ರಾಜ್ಯದಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ಗಣನೀಯ ಇಳಿಕೆ! ಎಚ್ಚರಿಕೆ ಅಗತ್ಯ : ಡಾ. ಕೆ. ಸುಧಾಕರ್

Team Udayavani, Nov 5, 2020, 7:38 PM IST

ರಾಜ್ಯದಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ಗಣನೀಯ ಇಳಿಕೆ! ಎಚ್ಚರಿಕೆ ಅಗತ್ಯ : ಡಾ. ಕೆ. ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದ್ದು ರೋಗ ಲಕ್ಷಣ ಇಲ್ಲದವರ ಸಂಖ್ಯೆಯೂ ಶೇ.90 ಕ್ಕಿಂತ ಹೆಚ್ಚಾಗಿದ್ದು ಸೋಂಕು ದೃಢಪಟ್ಟು ಗುಣಮುಖರಾಗುತ್ತಿರುವವರ ಸಂಖ್ಯೆಯೂ ಶೇ.93.47 ರಷ್ಟು ಏರಿಕೆಯಾಗಿದೆ.

ವಿಧಾನಸೌಧದಲ್ಲಿ ಗುರುವಾರ ಕೊರೊನಾ ನಿರ್ವಹಣೆ ಕುರಿತ ತಜ್ಞರ ಸಲಹಾ ಸಮಿತಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, ರಾಜ್ಯದಲ್ಲಿ ಕೊರೊನಾ ಸಾವಿನ ಪ್ರಮಾಣವೂ ಶೇ.0.05 ರಷ್ಟಿದ್ದು ನಿತ್ಯ ಕೊರೊನಾ ಪ್ರಕರಣಗಳ ಸಂಖ್ಯೆ 2500ರ ಗಡಿ ತಲುಪಿದ್ದು ರಾಜ್ಯದ ಎಲ್ಲ ಭಾಗಗಳಲ್ಲಿಯೂ ಕೊರೊನಾ ನಿಯಂತ್ರಣಕ್ಕೆ ಬರುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ಪರೀಕ್ಷೆಗಳ ಸಂಖ್ಯೆಯೂ ಹೆಚ್ಚಾಗುತ್ತಿರುವುದರಿಂದ ಸ್ಪಷ್ಟ ಮಾಹಿತಿ ಸಿಗುತ್ತಿದೆ. ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌ ಅವರು ಸಹ ರಾಜ್ಯಕೈಗೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮುಂದುವರಿಸಲು ಹೇಳಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ ರೋಗ ಲಕ್ಷಣ ಇಲ್ಲದವರ ಸಂಖ್ಯೆ ಶೇ.90 ಕ್ಕಿಂತ ಹೆಚ್ಚಾಗಿದೆ. ಇದೇ ಸಂದರ್ಭದಲ್ಲಿ ಗುಣಮುಖರಾಗುತ್ತಿರುವವರ ಸಂಖ್ಯೆ 94.37 ನಷ್ಟಿದ್ದು ಇದು ದೇಶದಲ್ಲೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಹೇಳಿದರು.

ಇದನ್ನೂ ಓದಿ:ಬೆಳ್ಳಂಬೆಳಗ್ಗೆ ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ! ಇಬ್ಬರು ಸಾವು

ಸೆರೋ ಸಮೀಕ್ಷೆಯಲ್ಲೂ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖ, ರೋಗ ಲಕ್ಷಣ ಇಲ್ಲದವರ ಸಂಖ್ಯೆ ಹೆಚ್ಚಳ, ಶೇ.16 ರಷ್ಟು ಜನರಲ್ಲಿ ಕೊರೊನಾ ತಡೆ ರೋಗ ನಿರೋಧಕ ಶಕ್ತಿ ವೃದ್ಧಿಯಾಗಿರುವ ಅಂಶ ಪತ್ತೆಯಾಗಿತ್ತು ಎಂದು ತಿಳಿಸಿದರು.

ಕೊರೊನಾ ನಿಯಂತ್ರಣ ನಿಟ್ಟಿನಲ್ಲಿ ತಜ್ಞರು ನೀಡಿರುವ ಮಾರ್ಗಸೂಚಿಗಳನ್ನು ಸಾರ್ವಜನಿಕರು ಗಂಭೀರವಾಗಿ ಪರಿಗಣಿಸಿ ಪಾಲಿಸುತ್ತಿದ್ದಾರೆ ಎಂಬುದಕ್ಕೆ ಇದು ಉದಾಹರಣೆಯಾಗಿದೆ ಎಂದು ತಿಳಿಸಿದರು.

ತಪಾಸಣೆ
ಇತ್ತೀಚೆಗೆ ಉಪ ಚುನಾವಣೆ ನಡೆದ ಶಿರಾ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳಲ್ಲಿ ಪರೀಕ್ಷೆ ಹೆಚ್ಚು ನಡೆಸಲು ತಜ್ಞರ ಸಮಿತಿ ಸಲಹೆ ನೀಡಿದೆ. ಚುನಾವಣಾ ಕಾರ್ಯದಲ್ಲಿ ಸಕ್ರಿಯರಾಗಿ ಪಾಲ್ಗೊಂಡವರು ಸೇರಿದಂತೆ ಮತಗಟ್ಟೆ ಸೇರಿ ವಿವಿಧೆಡೆ ಕೆಲಸ ಮಾಡಿದವರನ್ನು ತಪಾಸಣೆ ಮಾಡಲು ತಿಳಿಸಿದ್ದಾರೆ. ಆ ಕೆಲಸ ಪ್ರಾರಂಭಿಸಿದ್ದೇವೆ ಎಂದು ಹೇಳಿದರು.

ಕೊರೊನಾದಿಂದ ಮೃತಪಟ್ಟ 11 ಸಾವಿರ ಪ್ರಕರಣಗಳ ಬಗ್ಗೆಯೂ ಅಧ್ಯಯನ ನಡೆಸಲು ಸಹ ತಜ್ಞರಿಗೆ ತಿಳಿಸಲಾಗಿದೆ. ಯಾವ್ಯಾವ ವಯಸ್ಸಿನವರು, ಯಾವ್ಯಾವ ರೀತಿಯ ಬೇರೆ ಆರೋಗ್ಯ ಸಮಸ್ಯೆ ಇತ್ತು. ಕೊರೊನಾ ಬಂದ ನಂತರ ಕಾಣಿಸಿಕೊಂಡ ಸಮಸ್ಯೆಗಳು ಸೇರಿ ಎಲ್ಲ ವಿಷಯಗಳ ಬಗ್ಗೆ ಅಧ್ಯಯನ ನಡೆಸಲಾಗುವುದು ಎಂದು ತಿಳಿಸಿದರು.

ಕೊರೊನೇತರ ಪ್ರಕರಣಗಳಲ್ಲಿ ಕೆಲವರು ಆರೋಗ್ಯ ಸಮಸ್ಯೆ ಬಂದರೆ ಆಸ್ಪತ್ರೆಗೆ ಹೋಗದೆ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲು ನೋವು ಇದ್ದರೂ ಆಸ್ಪತ್ರೆಗೆ ಹೋಗುತ್ತಿಲ್ಲ. ಆ ರೀತಿ ಮಾಡಬಾರದು. ದಯವಿಟ್ಟು ಹೋಗಿ ಪರೀಕ್ಷೆ ಮಾಡಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.