ಸರ್ಕಾರದ ಕ್ರಮಕ್ಕೆ ರೈತರ ಖಂಡನೆ


Team Udayavani, Nov 6, 2020, 5:24 PM IST

mandya-tdy-1

ಮದ್ದೂರು: ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ವಿದ್ಯುತ್‌ ಹಾಗೂ ಎಪಿಎಂಸಿ ಖಾಸಗೀಕರಣಕ್ಕೆ ಮುಂದಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕ್ರಮ ಖಂಡಿಸಿ, ರೈತ ಸಂಘದ ಕಾರ್ಯಕರ್ತರು ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದರು.

ಪಟ್ಟಣದ ಕೊಪ್ಪ ವೃತ್ತದ ಬಳಿ ಜಮಾಯಿಸಿದ ಸಂಘಟನೆ ಕಾರ್ಯಕರ್ತರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಮಾರಕ ಕಾಯ್ದೆಗಳನ್ನುಜಾರಿಗೆ ತರುವಮೂಲಕ ರೈತರ ಹಿತವನ್ನು ಮರೆತಿದೆ. ಕಾಯ್ದೆ ಅನುಷ್ಠಾನಕ್ಕೆ ಮುಂದಾದಲ್ಲಿ ರೈತ ಆತ್ಮಹತ್ಯೆ ಪ್ರಕರಣ ಹೆಚ್ಚುತ್ತದೆ. ಇಂತಹ ರೈತವಿರೋಧಿನೀತಿಗಳನ್ನುಹಿಂಪಡೆದು ರೈತರ ಹಿತ ರಕ್ಷಣೆ ಮಾಡಬೇಕು ಎಂದು ಆಗ್ರಹಿಸಿದರು.

ರೈತರ ಹಿತ ಕಾಪಾಡಿ: ವಿದ್ಯುತ್‌ ಇಲಾಖೆ ಹಣ ಹೆಚ್ಚಳ ಮಾಡಿದ್ದು, ಇದರಿಂದ ಗ್ರಾಹಕರು, ರೈತರು ಆತಂಕಗೊಂಡಿದ್ದಾರೆ. ಕೊರೊನಾದಿಂದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಜೀವನ ನಡೆಸುವುದೇ ಕಷ್ಟಕರವಾಗಿದೆ. ಕೂಡಲೇ ಇದನ್ನು ವಾಪಸ್‌ ಪಡೆದು ರೈತರ ಹಿತ ಕಾಪಾಡಬೇಕು ಎಂದು ಹೇಳಿದರು.

ಹಣ ಬಿಡುಗಡೆ ಮಾಡಿ: ಸರ್ಕಾರ ಕಬ್ಬಿಗೆ ನಿಗದಿಪಡಿಸಿರುವ ಎಫ್ಆರ್‌ಪಿ ದರ ಜತೆಗೆ ಎನ್‌ಎಸ್‌ಫಿ ಪ್ರತಿ ಟನ್‌ಗೆ ಕನಿಷ್ಠ 500 ರೂ. ನಿಗದಿಗೊಳಿಸಿ, ಕಬ್ಬು ಬೆಳೆಗಾರರ ಹಿತ ರಕ್ಷಣೆ ಜತೆಗೆಕಟಾವಿಗೆ ಬಂದಿರುವ ಕಬ್ಬನ್ನು ಕಾರ್ಖಾನೆಗಳಿಗೆ ಪೂರೈಕೆ ಮಾಡಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು. ಭತ್ತ ಕಟಾವು ಕಾರ್ಯ ಪ್ರಗತಿ ಹಂತದಲ್ಲಿದೆ. ಜಿಲ್ಲಾಡಳಿತ ಪ್ರತಿ ತಾಲೂಕಿನಲ್ಲಿ ಭತ್ತ ಖರೀದಿ ಕೇಂದ್ರ ತೆರೆಯಬೇಕು. ಸರ್ಕಾರ ಪ್ರತಿ ಕ್ವಿಂಟಾಲ್‌ಗೆ 200 ರೂ. ಪ್ರೋತ್ಸಾಹ ಧನ ನೀಡುವ ಆಶ್ವಾಸನೆ ನೀಡಿದ್ದು, ಇದುವರೆಗೂ ಹಣ ಬಿಡುಗಡೆ ಮಾಡಿಲ್ಲ. ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ಸೀತಾ ರಾಂ, ಪದಾಧಿಕಾರಿಗಳಾದ ಜಿ.ಎ. ಶಂಕರ್‌, ವರದರಾಜು, ಗೊಲ್ಲರದೊಡ್ಡಿಅಶೋಕ್‌, ರವಿ ಕುಮಾರ್‌, ಕೀಳಘಟ್ಟ ನಂಜುಂಡಯ್ಯ, ರಾಮಲಿಂಗಯ್ಯ, ವೆಂಕಟೇಶ್‌, ಸಿದ್ದೇಗೌಡ, ಪುಟ್ಟಸ್ವಾಮಿ,ಲಿಂಗಪ್ಪಾಜಿ, ರಾಮಣ್ಣ, ವೀರಪ್ಪ, ವೆಂಕಟೇಶ್‌, ನಾಗರಾಜು ಹಾಜರಿದ್ದರು.

ಕಾಯ್ದೆ ತಿದ್ದುಪಡಿಗೆ ವಿರೋಧ :

ಶ್ರೀರಂಗಪಟ್ಟಣ: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ, ರೈತ ಸಂಘದ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟಿಸಿದರು.

ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ಎಲ್‌ ಕೆಂಪೂಗೌಡ ನೇತೃತ್ವದಲ್ಲಿ ಪಟ್ಟಣದ ಕುವೆಂಪು ವೃತ್ತದ ಬಳಿ ಹೆದ್ದಾರಿ ತಡೆದು ಪ್ರತಿಭಟಿಸಿ, ಕೇಂದ್ರ ಮತ್ತ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ರೈತರ ವಿರೋಧಿ

ನೀತಿ ಅನುಸರಿಸುತ್ತಿದೆ. ಕಾಯ್ದೆ ತಿದ್ದುಪಡಿಯಿಂದ ರೈತರಿಗೆ

ತೊಂದರೆಯಾಗುತ್ತಿದೆ. ಕೂಡಲೇ ವಿದ್ಯುತ್‌ ಖಾಸಗಿಕರಣ ಹಾಗೂ ಕಾಯ್ದೆ ತಿದ್ದುಪಡಿಕೈಬಿಡಬೇಕು ಎಂದು ಒತ್ತಾಯಿಸಿದರು. ರೈತ ಸಂಘದ ಅಧ್ಯಕ್ಷ ಮರಳಗಾಲ ಕೃಷ್ಣೇಗೌಡ, ರೈತ ಸಂಘದ ಮುಖಂಡರಾದ ಎಚ್‌.ಎಲ್‌.ಪ್ರಕಾಶ್‌, ಪಾಂಡು, ಕೃಷ್ಣೇಗೌಡ, ರಮೇಶ್‌, ಬಾಲಕೃಷ್ಣ, ಚಂದ್ರಶೇಖರ್‌ ಹಾಜರಿದ್ದರು.

ಟಾಪ್ ನ್ಯೂಸ್

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.