ಬಿಜೆಪಿ ನಾಯಕತ್ವ ತೀರ್ಮಾನ ಮಾಡಲು ನೀವ್ಯಾರು?: ಲಿಂಗಾಯತ ಸಮಿತಿಗೆ ರೇಣುಕಾಚಾರ್ಯ ಪ್ರಶ್ನೆ
Team Udayavani, Nov 5, 2020, 1:46 PM IST
ಬೆಂಗಳೂರು: ದಕ್ಷಿಣ ಭಾರತದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದವರು ಯಡಿಯೂರಪ್ಪನವರು. ಅವರೇ ಈ ಅವಧಿ ಪೂರ್ಣಗೊಳಿಸುತ್ತಾರೆ ಎಂದು ಹೈಕಮಾಂಡ್ ಹೇಳಿದೆ. ಕಾಂಗ್ರೆಸ್ ನಲ್ಲಿ ಪವರ್ ಸೆಂಟರ್ ಜಾಸ್ತಿಯಾಗಿದೆ. ಮಲ್ಲಿಖಾರ್ಜುನ ಖರ್ಗೆ, ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲು ಪ್ರಯತ್ನ ನಡೆಸಿದ್ದಾರೆ. ಸಿದ್ದರಾಮಯ್ಯನವರಿಗೆ ಯಡಿಯೂರಪ್ಪ, ಮೋದಿಯವರನ್ನು ಬೈದರೆ ಮತ್ತೆ ಸಿಎಂ ಆಗುತ್ತೇನೆ ಎನ್ನುವ ಭ್ರಮೆ ಇದ್ದಂತಿದೆ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಟೀಕಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಸಮನ್ವಯ ಸಮಿತಿ ಸಭೆಯಲ್ಲಿ ಯಡಿಯೂರಪ್ಪ ಅವರು ಬದಲಾದರೆ ಲಿಂಗಾಯತರನ್ನೇ ಸಿಎಂ ಮಾಡಬೇಕು ಎಂದು ಹೇಳಲು ನಿಮಗೆ ಅಧಿಕಾರ ಕೊಟ್ಟಿರುವುದು ಯಾರು. ಬಿಜೆಪಿಯಲ್ಲಿ ಒಂದು ವ್ಯವಸ್ಥೆ ಇದೆ. ಶಾಸಕಾಂಗ ಪಕ್ಷ ಇದೆ. ಯಾರನ್ನು ಸಿಎಂ ಮಾಡಬೇಕು ಎಂದು ಶಾಸಕಾಂಗ ಸಭೆಯಲ್ಲಿ ತೀರ್ಮಾನವಾಗುತ್ತದೆ. ಬಿಜೆಪಿ ನಾಯಕತ್ವ ತೀರ್ಮಾನ ಮಾಡಲು ನೀವ್ಯಾರು. ಈ ರೀತಿ ಹೇಳಿಕೆ ನೀಡಿ ಸಮಾಜದಲ್ಲಿ ಗೊಂದಲ ಮೂಡಿಸುವ ಕೆಲಸ ಮಾಡಬೇಡಿ ಎಂದು ಹೇಳಿದರು.
ಸಿದ್ದರಾಮಯ್ಯ ಅವರ ಪ್ರತಿಪಕ್ಷದ ಸ್ಥಾನ ಕಾಯ್ದುಕೊಳ್ಳಲು ಯಡಿಯೂರಪ್ಪ, ಮೋದಿ ವಿರುದ್ಧ ಮಾತನಾಡುತ್ತಾ ತಮ್ಮ ಕುರ್ಚಿ ಉಳಿಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ ಎಂದರು.
ಶಾಸಕ ಯತ್ನಾಳರ ವಿರುದ್ಧ ಅಧ್ಯಕ್ಷರು ಏನು ಕ್ರಮ ಕೈಗೊಳ್ಳಬೇಕು ಅದನ್ನು ಮಾಡಿದ್ದಾರೆ. ವರು ಬಾಯಿ ಚಪಲಕ್ಕೆ ಮಾತನಾಡುತ್ತಿದ್ದಾರೆ. ಅಧಿಕಾರ ಸಿಕ್ಕಿಲ್ಲ ಎಂದು ಹುಚ್ಚಚ್ಚಾಗಿ ಮಾತನಾಡುತ್ತಿದ್ದಾರೆ. ಬಿಜೆಪಿಯಲ್ಲಿ ಒಂದು ವ್ಯವಸ್ಥೆ ಇದೆ. ಶಾಸಕಾಂಗ ಸಭೆಯಲ್ಲಿ ಮಾತನಾಡಬೇಕು. ನಾನು ನನ್ನ ಭಾವನೆಗಳನ್ನು ಶಾಸಕಾಂಗ ಸಭೆಯಲ್ಲಿ ಮಾತನಾಡಿದ್ದೇನೆ ಎಂದು ಹೇಳಿದರು.
