ಮೃತ್ಯು ಕೂಪವಾದ ರಾ.ಹೆದ್ದಾರಿ-234 ! ಗಣ್ಯರು ಇದೇ ರಸ್ತೆಯಲ್ಲಿ ಓಡಾಡಿದರೂ ಈ ದುಸ್ಥಿತಿ
Team Udayavani, Nov 5, 2020, 1:32 PM IST
ಚಿಕ್ಕಬಳ್ಳಾಪುರ: ನಗರವನ್ನು ಸ್ವತ್ಛ ಮತ್ತು ಹಸಿರುಮಯ ಮಾಡಲು ಒಂದು ಕಡೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಪಣತೊಟ್ಟಿದರೆ, ಮತ್ತೂಂದೆಡೆ ಜಿಲ್ಲಾ ಕೇಂದ್ರದಿಂದ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ-234 ಹಾಳಾಗಿ ಮೃತ್ಯುಕೂಪವಾಗಿ ಪರಿವರ್ತನೆಗೊಂಡಿದೆ.
ಜಿಲ್ಲಾ ಕೇಂದ್ರದಿಂದ ಶಿಡ್ಲಘಟ್ಟ ಮಾರ್ಗದ ರಾಷ್ಟ್ರೀಯ ಹೆದ್ದಾರಿ 234ರಲ್ಲಿ ಗುಂಡಿಗಳು ಬಿದ್ದು ಹಾಳಾಗಿದ್ದು, ಈ ಮಾರ್ಗದಲ್ಲಿ
ಸಂಚರಿಸುವ ದ್ವಿಚಕ್ರ ವಾಹನ ಸವಾರರು ಅಂಗೆ„ಯಲ್ಲಿ ಜೀವವಿಟ್ಟುಕೊಂಡು ಪ್ರತಿನಿತ್ಯ ಹರಸಾಹಸ ಮಾಡುವಂತಾಗಿದೆ.
ಗಣ್ಯರ ಓಡಾಟ: ಜಿಲ್ಲಾ ಕೇಂದ್ರದಿಂದ ಕೇವಲ ಒಂದು ಕಿ.ಮೀ. ಅಂತರದಲ್ಲಿರುವ ರಾಷ್ಟ್ರೀಯ ಹೆದ್ದಾರಿ 234 ಹದಗೆಟ್ಟಿರುವುದನ್ನು ನೋಡಿದರೆ ಜಿಲ್ಲಾ ಹೆದ್ದಾರಿಗಿಂತಲೂ ಕಡೆಯಾಗಿದೆ ಎಂಬ ಅನುಮಾನ ಮೂಡುವಂತಾಗಿದೆ. ಇದೇ
ಮಾರ್ಗದಲ್ಲಿ ಪ್ರತಿನಿತ್ಯ ಜಿಲ್ಲಾಧಿಕಾರಿಗಳು, ಎಸ್ಪಿ, ಜಿಲ್ಲಾ ಮಟ್ಟದ ಬಹುತೇಕ ಅಧಿಕಾರಿಗಳು ಮತ್ತು ಇಲಾಖಾ ಪ್ರಗತಿ ಪರಿಶೀಲನಾ ಸಭೆ ಸಹಿತ ಬೇರೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ಸಹಿತ ಜಿಲ್ಲೆಗೆ
ಆಗಮಿಸುವ ಗಣ್ಯ ವ್ಯಕ್ತಿಗಳು ಸಂಚರಿಸುತ್ತಾರೆ.
ಇದನ್ನೂ ಓದಿ: ಬೆಳ್ತಂಗಡಿ : ಮೂರು ವರ್ಷದ ಮಗು ಆರಾಧ್ಯಳ ಚಿಕಿತ್ಸೆಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿಎಸ್ ವೈ
ಆದರೆ ಗುಂಡಿಗಳಿಂದ ಹದಗೆಟ್ಟಿರುವ ರಾಷ್ಟ್ರೀಯ ಹೆದ್ದಾರಿಯನ್ನು ದುರಸ್ಥಿ ಅಥವಾ ಅಭಿವೃದ್ಧಿಗೊಳಿಸಲು ಗಮನಹರಿಸದಿರುವುದು ದುರಂತೆವೇ ಸರಿ.
