ನಂದಳಿಕೆ: ಹೊಗೆ ಉಗುಳುವ ಕಾರ್ಖಾನೆಯ ವಿರುದ್ಧ ಅಸಮಾಧಾನದ ಹೊಗೆ
ತ್ಯಾಜ್ಯ ಸಂಸ್ಕರಣ ಘಟಕದಿಂದ ಪರಿಸರ ಮಾಲಿನ್ಯ; ಪಂಚಾಯತ್‌ಗೆ ದೂರು
Team Udayavani, Nov 6, 2020, 4:25 AM IST
ಕಾರ್ಖಾನೆ ಮುಂದೆ ರಾಶಿ ಹಾಕಿದ ಪ್ಲಾಸ್ಟಿಕ್ ಬಾಟಲಿಗಳ ರಾಶಿ.
ಬೆಳ್ಮಣ್: ಕಾರ್ಕಳ ತಾಲೂಕಿನ ನಂದಳಿಕೆಯಲ್ಲಿ ಕಾರ್ಯಾಚರಿಸುತ್ತಿರುವ ಮ್ಯಾಕ್‌ಸನ್ಸ್ ಇಂಡಸ್ಟ್ರೀಸ್ ಎಂಬ ತ್ಯಾಜ್ಯ ಸಂಸ್ಕರಣ ಘಟಕದಲ್ಲಿ ಪ್ಲಾಸ್ಟಿಕ್ ಸುಟ್ಟ ವಾಸನೆ, ಪ್ಲಾಸ್ಟಿಕ್ ಪುಡಿಗುಟ್ಟುವ ಶಬ್ದ ಹಾಗೂ ಪ್ಲಾಸ್ಟಿಕ್ ಬಾಟಲಿಗಳಲ್ಲಿ ನೀರು ನಿಂತು ಸೊಳ್ಳೆಗಳ ಕಾಟದಿಂದಾಗಿ ಬೇಸತ್ತ ಗ್ರಾಮಸ್ಥರು ಸ್ಥಳೀಯ ಪಂಚಾಯತ್‌ಗೆ ದೂರು ನೀಡಿದ್ದಾರೆ.
ಜಿಲ್ಲೆಯ ವಿವಿಧ ಪಂಚಾಯತ್‌ಗಳ ಎಸ್‌ಎಲ್‌ಆರ್‌ಎಂ ಘಟಕಗಳಿಂದ ಸಂಗ್ರಹಿಸಿದ ತ್ಯಾಜ್ಯಗಳನ್ನು ಸಂಗ್ರಹಿಸಿ ಬಾಟಲಿ, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಬೇರ್ಪಡಿಸುವ ಈ ಘಟಕದಲ್ಲಿ ಲಾಕ್‌ಡೌನ್ ಸಂದರ್ಭ ರಾಶಿ ರಾಶಿ ಬಿದ್ದಿದ್ದ ತ್ಯಾಜ್ಯಗಳನ್ನು ಸುಟ್ಟು ಹಾಕಲಾಗಿದ್ದು ಇಡೀ ಪರಿಸರ ಪ್ಲಾಸ್ಟಿಕ್ ಸುಟ್ಟ ವಾಸನೆಯಿಂದ ಜನ ಆಕ್ರೋಶ ವ್ಯಕ್ತಪಡಿಸಿ ಕಾರ್ಖಾನೆಯ ವಿರುದ್ಧ ಪಂಚಾಯತ್‌ಗೆ ದೂರು ನೀಡಿದ್ದರು.
ಪಂಚಾಯತ್‌ನಿಂದ ಎಚ್ಚರಿಕೆ
ಜನವಸತಿ ಪ್ರದೇಶದಲ್ಲಿ ಕೈಗಾರಿಕಾ ವಲಯದ ಹೆಸರಿನಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರ ವಾನಿಗೆ ಪಡೆದು ಕಾರ್ಯಾಚರಿಸುತ್ತಿದ್ದ ಈ ಘಟಕ ಸಂಜೆ 5ರಿಂದ ರಾತ್ರಿ 12ರ ವರೆಗೆ ಪ್ಲಾಸ್ಟಿಕ್ ಬಾಟಲಿ ಹುಡಿ ಮಾಡುವ ಕೆಲಸ ಮಾಡುತ್ತಿತ್ತು. ಇತ್ತೀಚೆಗೆ ಕ್ರೋಡೀಕರಣ ಗೊಂಡ ತ್ಯಾಜ್ಯಗಳನ್ನು ಸುಟ್ಟು ಹಾಕಲಾಗಿ ವಾಸನೆಯಿಂದ ತತ್ತರಿಸಿಹೋಗಿದ್ದ ಜನ ಪಂ.ಗೆ ದೂರು ನೀಡಿದ್ದರು.
