ಶಿರಸಿ ನಗರಸಭೆಗೆ ಗಣಪತಿ ಅಧ್ಯಕ್ಷ-ವೀಣಾ ಉಪಾಧ್ಯಕ್ಷೆ


Team Udayavani, Nov 1, 2020, 8:40 PM IST

ಶಿರಸಿ ನಗರಸಭೆಗೆ ಗಣಪತಿ ಅಧ್ಯಕ್ಷ-ವೀಣಾ ಉಪಾಧ್ಯಕ್ಷೆ

ಶಿರಸಿ: ಜಿಲ್ಲೆಯ ಪ್ರತಿಷ್ಠಿತ ಶಿರಸಿ ನಗರ ಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಗಾದಿಗೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಗಣಪತಿ ನಾಯ್ಕ ಹಾಗೂ ಉಪಾಧ್ಯಕ್ಷೆಯಾಗಿ ವೀಣಾ ಶೆಟ್ಟಿ ಆಯ್ಕೆಯಾಗಿದ್ದಾರೆ.

ಇವರಿಬ್ಬರೂ ಅವಿರೋಧವಾಗಿ ಆಯ್ಕೆಯಾಗುತ್ತಾರೆ ಎಂದು ನೀರಿಕ್ಷಿಸಲಾಗಿತ್ತಾದರೂ ಅಂತಿಮ ಕ್ಷಣದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ನಿಂದ ಪ್ರದೀಪ ಶೆಟ್ಟಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಶಮೀನಾ ಬಾನು ನಾಮಪತ್ರ ಸಲ್ಲಿಸಿದ್ದರಿಂದ ಅನಿವಾರ್ಯವಾಗಿ ಚುನಾವಣೆ ನಡೆಯಿತು.

ನಂತರ ಕೈ ಎತ್ತುವುದರ ಮೂಲಕ ನಡೆದ ಚುನಾವಣೆಯಲ್ಲಿ ಗಣಪತಿ ನಾಯ್ಕ 18 ಮತ ಪಡೆದು ಪ್ರತಿಸ್ಪರ್ಧಿ ಪ್ರದೀಪ ಶೆಟ್ಟಿ ವಿರುದ್ಧ 10 ಮತಗಳ ಅಂತರದಿಂದ ವಿಜಯದ ಮಾಲೆ ಧರಿಸಿದರು. ವೀಣಾ ಶೆಟ್ಟಿಯವರಿಗೆ 18 ಹಾಗೂ ಪ್ರತಿಸ್ಪರ್ಧಿ ಶಮೀನಾ ಬಾನುಗೆ 10 ಮತಗಳು ಬಿದ್ದ ಪರಿಣಾಮ ವೀಣಾ ಶೆಟ್ಟಿ ಸುಲಭವಾಗಿ ಉಪಾಧ್ಯಕ್ಷ ಹುದ್ದೆ ಏರಿದರು. ಮೂವರು ಸದಸ್ಯರು ತಟಸ್ಥವಾಗಿದ್ದರು. ಇದರೊಂದಿಗೆ ಬಿಜೆಪಿ 2008ರ ನಂತರ ಮತ್ತೂಮ್ಮೆ ನಗರಸಭೆ ಚುಕ್ಕಾಣಿ ಹಿಡಿದಿದೆ. ಬೆಳಗ್ಗೆ 11ಕ್ಕೆ ಆರಂಭವಾದ ಚುನಾವಣೆ ಪ್ರಕ್ರಿಯೆ ಸುಮಾರು 4 ಗಂಟೆಗೆ ಪೂರ್ಣಗೊಂಡಿತು. ಚುನಾವಣಾ ಅಧಿಕಾರಿಯಾಗಿ ಎಸಿ ಆಕೃತಿ ಬನ್ಸಾಲ್‌ ನಿರ್ವಹಿಸಿದರು. ನಗರಸಭೆ ಪೌರಾಯುಕ್ತ ರಮೇಶ ನಾಯಕ್‌ ಹಾಗೂ ಕಾಂಗ್ರೆಸ್‌ ಸದಸ್ಯರು, ಬಿಜೆಪಿಗರು ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಹೊರಗಡೆ ಅಭಿನಂದಿಸಿದರು.

ಸಮಸ್ಯೆ ನಿವಾರಣೆಗೆ ಮೊದಲ ಆದ್ಯತೆ: ನಗರದ ಮೂಲ ಸಮಸ್ಯಗಳ ನಿವಾರಣೆಗೆ ಮೊದಲ ಆದ್ಯತೆ ನೀಡುತ್ತೇನೆ ಎಂದು ನಗರಸಭೆ ನೂತನ ಅಧ್ಯಕ್ಷ ಆಯ್ಕೆ ಗಣಪತಿ ನಾಯ್ಕ ತಿಳಿಸಿದರು. ನಗರದಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ, ಬೀದಿ ದೀಪ, ಫಾರಂ ನಂಬರ ಮೂರು ಹೀಗೆ ಅನೇಕ ಜಲ್ವಂತ ಸಮಸ್ಯಗಳಿವೆ. ಇದನ್ನು ಎಲ್ಲಾ ನಗರಸಭೆ ಸದಸ್ಯರ ಸಹಕಾರದೊಂದಿಗೆ ಬಗೆಹರಿಸುವ ವಿಶ್ವಾಸವಿದೆ. ನನ್ನನ್ನು ಅಧ್ಯಕ್ಷರನ್ನಾಗಿ ಆಯ್ಕೆಮಾಡಲು ಸಹಕರಿಸಿದ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಸದ ಅನಂತಕುಮಾರ ಹೆಗಡೆ, ಎಲ್ಲಾ ನಗರಸಭೆ ಸದಸ್ಯರಿಗೆ, ಕಾರ್ಯಕರ್ತರಿಗೆ ಮತದಾರರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ವೀಣಾ ಶೆಟ್ಟಿ, ನಾನು ಮೂರು ಬಾರಿ ಆಯ್ಕೆಯಾಗಿದ್ದರಿಂದ ನಗರ ಸಮಸ್ಯಗಳ ಬಗ್ಗೆ ಅರಿವಿದೆ. ಇದನ್ನು ಆದ್ಯತೆ ಮೆರೆಗೆ ಪರಿಹಾರ ಕಂಡು ಹಿಡಿಯಲು ಪ್ರಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು.

ಟಾಪ್ ನ್ಯೂಸ್

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

7-dandeli

Dandeli: ಗಾಂಜಾ ಅಕ್ರಮ ಮಾರಾಟ ಯತ್ನ; ಮಾಲು ಸಹಿತ ಆರೋಪಿಯ ಬಂಧನ

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

5-1

Mundgod: ಹಾವು ಕಡಿದು ಅಂಗನವಾಡಿ ಬಾಲಕಿ ಸಾವು

1-up

Dandeli; ಕುಸಿದು ಬಿದ್ದು ಯುಪಿ ಮೂಲದ ಯುವಕ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.