ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ಭೂಮಿ ಮಾರಾಟ ಜಾಲ ಬೆಳಕಿಗೆ
Team Udayavani, Nov 5, 2020, 11:25 AM IST
ಸಾಂದರ್ಭಿಕ ಚಿತ್ರ ಬಳಸಲಾಗಿದೆ.
ದೊಡ್ಡಬಳ್ಳಾಪುರ: ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಮಾರಾಟ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ದೊಡ್ಡಬಳ್ಳಾಪುರ ಉಪನೋಂದಣಾಧಿಕಾರಿ ದೇವರಾಜು ಅವರು ದೂರು ದಾಖಲಿಸಿದ್ದಾರೆ.
ನಗರ ಪೊಲೀಸ್ ಠಾಣೆಯಲ್ಲಿ ಉಪನೋಂದಣಾಧಿಕಾರಿಗಳು ನೀಡಿರುವ ದೂರಿನಲ್ಲಿ ದೇವನಹಳ್ಳಿ ತಾಲೂಕಿನ ಚಿಕ್ಕಜಾಲದ
ಕಾಡಿಗಾನಹಳ್ಳಿ, ದೊಡ್ಡಬಳ್ಳಾಪುರ ತಾಲೂಕಿನ ಬಚ್ಚಹಳ್ಳಿ,ಅರಳುಮಲ್ಲಿಗೆ ಕುಕ್ಕನಹಳ್ಳಿ ಗ್ರಾಮದ 7 ಎಕರೆ ಜಮೀನಿಗೆ ನಕಲಿ ಪತ್ರಗಳನ್ನು ಸೃಷ್ಟಿಯಾಗಿರುವ ಬಗ್ಗೆ ಮಾಹಿತಿ ನೀಡಲಾಗಿದೆ.
ಭೂಮಿ ಖರೀದಿದಾರರಲ್ಲಿ ತಲ್ಲಣ: ಉಪನೋಂದಣಾಧಿಕಾರಿಗಳಿಂದ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವುದರಿಂದ ತಾಲೂಕಿನಲ್ಲಿ ಜಮೀನು ಖರೀದಿಸಿರುವವರು ತಮ್ಮ ಜಮೀನಿನ ದಾಖಲೆಗಳ ನೈಜ್ಯತೆಯ ಬಗ್ಗೆ ಅನುಮಾನ ಪಡುವಂತಾಗಿದೆ.
ತಾಲೂಕು ಬೆಂಗಳೂರಿಗೆ ಸಮೀಪ ಇರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಾಸವಾಗಿರುವ ಬಹುತೇಕ ಜನ ಉದ್ಯಮಿಗಳು
ಸೇರಿದಂತೆ ವಿವಿಧ ವಲಯದಲ್ಲಿ ಹಣ ಉಳಿತಾಯ ಮಾಡಿರುವ ಮಂದಿ ಜಮೀನುಗಳನ್ನು ಖರೀದಿಸಿದ್ದಾರೆ. ಈಗಷ್ಟೇ ಈ ಪ್ರಕರಣ ಬೆಳಕಿಗೆ ಬಂದಿದ್ದು, ಜಮೀನಿನ ದಾಖಲೆಗಳ ನೈಜ್ಯತೆ ಕುರಿತಂತೆ ಪರಿಶೀಲಿಸಿಕೊಳ್ಳಲು ತಾಲೂಕು ಕಚೇರಿಗೆ ಬರತೊ ಡಗಿದ್ದಾರೆ.
ತಾಲೂಕು ಕಚೇರಿಯಲ್ಲಿನ ಕಂದಾಯ ಇಲಾಖೆಗೆ ಸಂಬಂಧಿಸಿದ ಶತಮಾನಗಳಷ್ಟು ಹಳೆಯ ವರ್ಷಗಳ ಎಲ್ಲಾ ರೀತಿಯ
ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ ಆನ್‌ಲೈನ್ ಮೂಲಕ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡುವ ದೃಷ್ಟಿಯಿಂದ ಸ್ಕ್ಯಾನ್ ಮಾಡಲಾಗಿತ್ತು. ಆದರೆ ಇಲ್ಲಿಯವರೆಗೂ ಈ ದಾಖಲೆಗಳು ಆನ್ ಲೈನ್ ಮೂಲಕ ಸಾರ್ವಜನಿಕರಿಗೆ ಲಭ್ಯವಾಗಿಲ್ಲ.
ಇದನ್ನೂ ಓದಿ: ಪೊಲೀಸ್ ದೌರ್ಜನ್ಯದಿಂದ ತಂದೆ ಸಾವು; ಇಲಾಖೆಯಲ್ಲಿ ಇದ್ದರೂ ಕುಟುಂಬಕ್ಕೆ ರಕ್ಷಣೆ ಸಿಗುತ್ತಿಲ್ಲ
ಸರ್ಕಾರದ ವಿಳಂಬ
ನೀತಿಯೇ ಭೂ ದಾಖಲೆಗಳಲ್ಲಿ ಅಕ್ರಮವಾಗಲು ಕಾರಣವಾಗಿದೆ. ಬೆಂಗಳೂರು ಸುತ್ತಮುತ್ತಲಿನ ತಾಲೂಕುಗಳಲ್ಲಿ ಭೂಮಿ ಬೆಲೆ
ಹೆಚ್ಚಾಗಿರುವ ಹಿನ್ನೆಯಲ್ಲಿ ಇಂತಹ ಪ್ರಕರಣಗಳು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳು ಇವೆ. ಅಲ್ಲದೆ, ಸಾಮಾನ್ಯ ಜನ ಭೂ
ದಾಖಲೆಗಳನ್ನು ಪಡೆಯಲು ತಾಲೂಕು ಕಚೇರಿಗೆ ಹತ್ತಾರು ಬಾರಿ ಅಲೆದಾಡಿ ಹಣ ಖರ್ಚು ಮಾಡಿದರೂ ದೊರೆಯುವುದು
ಕಷ್ಟವಾಗಿದೆ. ಈಗಲಾದರೂ ಸರ್ಕಾರ ಸ್ಕ್ಯಾನ್ ಮಾಡಲಾಗುವ ಎಲ್ಲಾ ಭೂ ದಾಖಲೆಗಳು ಆನ್‌ಲೈನ್ ಮೂಲಕ ಲಭ್ಯವಾಗುವಂತೆ ಮಾಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.