![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 6, 2020, 2:42 PM IST
ಹಳೆಯಂಗಡಿ: ಆರ್.ಆರ್.ನಗರದಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಶಿರಾ ದಲ್ಲಿ ಸಿದ್ಧರಾಮಯ್ಯ ಕಾಂಗ್ರೆಸ್ ನೇತೃತ್ವ ವಹಿಸಿದ್ದರು. ಇವರಿಬ್ಬರಲ್ಲಿ ಒಬ್ಬರನೊಬ್ಬರನ್ನು ಸೋಲಿಸಬೇಕು ಎಂಬ ಉದ್ದೇಶದಿಂದ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಲಿದೆ, ಕಳೆದ ಬಾರಿಯ ಮೂರು ಪ್ರಭಾವಿ ಸ್ಪರ್ಧಾಳುಗಳು ಬಿಜೆಪಿಯಲ್ಲಿರುವುದರಿಂದ ಉಪ ಚುನಾವಣೆಯಲ್ಲಿ ಹಾಗೂ ನಾಲ್ಕು ವಿಧಾನ ಪರಿಷತ್ ಕ್ಷೇತ್ರದಲ್ಲಿ ಗೆಲುವು ನಮ್ಮದಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯಲ್ಲಿ ನಗರ ಪಂಚಾಯತ್ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿ ಮಾಧ್ಯಮದೊಂದಿಗೆ ಮಾತನಾಡಿದರು. ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗೆದ್ದರೂ ಸಹ ಅಲ್ಲಿ ಅಭಿವೃದ್ಧಿಯ ಹಿನ್ನಡೆಯಾಗಿದೆ. ಇದರಿಂದ ಮತದಾರರು ಈ ಬಾರಿ ಬಿಜೆಪಿಯನ್ನು ಗೆಲ್ಲಿಸಲು ವಿಶ್ವಾಸದ ಮತಗಳನ್ನು ಹಾಕಿದ್ದಾರೆ ಎಂದರು.
ಗ್ರಾಮ ಪಂಚಾಯತ್ ಚುನಾವಣೆಗೆ ಬಿಜೆಪಿ ಸಿದ್ಧತೆ
ಮುಂದಿನ ಗ್ರಾಮ ಪಂಚಾಯತ್ ಚುನಾವಣೆ ಹಾಗೂ ತಾಲೂಕು, ಜಿಲ್ಲಾ ಪಂಚಾಯತ್‌ನ ಚುನಾವಣೆಗೆ ಈಗಾಗಲೇ ಬಿಜೆಪಿ ಸಿದ್ಧತೆಯನ್ನು ಮಾಡಿಕೊಂಡಿದೆ, ವಾರ್ಡ್ ಸಹಿತ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸಜ್ಜುಗೊಳಿಸಲಾಗಿದೆ, ರಾಜ್ಯದಲ್ಲಿ ಶೇ.80 ರಷ್ಟು ಸ್ಥಾನಗಳು ಬಿಜೆಪಿಗೆ ಸಿಗಲಿರುವ ವಿಶ್ವಾಸ ನನಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇದನ್ನೂ ಓದಿ:ವಿನಯ ಕುಲಕರ್ಣಿ ಬಂಧನದ ಹಿಂದೆ ಯಾವುದೇ ರಾಜಕೀಯ ಹಸ್ತಕ್ಷೇಪವಿಲ್ಲ: ಸವದಿ
ಶಾಸಕ ಉಮಾನಾಥ ಕೊಟ್ಯಾನ್, ಜಿಲ್ಲಾಧ್ಯಕ್ಷ ಸುದರ್ಶನ್, ಜನಪ್ರತಿನಿಧಿಗಳು, ಕಾರ್ಯಕರ್ತರು, ಪ್ರಮುಖರು ಉಪಸ್ಥಿತರಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.