ಪ.ಬಂಗಾಳ, ದೆಹಲಿ, ಮಹಾರಾಷ್ಟ್ರದಲ್ಲಿ ಪಟಾಕಿ ನಿಷೇಧ! ದೀಪ ಬೆಳಗಿಸಿ ದೀಪಾವಳಿ ಆಚರಣೆಗೆ ಸೂಚನೆ
Team Udayavani, Nov 6, 2020, 1:32 PM IST
ಕೋಲ್ಕತ್ತಾ/ನವದೆಹಲಿ/ಮುಂಬಯಿ:ಕೋವಿಡ್ ಪ್ರಕರಣದ ಹಿನ್ನೆಲೆ ಹಾಗೂ ಪಟಾಕಿ ಬಳಕೆಯಿಂದ ವಾತಾವರಣದ ಮೇಲಾಗುವ ಪರಿಣಾಮಗಳನ್ನು ಅವಲೋಕಿಸಿ ಈ ಬಾರಿ ದೀಪಾವಳಿಗೆ ಪಟಾಕಿಯನ್ನು ನಿಷೇಧಿಸಿ ಸರಳವಾಗಿ ಹಾಗೂ ಕೋವಿಡ್ ಮಾರ್ಗ ಸೂಚಿಗಳ ಅನ್ವಯ ಆಚರಣೆ ಮಾಡಲು ಸೂಚಿಸಲಾಗಿದೆ.
ಕೋವಿಡ್ ಹಿನ್ನೆಲೆಯಲ್ಲಿ ಕಾಳಿಪೂಜೆಯ ವೇಳೆ ಪಟಾಕಿಗಳ ಬಳಕೆ ಹಾಗೂ ಮಾರಾಟವನ್ನು ನಿಷೇಧಿಸಿ ಗುರುವಾರ ಕಲ್ಕತ್ತಾ ಹೈಕೋರ್ಟ್ ಆದೇಶ ನೀಡಿದೆ. ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿ ನ್ಯಾಯಪೀಠ ಈ ಸೂಚನೆ ನೀಡಿದೆ. ನ.15ರಂದು ಕಾಳಿ ಪೂಜೆ ನಡೆಯಲಿದೆ. ಜಗದ್ಧಾತ್ರಿ ಪೂಜೆ, ಛತ್ ಹಾಗೂ ಕಾರ್ತಿಕ ಪೂಜೆಗೂ ಇದು ಅನ್ವಯವಾಗಲಿದೆ. ಜತೆಗೆ ದೇವರ ಮೂರ್ತಿ ವಿಸರ್ಜನೆ ವೇಳೆ ಮೆರವಣಿಗೆಗೂ ನಿರ್ಬಂಧ ಹೇರಲಾಗಿದೆ.
ದೆಹಲಿಯಲ್ಲೂ ಬ್ಯಾನ್:
ಇದೇ ವೇಳೆ, ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿರುವುದರಿಂದ ಕೊರೊನಾ ಸೋಂಕಿನ ವ್ಯಾಪಿಸುವಿಕೆಯೂ ಹೆಚ್ಚಳವಾಗುವ ಸಾಧ್ಯತೆ ಇರುವುದಾಗಿ ತಜ್ಞರು ಎಚ್ಚರಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಪಟಾಕಿ ಬಳಕೆಗೆ ನಿಷೇಧ ಹೇರಲಾಗಿದೆ. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರೇ ಈ ಕುರಿತು ಟ್ವಿಟರ್‌ನಲ್ಲಿ ಘೋಷಿಸಿದ್ದಾರೆ.
ಮಹಾರಾಷ್ಟ್ರದಲ್ಲೂ ಕೋವಿಡ್ ಪ್ರಕರಣಗಳು ಇರುವ ಕಾರಣ ಪಟಾಕಿ ಬದಲು ದೀಪ ಬೆಳಗಿಸಿ ದೀಪಾವಳಿ ಆಚರಿಸಲು ಸೂಚನೆ ನೀಡಲಾಗಿದೆ, ಅಲ್ಲದೆ ಆರೋಗ್ಯದ ಹಿತ ದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಮಾಡಬೇಕೆಂದು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಹೇಳಿದೆ.
ಪ್ರಸ್ತುತ, ಪುಣೆ, ಥಾಣೆ, ಮುಂಬೈ, ನಾಸಿಕ್, ನಾಗ್ಪುರ, ಚಂದ್ರಪುರ, ರಾಯಗಡ್ ಮತ್ತು ಸತಾರಾದಲ್ಲಿ ಗರಿಷ್ಠ ಸಂಖ್ಯೆಯ ಸಕ್ರಿಯ ರೋಗಿಗಳಿದ್ದು ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಪಟಾಕಿ ನಿಷೇಧಿಸಲು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.