ಜವಳಿ ಪಾರ್ಕ್‌ ಆರಂಭಿಸಲು ನೋಡಲ್‌ ಅಧಿಕಾರಿ ನೇಮಕ: ಬೊಮ್ಮಾಯಿ

Team Udayavani, Nov 4, 2020, 9:24 PM IST

hv-tdy-1

ಶಿಗ್ಗಾವಿ: ಹಾವೇರಿ ಜಿಲ್ಲೆಯಲ್ಲಿ ಟೆಕ್ಸ್‌ಟೈಲ್‌ (ಜವಳಿ ಪಾರ್ಕ್‌)ಉದ್ಯಮ ಆರಂಭಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ನೋಡಲ್‌ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜವಳಿ ಪಾರ್ಕ್‌ ನಿರ್ಮಾಣಕ್ಕೆ ಅವಶ್ಯಕ ಮೂಲಭೂತ ಸೌಲಭ್ಯಗಳು, ವಿವಿಧ ಉತ್ಪಾದನಾ ಹಂತದ ಕಚ್ಚಾ ಪದಾರ್ಥಗಳ ಸಂಗ್ರಹಕ್ಕೆ ಜಾಗ, ನೂಲು ತಯಾರಿಕೆ, ಒಣಗಿಸುವಿಕೆ, ಉತ್ಪಾದನೆಯ ಎಲ್ಲಾ ಹಂತದ ಕಾರ್ಯಗಳಿಗೆ ಬೇಕಾದಷ್ಟು ಸೌಲಭ್ಯ ಅಲ್ಲದೇ, ಸಿದ್ಧವಸ್ತು ಮಾರ್ಕೆಟಿಂಗ್‌ ವ್ಯವಸ್ಥೆಗೆ ಅವಶ್ಯಕ ಜಾಗ, ಪಾರ್ಕಿಂಗ್‌ಗೆ ಜಿಲ್ಲಾಧಿಕಾರಿಗಳಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. ಮುಂಗಡ ಪತ್ರದಲ್ಲೂ ಸರ್ಕಾರ ಅಭಿವೃದ್ಧಿಗೆ ಅನುದಾನ ಮೀಸಲಿರಿಸಲಿದೆ. ಬರುವ ವರ್ಷ ಎಲ್ಲಾ ಕೆಲಸ ಪೂರ್ಣಗೊಳಿಸಲಾಗುವುದು. ಇದರಿಂದ ಉದ್ಯಮದ ಜತೆಗೆ ಸಾವಿರಾರು ಕಾರ್ಮಿಕರಿಗೆ ಉದ್ಯೋಗ ಸೃಷ್ಟಿ ಆಗಲಿದೆ ಎಂದರು.

ಶರೀಫ್‌ ಶಿವಯೋಗಿಗಳ ಪ್ರಾಧಿಕಾರ ರಚಿಸುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೊಸ ಪ್ರಾ ಧಿಕಾರ ರಚಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದರು. ಹಿಂದೂ-ಮುಸ್ಲಿಮರ ಭಾವೈಕ್ಯತೆಯ ಶ್ರದ್ಧಾಕೇಂದ್ರ ಶಿಶುವಿನಾಳ ಸಂತ ಶರೀಫ್‌ಶಿವಯೋಗಿಗಳ ಗದ್ದುಗೆಗೆ 5ಕೋಟಿ ರೂ. ಅನುದಾನ ನೀಡಲು ಡಿಪಿಆರ್‌ಗೆ ಅನುಮೋದನೆ ಸಲ್ಲಿಸಲಾಗಿದ್ದು, ಅಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಾಗುವುದು ಎಂದರು.

ಸಣ್ಣ ನೀರಾವರಿ ಇಲಾಖೆಗೆ 30 ಕೋಟಿ ಅನುದಾನ ನೀಡಲಾಗಿದ್ದು, ವಿವಿಧ ಹಂತದ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಟೆಂಡರ್‌ ಪ್ರಕ್ರಿಯೆ ಹಂತದಲ್ಲಿದೆ. ಅಲ್ಲದೇ ಮೂರು ಕೋಟಿ ರೂ. ವೆಚ್ಚದಲ್ಲಿ ಪಟ್ಟಣದ ಮಧ್ಯಭಾಗದ ಹಳೇ ಬಸ್‌ ನಿಲ್ದಾಣದಲ್ಲಿ ಹೊಸ ವಿನ್ಯಾಸದಲ್ಲಿ ವಾಣಿಜ್ಯ ಕಟ್ಟಡಗಳು ನಿರ್ಮಾಣವಾಗಲಿವೆ. ಜತೆಗೆ ಬಸ್‌ ನಿಲುಗಡೆಗೂ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಪಟ್ಟಣದಲ್ಲಿ ಕಿತ್ತೂರು ಚನ್ನಮ್ಮನ ಮೂರ್ತಿ ಪ್ರತಿಷ್ಠಾಪನೆ ಜತೆಗೆ ರಾಯಣ್ಣನ ಪ್ರತಿಮೆ ಸ್ಥಾಪಿಸಲಾಗುವುದು. ಡಾ| ಅಂಬೇಡ್ಕರ್‌, ಬೇರೆ ಮಹಾತ್ಮರು, ದಾರ್ಶನಿಕರ ಮೂರ್ತಿಪ್ರತಿಷ್ಠಾಪನೆಯ ಚರ್ಚೆಗಳಿದ್ದು, ಇನ್ನೂ ಪೂರ್ಣಗೊಂಡಿಲ್ಲ ಎಂದು ಬೊಮ್ಮಾಯಿ ತಿಳಿಸಿದರು.

ಟಾಪ್ ನ್ಯೂಸ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.