![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Nov 4, 2020, 9:25 AM IST
ಮುಂಬೈ: 2018 ರಲ್ಲಿ ನಡೆದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಅವರ ಸಾವಿಗೆ ಸಂಬಂಧಿಸಿದಂತೆ, ಅಲಿಬಾಗ್ ಪೊಲೀಸರು ಬುಧವಾರ ಬೆಳಿಗ್ಗೆ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರನ್ನು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗೋಸ್ವಾಮಿಯನ್ನು ಬಂಧಿಸಲಾಗಿದೆ ಎಂದು ಖಚಿತಪಡಿಸಿದ್ದಾರೆ. ಟಿ ಆರ್ ಪಿ ಹಗರಣದ ಬೆನ್ನಲ್ಲೇ ಆತ್ಮಹತ್ಯೆ ಪ್ರಚೋದನೆ ಆರೋಪದ ಮೇಲೆ ಅರ್ನಬ್ ಬಂಧಿತರಾಗಿರುವುದು ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಮೇ 2018 ರಲ್ಲಿ ಅಲಿಬಾಗ್‌ನಲ್ಲಿ 53 ವರ್ಷದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಮಾತ್ರವಲ್ಲದೆ ಡೆತ್ ನೋಟ್ ನಲ್ಲಿ ಅನ್ವಯ್ ಕುಮಾರ್, ತನ್ನ ಸಾವಿಗೆ ಫಿರೋಜ್ ಶೇಕ್ ಮತ್ತು ನಿತೀಶ್ ಸಾರ್ದ ಹಾಗೂ ಅರ್ನಬ್ ಗೋಸ್ವಾಮಿ ಅವರೇ ಕಾರಣ ಎಂದು ತಿಳಿಸಿದ್ದರು. ಈ ಮೂವರು ತನಗೆ 5.40 ಕೋಟಿ ಹಣವನ್ನು ಪಾವತಿಸದೆ, ಹಣಕಾಸಿನ ನಿರ್ಬಂಧ ಹೇರಿದ್ದಾರೆ ಎಂದು ಆರೋಪಿಸಿದ್ದರು.
ಇದನ್ನೂ ಓದಿ: ಕಂಗನಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಹಿರಿಯ ಸಾಹಿತಿ ಜಾವೇದ್ ಅಖ್ತರ್
#WATCH Republic TV Editor Arnab Goswami detained and taken in a police van by Mumbai Police, earlier today pic.twitter.com/ytYAnpauG0
— ANI (@ANI) November 4, 2020
2018ರಲ್ಲಿ ಅಲಿಭಾಗ್ ಪೊಲೀಸರು ಆತ್ಮಹತ್ಯೆ ಪ್ರಚೋದನೆ ಪ್ರಕರಣ ದಾಖಲಿಸಿಕೊಂಡಿದ್ದರು. ಆದರೇ 2019 ರಲ್ಲಿ ರಾಯಗಢ ಪೊಲೀಸರು ಪ್ರಕರಣಕ್ಕೆ ತೆರೆ ಎಳೆದಿದ್ದರು. ಮೇ 2020 ರಲ್ಲಿ ಅನ್ವಯ್ ನಾಯಕ್ ಮಗಳಾದ ಆದನ್ಯಾ ನಾಯಕ್, ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರಲ್ಲಿ ವಿನಂತಿಸಿಕೊಂಡಿದ್ದರು. ಈ ವೇಳೆ ಅನ್ವಯ್ ಪತ್ನಿ ಅಕ್ಷತಾ ಕೂಡ ಅರ್ನಬ್ ಗೋಸ್ವಾಮಿ ವಿರುದ್ಧ ಆತ್ಮಹತ್ಯೆ ಪ್ರಚೋದನೆ ಪ್ರಕರಣ ದಾಖಲಿಸಿದ್ದರಿಂದ, ಇದೀಗ ಖ್ಯಾತ ಪತ್ರಕರ್ತನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: ಮದುವೆಗಾಗಿ ಮತಾಂತರ ನಿಷೇಧ? ರಾಜ್ಯದಲ್ಲೂ ಕಾಯ್ದೆ ಜಾರಿಗೆ ನಿರ್ಧಾರ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.