ಶಾಸಕನಾದ ಮೇಲೆ ಮಂತ್ರಿಯಾಗಬೇಕೆನ್ನುವ ಬಯಕೆ ಇದ್ದೇ ಇರುತ್ತದೆ. ನಾನು ಪಕ್ಷದ ಅಧ್ಯಕ್ಷರ ಮುಂದೆ ನನ್ನ ಭಾವನೆ ವ್ಯಕ್ತಪಡಿಸಿದ್ದೇನೆ. ಈ ಬಾರಿ ಆಶೀರ್ವಾದ ಮಾಡುವ ವಿಶ್ವಾಸ ಇದೆ ಎಂದು ರೇಣುಕಾಚಾರ್ಯ ಸಚಿವಗಿರಿ ಅಭಿಲಾಷೆ ವ್ಯಕ್ತಪಡಿಸಿದರು.
ಜಮೀರ್ ಅಹಮದ್ ಏನು ಎಂದು ಎಲ್ಲರಿಗೂ ಗೊತ್ತಿದೆ. ವಿಜಯೇಂದ್ರ ಪಕ್ಷದ ನಾಯಕರಾಗಿ ಕೆ.ಆರ್.ಪೇಟೆ ಮಾದರಿಯಲ್ಲಿ ಚುನಾವಣೆ ನಡೆಸಿದ್ದಾರೆ. ಜಮೀರ್ ತಾಕತ್ತಿದ್ದರೆ ಮುಂದಿನ ಚುನಾವಣೆಯಲ್ಲಿ ಚಾಮರಾಜಪೇಟೆಯಲ್ಲಿ ಜಯ ಗಳಿಸಿ ಬರಲಿ ನೋಡೋಣ ಎಂದು ಸವಾಲೆಸಿದರು.
ಆರ್.ಆರ್. ನಗರ ಮತ್ತು ಶಿರಾ ಕ್ಷೇತ್ರದಲ್ಲಿ ಜಯಗಳಿಸುವ ವಿಶ್ವಾಸ ಇದೆ. ಶಿರಾ ಪಕ್ಷದ ಅಭ್ಯರ್ಥಿ ವಿದ್ಯಾವಂತರಿದ್ದಾರೆ. ಶಾಶ್ವತ ನೀರಾವರಿ ಯೋಜನೆ ನೀಡುವ ಭರವಸೆ ಕೊಟ್ಟಿದ್ದಾರೆ. ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆಯುವ ನಾಯಕ. ಮುನಿರತ್ನಗೆ ಇಂಥದ್ದೆ ಖಾತೆ ಕೊಡುತ್ತೇನೆ ಎಂದು ಸಿಎಂ ಹೇಳಿಲ್ಲ. ನಿರ್ದಿಷ್ಟ ಮಂತ್ರಿಸ್ಥಾನ ಬೇಕೆಂದು ಆಸೆ ಇಟ್ಟುಕೊಂಡಿದ್ದರೆ ಆಗುವುದಿಲ್ಲ ಎಂದರು.
ಹುಬ್ಬಳ್ಳಿ ಜಿ.ಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಪಾತ್ರ ಇದೆ. ಅದಕ್ಕೆ ಸಿಬಿಐ ತನಿಖೆ ನಡೆಸುತ್ತಿದೆ. ಇದರಲ್ಲಿ ಬಿಜೆಪಿ ಪಾತ್ರ ಏನೂ ಇಲ್ಲ. ಕಾಂಗ್ರೆಸ್ ನವರು ಸಿಬಿಐ ದುರುಪಯೋಗ ಪಡೆಸಿಕೊಂಡಿದ್ದಾರೆ ಎಂದು ರೇಣುಕಾಚಾರ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.