ಪ್ರಾಧಿಕಾರದ ಅಧಿಕಾರಿಗಳಿಗೆ ಹಿಡಿಶಾಪ:
ರಾಷ್ಟ್ರೀಯ ಹೆದ್ದಾರಿ 234 ಮೂಲಕ ಹೆ„ದರಾಬಾದ್, ಗೌರಿಬಿದನೂರು, ಮಧುಗಿರಿ ವಯಾ ಮುಂಬೆ„ ಮತ್ತು ದೆಹಲಿಗೆ ಪ್ರತಿನಿತ್ಯ
ನೂರಾರು ವಾಹನಗಳು ಸಂಚರಿಸುತ್ತಿವೆ. ಈ ಭಾಗದ ರೈತರು ಬೆಳೆದ ತರಕಾರಿಗಳನ್ನು ಸರಕು ಸಾಗಾಣಿಕೆ ವಾಹನಗಳ ಮೂಲಕ ಇದೇ ಮಾರ್ಗದಿಂದ ರಾಜ್ಯದ ನಾನಾ ಭಾಗಗಳಲ್ಲಿ ರಫ್ತು ಮಾಡುತ್ತಾರೆ. ಜೊತೆಗೆ ಚಿಂತಾಮಣಿ ಶಿಡ್ಲಘಟ್ಟ ತಾಲೂಕಿನ ನಾಗರಿಕರು ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರಕ್ಕೆ ಬರಲು ಇದೇ ಮಾರ್ಗ ಅವಲಂಬಿಸಿದ್ದಾರೆ. ಆದರೆ ರಾಷ್ಟ್ರೀಯ ಹೆದ್ದಾರಿ ಶೋಚನೀಯ ಸ್ಥಿತಿಯನ್ನು ನಿತ್ಯ ದರ್ಶನ ಮಾಡುವ ವಾಹನ ಸವಾರರು, ಜನಪ್ರತಿನಿಧಿಗಳು ಮತ್ತು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಶಾಪ ಹಾಕಿ ತೆರಳುತಿದ್ದಾರೆ.
ಕಿತ್ತು ಬಂದಿರುವ ಕಬ್ಬಿಣ: ರಾ.ಹೆ.234 ರಲ್ಲಿ (ಅಣಕನೂರು ಸಮೀಪ) ರಸ್ತೆಗೆ ಹಾಕಿರುವ ಕಬ್ಬಿಣವು ಸಹ ಕಿತ್ತು ಬಂದಿದ್ದು, ದ್ವಿಚಕ್ರ ವಾಹನ ಸವಾರರ ಪಾಲಿಗೆ ಮೃತ್ಯು ಕೂಪವಾಗಿದ್ದು, ಅನಾಹುತ ಸಂಭವಿಸುವ ಆತಂಕ ಮನೆ ಮಾಡಿದೆ. ಯಾವ ರೀತಿ ಹದಗೆಟ್ಟಿದೆ ಎಂದರೆ ಡಾಂಬರು ಕಿತ್ತು ಕಬ್ಬಿಣ ಕಾಣಿಸುತ್ತಿದೆ. ಕೆಲವೊಮ್ಮೆ ದ್ವಿಚಕ್ರ ವಾಹನ ಸವಾರರು ಕಬ್ಬಿಣ ತಪ್ಪಿಸುವ ಭರದಲ್ಲಿ ಕೆಳಗೆ ಬಿದ್ದು ಗಾಯಗೊಂಡಿರುವ ನಿದರ್ಶನಗಳಿವೆ. ಈಗಾಲಾದರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಗಮನ ಹರಿಸಿ ಅಪಘಾತಕ್ಕೆ ಆಹ್ವಾನ ನೀಡುತ್ತಿರುವ ರಾಷ್ಟ್ರೀಯ ಹೆದ್ದಾರಿ 234ನ್ನು ಅಭಿವೃದ್ಧಿಗೊಳಿಸಲು ಮುಂದಾಗಬೇಕಾಗಿದೆ.
– ಎಂ.ಎ.ತಮೀಮ್ ಪಾಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.