ಹೋಟೆಲ್‍ನಲ್ಲಿ ಕ್ಷುಲ್ಲಕ ವಿಚಾರಕ್ಕೆ ಜಗಳ: ಜ್ಯೋತಿಷಿ ಹತ್ಯೆ! ಸ್ಥಳದಲ್ಲಿ ಬಿಗುವಿನ ವಾತಾವರಣ

Team Udayavani, Nov 6, 2020, 7:58 PM IST

ಕ್ಷುಲ್ಲಕ ವಿಚಾರದ ಜಗಳದಲ್ಲಿ ಜ್ಯೋತಿಷಿ ಹತ್ಯೆ! ಸ್ಥಳದಲ್ಲಿ ಬಿಗುವಿನ ವಾತಾವರಣ

ಕಲಬುರಗಿ: ಹೋಟೆಲ್‍ನಲ್ಲಿ ಗ್ರಾಹಕರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳದಲ್ಲಿ ಜ್ಯೋತಿಷಿಯೊಬ್ಬ ಹಾಡುಹಗಲೇ ಕೊಲೆಯಾದ ಘಟನೆ ಶುಕ್ರವಾರ ಚಿತ್ತಾಪುರ ತಾಲೂಕಿನ ಹಳಕರ್ಟಿ ಗ್ರಾಮದಲ್ಲಿ ನಡೆದಿದೆ.

ಹಳಕರ್ಟಿ ಗ್ರಾಮದ ಸುರೇಶ ಭೀಮರಾವ್ ವಾಸ್ಟರ್ (58) ಕೊಲೆಯಾದ ವ್ಯಕ್ತಿ. ರಾಜಕೋಟ್ ನಲ್ಲಿ ಜ್ಯೋತಿಷ್ಯ ಹೇಳಿ ಜೀವನ ನಡೆಸುತ್ತಿರುವ ಸುರೇಶ ವಾಸ್ಟರ್, ಹಳಕರ್ಟಿ ಗ್ರಾಮದಲ್ಲಿ ಸ್ವಂತ ಜಮೀನು ಮತ್ತು ಮನೆ ಹೊಂದಿದ್ದಾರೆ. ಜಮೀನು ನೊಂದಣಿ ವಿಷಯಕ್ಕೆ ಸಂಬಂಧಿಸಿದಂತೆ ಗುರುವಾರ ಕುಟುಂಬ ಸಮೇತ ಸ್ವಗ್ರಾಮಕ್ಕೆ ಆಗಮಿಸಿದ್ದರು.

ಶುಕ್ರವಾರ ಗ್ರಾಮದ ಚೌಡೇಶ್ವರ ವೃತ್ತದ ಹೋಟೆಲ್‍ವೊಂದರಲ್ಲಿ ಸುರೇಶ ಬಜ್ಜಿ ತಿನ್ನಲು ಹೋಗಿದ್ದರು ಎನ್ನಲಾಗಿದ್ದು, ಈ ಸಂದರ್ಭದಲ್ಲಿ ಹೋಟೆಲ್‍ನಲ್ಲಿದ್ದ ಗ್ರಾಹಕರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಮಾತಿಗೆ ಮಾತು ಬೆಳೆದು ಹೊಡೆದಾಟಕ್ಕೆ ಕಾರಣವಾಗಿದೆ. ಮಾರಾಮಾರಿಯಲ್ಲಿ ನೆಲಕ್ಕುರುಳಿದ ಸುರೇಶ ವಾಸ್ಟರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಅರ್ನಾಬ್ ವಿಚಾರಣೆ ಮುಂದೂಡಿಕೆ : ಮಹಾರಾಷ್ಟ್ರ ವಿಧಾನಸಭಾ ಕಾರ್ಯದರ್ಶಿಗೆ ಸುಪ್ರೀಂ ನೋಟೀಸ್

ಘಟನಾ ಸ್ಥಳಕ್ಕೆ ಚಿತ್ತಾಪುರ ಸಿಪಿಐ ಕೃಷ್ಣಪ್ಪ ಕಲ್ಲದೇವರು ಹಾಗೂ ವಾಡಿ ಠಾಣೆ ಪಿಎಸ್‍ಐ ವಿಜಯಕುಮಾರ ಭಾವಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮದ ಮಹೆಬೂಬ ಅಲಿ, ಸೈಯದ್ ಪಾಷಾ, ಸೈಯದ್ ಮಜರ್, ಶೋಯಲ್, ಮಹ್ಮದ್ ಶಾರುಖ್, ಸೈಯದ್ ಹಜಾರ್ ಸೇರಿದಂತೆ ಒಟ್ಟು ಆರು ಜನರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಹಳಕರ್ಟಿ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಠಿಯಾಗಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ.

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.