ಪ್ರವಾಹ ಬಂದು ಹೋದ ಮೇಲೆ..!

ಕಾಣದಾಗಿವೆ ಗ್ರಾಮೀಣ ರಸ್ತೆ-ಜಮೀನಿನ ಸರಹದ್ದು,ಚಾಲಕರಿಗೆ ಯಮಸ್ವರೂಪಿಯಾದ ಹೆದ್ದಾರಿಗಳು

Team Udayavani, Nov 3, 2020, 5:40 PM IST

ಪ್ರವಾಹ ಬಂದು ಹೋದ ಮೇಲೆ..!

ಅಫಜಲಪುರ: ತಿಂಗಳ ಹಿಂದೆ ಸುರಿದ ಮಳೆ ಹಾಗೂ ಪ್ರವಾಹದಿಂದ ತತ್ತರಿಸಿದ ತಾಲೂಕಿನ 48 ಹಳ್ಳಿಗಳ ರಸ್ತೆಗಳು, ಹೊಲಗಳು ಸಂಪೂರ್ಣ ಹದಗೆಟ್ಟು ಹೋಗಿದ್ದು, ದುರಸ್ತಿಗಾಗಿ ಹಾತೊರೆಯುತ್ತಿವೆ.

ಮಹಾರಾಷ್ಟ್ರದ ಉಜನಿ ಮತ್ತು ವೀರ ಜಲಾಶಯ(ಶೀನಾ ನದಿ)ದಿಂದ ಸೊನ್ನ ಬ್ಯಾರೇಜ್‌ಗೆ ಬಂದ ನೀರು, ಉಸ್ಮಾನಾಬಾದ ಹತ್ತಿರವಿರುವ ಕುರನೂರುಬ್ಯಾರೇಜ್‌ನಿಂದ ಅಮರ್ಜಾ ಹಾಗೂ ಬೋರಿ ನಾಲಾಕ್ಕೆ ಹರಿದು ಬರುವ ನೀರು ಹಾಗೂ ಭೀಮಾ ನದಿಯ ಹಿನ್ನೀರು (ಘತ್ತರಗಾ, ಮೋರಟಗಿ, ದೇವಲಗಾಣಗಾಪುರ, ಜೇರಟಗಿ, ಚಿನಮಳ್ಳಿಯಿಂದ ನೆಲೋಗಿ ಹೆಚ್ಚಾದ ನೀರು), ಬೋರಿ ಹಳ್ಳದಿಂದ ಹರಿದು ಬಂದ ನೀರು ತಾಲೂಕಿನ ರಾಷ್ಟ್ರೀಯ, ರಾಜ್ಯ ಹಾಗೂ ಗ್ರಾಮೀಣ ರಸ್ತೆಗಳನ್ನೆಲ್ಲ ಹಾಳುವೆಡವಿದೆ. ಅಳ್ಳಗಿ, ಬಂಕಲಗಾ, ಉಡಚಣ, ನಂದರಗಾ, ಹಿರೇಜೇವರ್ಗಿ, ಅಳ್ಳಗಿ (ಬಿ), ಮಣೂರ, ಶಿವಪುರ, ಹಿಂಚಗೇರಾ, ಬನ್ನಟ್ಟಿ, ಹವಳಗಾ, ಕೊಳ್ಳೂರ, ಘತ್ತರಗಿ, ದೇವಲಗಾಣಗಾಪುರ ಸಂಗಮ, ಬಂದರವಾಡ, ಸಂಗಾಪುರ, ಉಮ್ಮರಗಿ ಸೇರಿದಂತೆ ತಾಲೂಕಿನ 48 ಗ್ರಾಮಗಳು ಜಲಾವೃತವಾಗಿದ್ದವು. ಪ್ರವಾಹ ಬಂದ ಸಂದರ್ಭದಲ್ಲಿ ಅನೇಕ ಹಳ್ಳಿಗಳ ಜನರು ಗಂಜಿ ಕೇಂದ್ರಗಳನ್ನು ಸೇರಿಕೊಳ್ಳುವಂತಾಗಿತ್ತು. ಸದ್ಯ ಕೆಲ ಗ್ರಾಮಗಳ ನಿವಾಸಿಗಳು ತಮ್ಮ ಗ್ರಾಮಕ್ಕೆ ರಸ್ತೆಗಳೆಲ್ಲಿವೆ, ಹೊಲ-ಗದ್ದೆಗಳಿಗೆ ಹೋಗುವುದು ಹೇಗೆ ಎಂದು ಹುಡುಕುವಂತಾಗಿದೆ. ಅಲ್ಲದೇ ಆಸ್ತಿ ಕಳೆದುಕೊಂಡು ಗೋಳಾಡುವಂತಾಗಿದೆ.

