ಖೇಲೋ ಇಂಡಿಯಾದಲ್ಲಿ ಅವಕಾಶ ನೀಡುತ್ತೇವೆಂದು ನಂಬಿಸಿ ವಂಚನೆ: ಕಬಡ್ಡಿಪಟು ಸೇರಿ ಮೂವರ ಬಂಧನ
ಸಾಮಾಜಿಕ ಜಾಲತಾಣದಲ್ಲಿ ಖಾತೆ ತೆರೆದು ಜಾಹೀರಾತು ನೀಡಿದ್ದ ವಂಚಕರು
Team Udayavani, Nov 7, 2020, 10:17 AM IST
ನವದೆಹಲಿ: ಮುಂದಿನ ವರ್ಷ ಹರ್ಯಾಣದ ಪಂಚಕುಲದಲ್ಲಿ ನಡೆಯಲಿರುವ ಖೇಲೋ ಇಂಡಿಯಾ ಕೂಟದಲ್ಲಿ ಆಡಲು ಅವಕಾಶ ನೀಡುತ್ತೇವೆಂದು ಹೇಳಿ, ದೇಶಾದ್ಯಂತ ಅಥ್ಲೀಟ್ಗಳನ್ನು ವಂಚಿಸಿದ್ದ ಮೂವರನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಭಾರತ ಕ್ರೀಡಾ ಪ್ರಾಧಿಕಾರ (ಸಾಯ್) ಎರಡು ದಿನಗಳ ಹಿಂದೆ ನೀಡಿದ್ದ ದೂರನ್ನು ಆಧರಿಸಿ ಈ ಬಂಧನವಾಗಿದೆ. ವಂಚನೆಯಲ್ಲಿ ಒಬ್ಬ ಮಾಜಿ ಕಬಡ್ಡಿ ಪಟು ಕೂಡಾ ಸೇರಿದ್ದಾರೆ. ಸಾಮಾಜಿಕ ತಾಣಗಳಲ್ಲಿ ಪುಟವನ್ನು ತೆರೆದಿದ್ದ ವಂಚಕರು, ಅಲ್ಲಿ ಕೂಟದಲ್ಲಿ ಭಾಗವಹಿಸಲು ಅರ್ಜಿ ಆಹ್ವಾನಿಸಿದ್ದರು. ಅದಕ್ಕಾಗಿ ತಲಾ 6,000 ರೂ. ಪಾವತಿಸಬೇಕೆಂದು ತಿಳಿಸಿದ್ದರು.
ಆರೋಪಿಗಳನ್ನು ಸಂಜಯ್ ಪ್ರತಾಪ್ ಸಿಂಗ್, ಅನುಜ್ಕುಮಾರ್, ರವಿ ಎಂದು ಗುರ್ತಿಸಲಾಗಿದೆ. ಇದರಲ್ಲಿ ಸಂಜಯ್ ಆಗ್ರಾದ ಮಾಜಿ ಕಬಡ್ಡಿ ಆಟಗಾರ.
ಅವರು ರುದ್ರಪ್ರತಾಪ್ ಸಿಂಗ್ ಎಂಬ ಹೆಸರಿನಲ್ಲಿ ನಕಲಿ ಗುರುತಿನ ಪತ್ರ ತಯಾರಿಸಿಕೊಂಡಿದ್ದರು. ಇದರ ಮೂಲಕವೇ ಜನರನ್ನು ವಂಚಿಸುತ್ತಿದ್ದರು. ಈ ಆಟಗಾರರ ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಚಾಲಕ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.