ರೈತ ವಿರೋಧಿ ಕಾಯ್ದೆ ವಿರುದ್ಧ ಆಕ್ರೋಶ


Team Udayavani, Nov 6, 2020, 8:28 PM IST

ರೈತ ವಿರೋಧಿ ಕಾಯ್ದೆ ವಿರುದ್ಧ ಆಕ್ರೋಶ

ಶಿವಮೊಗ್ಗ: ರೈತ ವಿರೋಧಿಯಾಗಿರುವ ಕೃಷಿ ಮಸೂದೆ, ಕಾರ್ಮಿಕ ಮಸೂದೆ, ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಅನ್ನದಾತರು, ಕೂಲಿ ಕಾರ್ಮಿಕರು ಹಾಗೂ ಡಿಎಸ್‌ಎಸ್‌ ಸಂಘಟನೆಗಳ ಕಾರ್ಯಕರ್ತರು ಹೆದ್ದಾರಿ ಬಂದ್‌ ಮಾಡಿ ಹೋರಾಟ ನಡೆಸಿದರು.

ಅಖೀಲ ಭಾರತ ರೈತ ಸಂಘರ್ಷ ಸಮಿತಿಕರೆಯ ಮೇರೆಗೆ ರೈತ ಸಂಘಟನೆಗಳು, ಕರ್ನಾಟಕ ಜನಶಕ್ತಿ, ಕರ್ನಾಟಕ ದಲಿತ ಸಂಘರ್ಷ ಸಮಿತಿಗಳು(ಅಂಬೇಡ್ಕರ್‌ ವಾದ) ಗುರುವಾರ ನಗರದ ಎಂ.ಅರ್‌. ಎಸ್‌.ನಲ್ಲಿ ಹೆದ್ದಾರಿ ಬಂದ್‌ ಮಾಡಿ ಸರ್ಕಾರಗಳ ವಿರುದ್ಧ ಅಕ್ಷರಶಃ ರಣಕಹಳೆ ಮೊಳಗಿಸಿದವು. ಕೋವಿಡ್  ಲಾಕ್‌ಡೌನ್‌ ಸಂದರ್ಭ ಬಳಸಿಕೊಂಡು ರೈತರು ಮನೆಯಿಂದ ಹೊರಗಡೆ ಬರದಂತೆ ನಿರ್ಬಂಧ ಹೇರಿ ಜನರ ಬಾಯಿಗೆ ಬಟ್ಟೆ ಕಟ್ಟಿ , ಚರ್ಚೆಗೆ ಅವಕಾಶ ನೀಡದೆ ಸುಗ್ರೀವಾಜ್ಞೆಗಳ ಮೂಲಕ ಕೃಷಿ, ಕಾರ್ಮಿಕ, ಭೂ ಸುಧಾರಣೆ ಕಾಯ್ದೆಗಳನ್ನು ಜಾರಿಗೆ ತಂದಿದೆ. ಕೃಷಿ ಮಸೂದೆಗಳನ್ನು ವಿರೋಧಿಸಿ ರಾಜ್ಯದಾದ್ಯಂತ ಅನ್ನದಾತರು ಬೀದಿಗಿಳಿದು ಹೋರಾಟ ನಡೆಸಿದರೂ ಸರ್ಕಾರ ರೈತರ ಕೂಗನ್ನೇ ಕೇಳದೆ ಸರ್ಕಾರ ಜಾಣಕುರುಡತನ ಪ್ರದರ್ಶನ ಮಾಡಿ, ಅನ್ನ ಕೊಡುವ ರೈತರಿಗಿಂತ ಬಂಡವಾಳಶಾಹಿಗಳ ಮಾತಿಗೆ ಬೆಲೆ ಕೊಡುತ್ತಿವೆ ಎಂದು ಪ್ರತಿಭಟನಾನಿರತ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ತಕ್ಷಣವೇ ಮೆಕ್ಕೆಜೋಳ ಖರೀದಿ ಕೇಂದ್ರವನ್ನು ಆರಂಬಿಸಬೇಕು ಹಾಗೂ ಪಂಜಾಬ್‌ ಸರ್ಕಾರದಂತೆ ರಾಜ್ಯ ಸರ್ಕಾರವು ಕೃಷಿ ಉತ್ಪನ್ನಗಳನ್ನು ಎಂಎಸ್‌ಪಿ ಬೆಲೆಗಿಂತ ಕಡಿಮೆ ಬೆಲೆಗೆ ಮಾರಾಟ ಮಾಡುವುದು ಅಪರಾಧವೆಂದು ಘೋಷಿಸಬೇಕು. ಜೊತೆಗೆ ಕೇರಳ ಸರ್ಕಾರದಂತೆ ತರಕಾರಿ ಬೆಳೆಗಳಿಗೆ ಬೆಲೆ ನಿಗದಿ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಸಣ್ಣ ಮತ್ತು ಮಧ್ಯಮ ವರ್ಗದ ರೈತರು ತಮ್ಮ ಜಮೀನುಗಳನ್ನು ದೊಡ್ಡ ದೊಡ್ಡ ಶ್ರೀಮಂತರು ಹಾಗೂ ಭೂ ಮಾಫಿಯಾದವರು ತೋರಿಸುವ ಹಣದ ಆಸೆಗಾಗಿ ಜಮೀನು ಸಂಪೂರ್ಣವಾಗಿ ಕಳೆದುಕೊಂಡು ನಿರಾಶ್ರಿತರಾಗುತ್ತಾರೆ. ಹಾಗಾಗಿ ಈ ಕಾಯ್ದೆಯನ್ನು ಕೂಡಲೇ ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿದರು.