ಇನ್ನೊಂದೆಡೆ ಪ್ರವಾಹದ ಅಬ್ಬರಕ್ಕೆ ತಾಲೂಕಿನ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳು ಹಾನಿಗೀಡಾಗಿವೆ. ತಾಲೂಕಿನ ಬಾದನಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಮಣ್ಣು ಕುಸಿದಿದೆ. ಮಣ್ಣು ಕುಸಿತದಿಂದ ಸಿಮೆಂಟ್‌ ಹೆದ್ದಾರಿ ಮೇಲೆ ಕೆಳಗಾಗಿದೆ. ಅನೇಕ ಕಡೆ ದೊಡ್ಡ ಪ್ರಮಾಣದ ಬಿರುಕುಗಳು ಕಾಣಿಸಿಕೊಂಡಿವೆ. ದ್ವಿಚಕ್ರ, ತ್ರಿಚಕ್ರ ವಾಹನ ಸವಾರರಿಗೆ ಈ ರಸ್ತೆ ಯಮಸ್ವರೂಪಿಯಾಗಿ ಕಾಣಿಸುತ್ತಿದೆ. ಉಳಿದಂತೆ ತಾಲೂಕಿನ ಮಾಶಾಳ, ದಿಕ್ಸಂಗಾ, ಸಂಗಾಪುರ, ಭೂಂಯಾರ, ಚವಡಾಪುರ, ಚಿನಮಳ್ಳಿ, ಹಾವಳಗಾ ಸೇರಿದಂತೆ ಅನೇಕ ಗ್ರಾಮಗಳ ರಸ್ತೆಗಳು ಹದಗೆಟ್ಟು ಹೋಗಿವೆ. ಪ್ರವಾಹ ತಗ್ಗಿದ ಮೇಲೆ ಗ್ರಾಮಗಳಿಗೆ ಹೋಗುವ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಸಂಬಂಧ ಪಟ್ಟ ಇಲಾಖೆಗಳು ದುರಸ್ತಿ ಕೆಲಸ ಮಾಡಬೇಕು ಎಂದು ಪ್ರವಾಹ ಸಂತ್ರಸ್ತರು, ವಾಹನ ಸವಾರರು, ಸಾರ್ವಜನಿಕರು ಮನವಿ ಮಾಡಿದ್ದಾರೆ.

ಪ್ರವಾಹದಿಂದ ಕಂಗೆಟ್ಟ ಜನರು ತಮ್ಮೂರಿಗೆ ತೆರಳಲು ರಸ್ತೆಗಳು ಉಳಿದಿಲ್ಲ ಎಂದು ಕಂಗಾಲಾಗಿದ್ದಾರೆ. ಸರ್ಕಾರ, ಜನಪ್ರತಿನಿಧಿಗಳು ಕೂಡಲೇ ರಸ್ತೆಗಳನ್ನು ನಿರ್ಮಿಸಿ, ಜನರ ಸಂಕಷ್ಟಕ್ಕೆ ಸ್ಪಂದಿಸಬೇಕು.  -ರಾಜೇಂದ್ರ ಪಾಟೀಲ, ರೇವೂರ ಬಿ., ಕಾಂಗ್ರೆಸ್‌ ಮುಖಂಡ

ಲೋಕೋಪೋಯೋಗಿ, ಪಂಚಾಯತ್‌ರಾಜ್‌ ಇಂಜಿನಿಯರಿಂಗ್‌ ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಕ್ರಮ ಕೈಗೊಳ್ಳುವಂತೆ ಸೂಚಿಸುತ್ತೇನೆ.  -ನಾಗಮ್ಮ, ತಹಶೀಲ್ದಾರ್‌

 

-ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ: ಗಂಗೂಲಿ

Sourav Ganguly: ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

byndoor

Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.