ಇಂದು ಮತ ಸಮರ; ಶಿರಾ, ಆರ್.ಆರ್. ನಗರ ಕ್ಷೇತ್ರಕ್ಕೆ ಹಕ್ಕು ಚಲಾವಣೆ
Team Udayavani, Nov 3, 2020, 6:21 AM IST
ಬೆಂಗಳೂರು: ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ರಾಜಕೀಯ ಜಿದ್ದಾಜಿದ್ದಿ ಜತೆಗೆ ಆಯಾ ಪಕ್ಷಗಳ ಮುಖಂಡರು ತಮ್ಮ ಪ್ರತಿಷ್ಠೆಯನ್ನು ಪಣಕ್ಕಿಟ್ಟಿರುವ ಶಿರಾ ಮತ್ತು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಮಂಗಳವಾರ, ನ. 3ರಂದು ಮತದಾನ ನಡೆಯಲಿದೆ.
ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸಹಿತ 31 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇವರೆಡು ಕ್ಷೇತ್ರಗಳ 6.78 ಲಕ್ಷ ಮತದಾರರು ಅಭ್ಯರ್ಥಿಗಳ ಹಣೆಬರಹ ಬರೆಯಲಿದ್ದಾರೆ. ಬೆಳಗ್ಗೆ 7ರಿಂದ ಸಂಜೆ 6ರ ವರೆಗೆ 1,008 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. 3,821 ಇವಿಎಂ ಮತ್ತು 2,251 ವಿವಿಪ್ಯಾಟ್‌ಗಳನ್ನು ಮತದಾನಕ್ಕೆ ಬಳಸಿಕೊಳ್ಳಲಾಗುತ್ತದೆ.
ಶಿರಾ ಕ್ಷೇತ್ರದಲ್ಲಿ 15 ಅಭ್ಯರ್ಥಿಗಳು ಕಣದಲ್ಲಿದ್ದು, ಮತದಾನಕ್ಕೆ 330 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 801 ಇವಿಎಂ ಮತ್ತು ವಿವಿಪ್ಯಾಟ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ 678 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತದಾನಕ್ಕೆ 1,458 ಇವಿಎಂ-ವಿವಿಪ್ಯಾಟ್‌ಗಳನ್ನು ಬಳಸಲಾಗುತ್ತದೆ. 9,515 ಚುನಾವಣ ಸಿಬಂದಿಯನ್ನು ನಿಯೋಜಿಸಲಾಗಿದೆ.
ಅಂತಿಮ ಕಸರತ್ತು
ತೀವ್ರ ಕುತೂಹಲ ಮೂಡಿಸಿರುವ ಶಿರಾ ಮತ್ತು ರಾಜ ರಾಜೇಶ್ವರಿ ನಗರ ಉಪ ಚುನಾವಣೆಯ ಮತದಾನ ನಡೆಯುವ ಮುನ್ನಾ ದಿನವಾದ ಸೋಮವಾರವೂ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಮತಯಾಚನೆ ಮೂಲಕ ಅಂತಿಮ ಹಂತದ ಕಸರತ್ತು ನಡೆಸಿದರು.
ಡಿ. 1ರಂದು ರಾಜ್ಯಸಭೆ ಚುನಾವಣೆ
ಅಶೋಕ್ ಗಸ್ತಿ ನಿಧನದಿಂದ ತೆರವಾಗಿರುವ ರಾಜ್ಯಸಭೆ ಸ್ಥಾನಕ್ಕೆ ಡಿ. 1ಕ್ಕೆ ಚುನಾವಣೆ ನಿಗದಿ ಯಾಗಿದೆ. ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆ ಹೆಚ್ಚಾಗಿದೆ. ನ. 11ಕ್ಕೆ ಚುನಾವಣೆ ಅಧಿಸೂಚನೆ ಹೊರಬೀಳಲಿದ್ದು, ನ. 18 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ನ. 19ರಂದು ನಾಮಪತ್ರ ಪರಿಶೀಲನೆ, ನ. 23ರಂದು ನಾಮಪತ್ರ ವಾಪಸಾತಿಗೆ ಕೊನೇ ದಿನ. ಡಿ. 1ರಂದು ಬೆಳಗ್ಗೆ 9ರಿಂದ ಸಂಜೆ 4ರ ವರೆಗೆ ಮತ ದಾನ ನಡೆಯಲಿದ್ದು, ಅದೇ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ. ಅಶೋಕ್ ಗಸ್ತಿ ಅವರ ರಾಜ್ಯಸಭೆ ಸದಸ್ಯತ್ವ ಅವಧಿ 2026ರ ಜೂ. 25ರ ವರೆಗೆ ಇತ್ತು.
ಬಿಹಾರದಲ್ಲಿಂದು 2ನೇ ಹಂತ
ಬಿಹಾರ ವಿಧಾನಸಭೆಯ 2ನೇ ಹಂತದ ಹಕ್ಕು ಚಲಾವಣೆ ಮಂಗಳವಾರ ನಡೆಯಲಿದೆ. 17 ಜಿಲ್ಲೆಗಳ 94 ವಿಧಾನಸಭಾ ಕ್ಷೇತ್ರಗಳಲ್ಲಿ ಇರುವ 2.85 ಕೋಟಿ ಮತದಾರರು ಸಿಎಂ ನಿತೀಶ್ ಕುಮಾರ್ ಸಂಪುಟದಲ್ಲಿನ ನಾಲ್ವರು ಸಚಿವರು, ರಾಘವಪುರ ಕ್ಷೇತ್ರದಿಂದ ಸ್ಪರ್ಧಿಸಿರುವ ಆರ್‌ಜೆಡಿ ನಾಯಕ ತೇಜಸ್ವಿ ಪ್ರಸಾದ್ ಯಾದವ್, ಸಚಿವರಾಗಿರುವ ರಾಮ್ ಸೇವಕ್ ಸಿಂಗ್, ರಾಣಾ ರಣಬೀರ್ ಸಿಂಗ್, ನಂದಕಿಶೋರ್ ಯಾದವ್ ಸಹಿತ 1,500 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.