ಮಂಗಳವಾರ ನಂದಳಿಕೆ ಗ್ರಾ.ಪಂ. ಕಾರ್ಯದರ್ಶಿ ಸಂಜೀವ, ಪಂಚಾಯತ್‌ನ ಮಾಜಿ ಸದಸ್ಯ ಗಿರೀಶ್ ಶೆಟ್ಟಿ ಮತ್ತಿತರರು ಭೇಟಿ ನೀಡಿ ಕಾರ್ಖಾನೆಯ ಮಾಲಕರಿಗೆ ಎಚ್ಚರಿಕೆ ನೀಡಿದರಲ್ಲದೆ 10 ದಿನಗಳೊಳಗೆ ಶೇಖರಣೆಗೊಂಡಿರುವ ತ್ಯಾಜ್ಯಗಳನ್ನು ವಿಲೇವಾರಿ ಮಾಡುವಂತೆ ತಿಳಿಸಿದರು.
ವಿವಿಧ ಪಂಚಾಯತ್‌ಗಳ ತ್ಯಾಜ್ಯ ನಂದಳಿಕೆಯಲ್ಲಿ ವಿಲೇವಾರಿ
ಮ್ಯಾಕ್‌ಸನ್ಸ್ ಇಂಡಸ್ಟ್ರೀಸ್ ಎಂಬ ತ್ಯಾಜ್ಯ ಸಂಸ್ಕರಣ ಘಟಕದ ಮಾಲಕ ವಿವಿಧ ಗ್ರಾ.ಪಂ.ಗಳಿಂದ ತ್ಯಾಜ್ಯ ಸಂಗ್ರಹಿಸಿ ಬೇರ್ಪಡಿಸಿ ಪ್ಲಾಸ್ಟಿಕ್ ಬಾಟಲಿಗಳನ್ನು ನಂದಳಿಕೆಯ ಘಟಕದಲ್ಲಿ ಪುಡಿಮಾಡಿ ಸಾಗಿಸುತ್ತಿದ್ದರು. ಸ್ಥಳೀಯ ಪಂ. ಆಡಳಿತ ಈ ಕಾರ್ಖಾನೆಗೆ ನಿರಾಕ್ಷೇಪಣಾ ಪತ್ರ ನೀಡಿದ ಬಗ್ಗೆ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು. ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿದ್ದ ಪಂಚಾಯತ್‌ನ ಆಡಳಿತ ವರ್ಗ ಸ್ಥಳೀಯರಿಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದೆ.
ಸ್ವಚ್ಛತೆಗೆ ಆದೇಶ
ಈ ಕಾರ್ಖಾನೆಯ ಮಾಲಕರಿಗೆ ತ್ಯಾಜ್ಯಗಳನ್ನು ವಿಲೇವಾರಿ ಮಾಡಿ ಸ್ವಚ್ಛತೆ ಕಾಪಾಡುವಂತೆ ಆದೇಶ ನೀಡಲಾಗಿದೆ. ಮುಂದೆ ದೂರು ಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು.
– ಸಂಜೀವ, ನಂದಳಿಕೆ ಗ್ರಾ.ಪಂ. ಕಾರ್ಯದರ್ಶಿ
ಕ್ರಮ ಕೈಗೊಳ್ಳಿ
ಜನವಸತಿ ಪ್ರದೇಶದಲ್ಲಿ ಇಂತಹ ಪರಿಸರ ಮಾರಕ ಕಾರ್ಖಾನೆಯಿಂದ ತೊಂದರೆಯಾಗಿದೆ. ಅಶಕ್ತ, ಅಸೌಖ್ಯದ ಮಂದಿ ಇರುವ ಈ ಪ್ರದೇಶದಲ್ಲಿ ಇಂತಹ ಪ್ಲಾಸ್ಟಿಕ್ ತ್ಯಾಜ್ಯ ಸಂಸ್ಕರಣ ಘಟಕ ಕಾರ್ಯಾಚರಿಸುತ್ತಿರುವ ಬಗ್ಗೆ ಜನರಲ್ಲಿ ಆತಂಕ ಎದುರಾಗಿದೆ. ಕಾರ್ಖಾನೆಯವರಿಗೂ ತೊಂದರೆಯಾಗದ ರೀತಿಯಲ್ಲಿ ಪಂಚಾಯತ್ ಸ್ಪಂದಿಸಿ ಕ್ರಮ ಕೈಗೊಳ್ಳಬೇಕಾಗಿದೆ.
– ಪವನ್‌ರಾಜ್, ಸ್ಥಳೀಯರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.