ಸ್ಯಾಂಡಲ್ ವುಡ್ ಡ್ರಗ್ ಪ್ರಕರಣ: ಸಂಜನಾ- ರಾಗಿಣಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್
Team Udayavani, Nov 3, 2020, 2:39 PM IST
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಜಾಮೀನು ನಿರಾಕರಿಸಿ ಹೈಕೋರ್ಟ್ ಆದೇಶಿಸಿದೆ.
ಕಳೆದ ಎರಡು ತಿಂಗಳಿನಿಂದ ಪರಪ್ಪನ ಅಗ್ರಹಾರ ಸೇರಿರುವ ನಟಿಯರಿಬ್ಬರು ಸಲ್ಲಿಸಿದ್ದ ಜಾಮೀನು ಅರ್ಜಿ ಕುರಿತು ನ್ಯಾಯಾಲಯ ವಾದ-ಪ್ರತಿವಾದ ಆಲಿಸಿದೆ. ಈ ತೀರ್ಪು ಕಾಯ್ದಿರಿಸಿದ್ದು, ಇಂದು ಮಧ್ಯಾಹ್ನ ನ್ಯಾ. ಶ್ರೀನಿವಾಸ್ ಹರೀಶ್ ಕುಮಾರ್ ಅವರನ್ನೊಳಗೊಂಡ ಏಕಸದಸ್ಯ ನ್ಯಾಯಪೀಠ ತೀರ್ಪು ನೀಡಿದೆ. ಹೀಗಾಗಿ ನಟಿಮಣಿಯರಿಬ್ಬರೂ ಇನ್ನಷ್ಟು ದಿನಗಳ ಕಾಲ ಪರಪ್ಪನ ಅಗ್ರಹಾರದಲ್ಲೇ ಕಾಲ ಕಳೆಯಬೇಕಾದ ಪರಿಸ್ಥಿತಿ ಎದುರಾಗಿದೆ.
ಡ್ರಗ್ ಪ್ರಕರಣದಲ್ಲಿ ನಟಿಯರನ್ನು ವಿಚಾರಣೆ ನಡೆಸಿದ್ದ ಸಿಸಿಬಿ ಪೊಲೀಸರು ನಂತರ ಬಂಧಿಸಿದ್ದರು. ಸೆ.4ರಂದು ರಾಗಿಣಿಯನ್ನು ಬಂಧಿಸಿದ್ದರೆ, ಸೆ.11ರಂದು ಸಂಜನಾರನ್ನು ಬಂಧಿಸಲಾಗಿತ್ತು.
ಇದನ್ನೂ ಓದಿ:ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ
ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿರುವ ಶಿವಪ್ರಸಾದ್ ಮತ್ತು ಆದಿತ್ಯ ಆಳ್ವ ತಲೆಮರೆಸಿಕೊಂಡಿದ್ದು, ಸಿಸಿಬಿ ಅಧಿಕಾರಿಗಳು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.