳ್ಳೇಗಾಲ ತಾಲೂಕಿನಿಂದ 3, ಯಳಂದೂರು ತಾಲೂಕಿನಿಂದ 1 ಪ್ರಕರಣ ವರದಿಯಾಗಿದೆ.
ಇದನ್ನೂ ಓದಿ:ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಾಧಿಗಳ ಸೇವೆಗೆ ವಿಧಿಸಿದ್ದ ನಿರ್ಬಂಧ ಸಡಿಲಿಕೆ : ಡಿಸಿ ಆದೇಶ
ಇಂದಿನ ಪ್ರಕರಣಗಳು: 16
ಇಂದು ಗುಣಮುಖ: 15
ಒಟ್ಟು ಗುಣಮುಖ: 5628
ಇಂದಿನ ಸಾವು: 01
ಒಟ್ಟು ಸಾವು: 124
ಸಕ್ರಿಯ ಪ್ರಕರಣಗಳು: 228
ಒಟ್ಟು ಸೋಂಕಿತರು: 5980
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.