ರೈತಸಂಘದ ಗೌರವಾಧ್ಯಕ್ಷ ಎಚ್‌. ಆರ್‌. ಬಸವರಾಜಪ್ಪ ಮಾತನಾಡಿ, ರೈತರಲ್ಲದವರು ಕೃಷಿ ಭೂಮಿ ಖರೀದಿ ಮಾಡಲು ಅವಕಾಶ ಕೊಟ್ಟಿರುವುದು ಬಂಡವಾಳಶಾಹಿಗಳಿಗೆ ಹಗ್ಗ, ಕಣ್ಣಿ ಕಳಚಿದಂತಾಗಿದೆ ಎಂದು ಹೇಳಿದರು. ರೈತರು ಶಾಶ್ವತವಾಗಿ ಕೃಷಿಯಿಂದ ಹೊರಗುಳಿಯುವಂತೆ ಮಾಡುವ ವ್ಯವಸ್ಥಿತಿ ಪಿತೂರಿ ಮಾಡಿದ್ದಾರೆ. ಕೃಷಿ ಮಸೂದೆಗಳನ್ನು ಕೂಡಲೇ ವಾಪಸ್‌ ಪಡೆಯಬೇಕು. ಇಲ್ಲವಾದರೆ ಕೋವಿಡ್‌ ಮುಗಿದ ನಂತರ ರೈತರೆಲ್ಲರೂ ಬೀದಿಗಳಿದು ಹೋರಾಟ ಮಾಡುತ್ತೇವೆ. ಪ್ರಧಾನಿ ಮೋದಿಯವರ ಬಣ್ಣದ ಮಾತುಗಳನ್ನು ನಾವುಗಳು ನಂಬುವುದಿಲ್ಲ ಎಂದು ಹೇಳಿದರು.

ಟ್ರಾಫಿಕ್‌ ಜಾಮ್‌: ಸರ್ಕಾರಗಳ ರೈತ ವಿರೋಧಿ  ಕಾಯ್ದೆಗಳನ್ನು ವಿರೋಧಿಸಿ  ಹಮ್ಮಿಕೊಂಡಿದ್ದ ಹೆದ್ದಾರಿ ಬಂದ್‌ನಿಂದ ಮುಕ್ಕಾಲು ತಾಸಿಗೂ ಹೆಚ್ಚು ಕಾಲ ಟ್ರಾಫಿಕ್‌ ಜಾಮ್‌ ಆಗಿತ್ತು. ರೈತರು, ಕೃಷಿ ಕೂಲಿ ಕಾರ್ಮಿಕರು ರಸ್ತೆಗೆ ಅಡ್ಡ ಕುಳಿತಿದ್ದರು. ಇದರಿಂದ ನಾಲ್ಕು ದಿಕ್ಕಿನಿಂದಲೂ ಬರುವ ವಾಹನಗಳು ಒಂದು ಕಿಮೀವರೆಗೂ ವಾಹನಗಳು ನಿಂತಿದ್ದವು. ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಇದ್ದದ್ದರಿಂದ ಬಸ್‌ ಗಳು ಸಂಚರಿಸಲು ತೊಂದರೆಯಾದ ಘಟನೆಯೂ ನಡೆಯಿತು. ಪೊಲೀಸರು ಮಧ್ಯ ಪ್ರವೇಶಿಸಿ, ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳಲು ಅವಕಾಶ ಮಾಡಿಕೊಟ್ಟರು.

ರೈತಸಂಘದ ಮುಖಂಡರಾದ ಎಸ್‌. ಶಿವಮೂರ್ತಿ, ಇ.ಬಿ. ಜಗದೀಶ್‌, ಟಿ.ಎಂ. ಚಂದ್ರಪ್ಪ, ಕೆ. ರಾಘವೇಂದ್ರ, ಜ್ಞಾನೇಶ್‌, ಹಿಟ್ಟೂರು ರಾಜು, ನಾಗರಾಜ್‌ ಪುರದಾಳ್‌ ಹಾಗೂ ಪ್ರಮುಖರಾದ ಕೆ.ಎಲ್‌. ಅಶೋಕ್‌, ಟಿ.ಎಚ್‌. ಹಾಲೇಶಪ್ಪ, ಶಿವಕುಮಾರ್‌ ಇದ್ದರು.

ಟಾಪ್ ನ್ಯೂಸ್

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.