150 ಸರ್ಕಾರಿ ಐಟಿಐ ಉನ್ನತೀಕರಣ

ಟಾಟಾ ಟೆಕ್ನಾಲಜಿ, ಸರ್ಕಾರದಿಂದ ಒಟ್ಟು 4636 ಕೋಟಿ ರೂ. ವೆಚ್ಚದ ‌ ಯೋಜನೆಗೆ ಒಪ್ಪಂದ

Team Udayavani, Nov 7, 2020, 11:44 AM IST

150 ಸರ್ಕಾರಿ ಐಟಿಐ ಉನ್ನತೀಕರಣ

ಬೆಂಗಳೂರು: ರಾಜ್ಯದ ಕೈಗಾರಿಕಾ ತರಬೇತಿ ಸಂಸ್ಥೆಗಳ (ಐಟಿಐ) ಗುಣಮಟ್ಟ ಹೆಚ್ಚಿಸುವ ಮೂಲಕಯುವಜನತೆಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವನಿಟ್ಟಿನಲ್ಲಿ ಸರ್ಕಾರಿ ಸ್ವಾಮ್ಯದ 150 ಐಟಿಐಗಳನ್ನು 4636 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಮ್ಮುಖದಲ್ಲಿ ರಾಜ್ಯ ಸರ್ಕಾರ ಹಾಗೂ ಟಾಟಾ ಟೆಕ್ನಾಲಜಿ ಲಿಮಿಟೆಡ್‌ ಕಂಪನಿ ನಡುವೆ ಶುಕ್ರವಾರ ಒಪ್ಪಂದ ಏರ್ಪಟ್ಟಿತು.

ಗೃಹ ಕಚೇರಿ “ಕೃಷ್ಣಾ’ದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಟಾಟಾಟೆಕ್ನಾಲಜಿಸ್‌ಕಂಪನಿಅಧ್ಯಕ್ಷ ಆನಂದ್‌ ಭಡೆ ಹಾಗೂ ಕೌಶಲ್ಯಾಭಿವೃದ್ಧಿ ಮತ್ತು ಜೀವನೋ ಪಾಯ ಇಲಾಖೆಯ ಕಾರ್ಯದರ್ಶಿ ಡಾ.ಎಸ್‌. ಸೆಲ್ವಕುಮಾರ್‌ ಅವರು ಒಪ್ಪಂದಕ್ಕೆ ಸಹಿ ಹಾಕಿದರು. ದೇಶದಲ್ಲೇ ಪ್ರಥಮ ಬಾರಿಗೆ ರಾಜ್ಯ ಸರ್ಕಾರ ಹಾಗೂ ಉದ್ಯಮಗಳು ಕೈಜೋಡಿಸಿರುವ ವಿನೂತನ ಪ್ರಯತ್ನಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಸಿಎಂ, ಟಾಟಾ ಟೆಕ್ನಾಲಜಿಸ್‌ ಕಂಪನಿ ಸಹಭಾಗಿತ್ವದಲ್ಲಿ 150 ಸರ್ಕಾರಿ ಐಟಿಐ ಸಂಸ್ಥೆಗಳನ್ನು 4636 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಿಸಲಾಗುತ್ತದೆ. ಈ ಪೈಕಿಟಾಟಾಟೆಕ್ನಾಲಜಿಸ್‌ಕಂಪನಿ ಶೇ. 88 ಅಂದರೆ 4080 ಕೋಟಿ ರೂ. ಭರಿಸಲಿದೆ. ರಾಜ್ಯ ಸರ್ಕಾರ556ಕೋಟಿರೂ.ಹಾಗೂ ಮೂಲ ಸೌಕರ್ಯಕ್ಕಾಗಿ 105 ಕೋಟಿ ರೂ. ಒಟ್ಟು 661ಕೋಟಿ. ರೂ. ವೆಚ್ಚ ನೀಡಲಿದೆ ಎಂದರು. ಸದ್ಯ ಕೈಗಾರಿಕೆಗಳಿಗೆ ಅಗತ್ಯವಿರುವ ಸ್ಮಾರ್ಟ್‌ ಉತ್ಪಾದನೆಯನ್ನು ನಿರ್ವಹಿಸಲು ಪ್ರಸ್ತುತ ಐಟಿಐ ಸಂಸ್ಥೆಗಳು ಪೂರ್ಣವಾಗಿ ಸಜ್ಜಾಗಿಲ್ಲ. ಈ ಯೋಜನೆಯಡಿ 20 ಕೈಗಾರಿಕಾ ಪಾಲುದಾರರೊಂದಿಗೆ ಟಾಟಾ ಟೆಕ್ನಾಲಜಿಸ್‌ ಕಂಪನಿಯು ಆಧುನಿಕ ತಂತ್ರಜ್ಞಾನದ ಜತೆಗೆ ತರಬೇತಿ ಮತ್ತು ಹೆಚ್ಚುವರಿ ಸೇವೆಯನ್ನು ನೀಡಲಿದೆ. ಇದರಿಂದ ಇತರೆ ಸಂಸ್ಥೆಗಳ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ರಾಜ್ಯ, ದೇಶ ಜಾಗತಿಕ ಮಟ್ಟದಲ್ಲಿ ಉತ್ತಮ ಉದ್ಯೋಗ ಪಡೆಯಲು ಸಹಕಾರಿಯಾಗಲಿದೆ ಎಂದರು. ಖಾಸಗಿ ಕಂಪನಿಗಳು 4000 ಕೋಟಿ ರೂ.ಗೂ ಹೆಚ್ಚು ನೆರವನ್ನು ಕಾರ್ಪೊರೇಟ್‌ ಸಾಮಾಜಿಕ ಹೊಣೆಗಾರಿಕೆಯಡಿ (ಸಿಎಸ್‌ಆರ್‌) ನೀಡುತ್ತಿರುವುದು ಇದೇ ಮೊದಲು ಎಂದರು.

ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ, ಈ ಉಪಕ್ರಮ ದಿಂದ ಪ್ರತಿವರ್ಷ ಕನಿಷ್ಠ1 ಲಕ್ಷಕ್ಕೂಹೆಚ್ಚುಯುವಕರಿಗೆ ಉತ್ತಮ ಉದ್ಯೋಗಾವಕಾಶ ಸಿಗುವ ನಿರೀಕ್ಷೆ ಇದೆ. ಜತೆಗೆ ಕೈಗಾರಿಕೆಗಳ ಬೇಡಿಕೆ ಆಧರಿಸಿ 10 ಹೊಸ ಕೋರ್ಸ್‌ಗಳನ್ನು ಆರಂಭಿಸಲಾಗುತ್ತಿದೆ. ಮುಂದಿನದಿನಗಳಲ್ಲಿ ಈ ಐಟಿಐ ಸಂಸ್ಥೆಗಳಲ್ಲಿ ಕೈಗಾರಿಕೆಗಳಿಗೆ ಅಗತ್ಯವಿರುವ ಕೌಶಲ್ಯ ತರಬೇತಿಯನ್ನೂ ನೀಡಲಾಗುವುದು ಎಂದರು.

ಟಾಟಾ ಟೆಕ್ನಾಲಜಿಸ್‌ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾದ ಸಿಇಒ ವಾರನ್‌ ಹ್ಯಾರಿಸ್‌, ಕೈಗಾರಿಕಾ ಕ್ಷೇತ್ರದಲ್ಲಿನ ಕ್ಷಿಪ್ರ ಬದಲಾವಣೆಗೆಪೂರಕವಾಗಿ ವಿದ್ಯಾರ್ಥಿಗಳು ಅತ್ಯಾಧುನಿಕ ತರಬೇತಿ ಪಡೆಯಲು ಈ ಉಪಕ್ರಮದಿಂದ ಅನುಕೂಲವಾಗಲಿದೆ. ಅತ್ಯಾಧುನಿಕ ಯಂತ್ರೋಪಕರಣ, ತಂತ್ರಾಂಶ, ಹಾರ್ಡ್‌ವೇರ್‌, ಸಾಫ್ಟ್ವೇರ್‌ ಮತ್ತು ತರಬೇತಿಗಳಿಗೆ ಆದ್ಯತೆ ನೀಡಲಾಗುವುದು ಎಂದರು.

ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌,  ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಇ.ವಿ. ರಮಣರೆಡ್ಡಿ, ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತ ಡಾ.ಕೆ.ವಿ. ತ್ರಿಲೋಕ್‌ಚಂದ್ರ ಇತರ ಹಿರಿಯ ಅಧಿಕಾರಿಗಳಿದ್ದರು.

ಐಟಿಐ ವಿದ್ಯಾರ್ಥಿಗಳಿಗೆ ಆಧುನಿಕ ತರಬೇತಿ :  ಈ ಒಪ್ಪಂದದ ಅನ್ವಯ ಐಟಿಐ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಉದ್ಯೋಗಾವಕಾಶ ಸೃಷ್ಟಿಸುವ ಉದ್ದೇಶ ಹೊಂದಿದೆ.ರಾಜ್ಯದಲ್ಲಿ270 ಸರ್ಕಾರಿ,196 ಅನುದಾನಿತ,1247 ಖಾಸಗಿ ಐಟಿಐ ಸೇರಿದಂತೆ ಒಟ್ಟು1713 ಐಟಿಐ ಸಂಸ್ಥೆಗಳಿದ್ದು, ಪ್ರತಿವರ್ಷ 1.8 ಲಕ್ಷ ಅಭ್ಯರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ. ಸದ್ಯ150 ಐಟಿಐ ಸಂಸ್ಥೆಗಳಲ್ಲಿ ನೀಡಲಾಗುವ ವಿಶೇಷ ತರಬೇತಿಗಳ ಅನುಕೂಲವನ್ನು ಇತರ ಐಟಿಐ, ಪಾಲಿಟೆಕ್ನಿಕ್‌ ಮತ್ತು ಎಂಜಿನಿಯರಿಂಗ್‌ ವಿದ್ಯಾರ್ಥಿಗಳೂ ಪಡೆದುಕೊಳ್ಳಲು ಅವಕಾಶಕಲ್ಪಿಸಲಿದೆ. ಒಟ್ಟು 10 ವರ್ಷ 9 ತಿಂಗಳಿಗೆ ಒಪ್ಪಂದ ಏರ್ಪಟ್ಟಿದ್ದು, ಟಾಟಾ ಟೆಕ್ನಾಲಜಿಸ್‌ಕಂಪನಿಯು ತರಬೇತಿ, ಮಾರ್ಗದರ್ಶನ ಹಾಗೂ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಸಲು “ಟಿಸಿಪಿಸಿ’ (ಟ್ರೈನಿಂಗ್‌, ಕೌನ್ಸೆಲಿಂಗ್‌ ಆ್ಯಂಡ್‌ ಪ್ಲೇಸ್‌ಮೆಂಟ್‌ ಸೆಲ್) ಬಲಪಡಿಸುವುದು. ಹೊಸ ಯಂತ್ರೋಪಕರಣ, ತಂತ್ರಜ್ಞಾನದ ಅಳವಡಿಕೆ ಮೂಲಕ ಪ್ರಯೋಗಾಲಯಗಳನ್ನು ಉನ್ನತೀಕರಿಸುವುದು ಹಾಗೂ ಕೈಗಾರಿಕೆಯ ಸ್ಥಿತ್ಯಂತರಗಳಿಗೆ ತಕ್ಕಂತೆ ಅಧ್ಯಯನ ವಿಷಯಗಳನ್ನು ರೂಪಿಸುವ ವ್ಯವಸ್ಥೆಕಲ್ಪಿಸಲಿದೆ.

ಮೊದಲ  ಹಂತದಲ್ಲಿ 6ಐಟಿಐ ಉನ್ನತೀಕರಣ : ವಿದ್ಯುಚ್ಛಾಲಿತ ವಾಹನಗಳು,ಕೃಷಿ ಯಂತ್ರೋಪಕರಣಗಳು, ಏರೋಸ್ಪೇಸ್‌ ಮತ್ತು ರಕ್ಷಣಾ ಉಪಕರಣಗಳು, ತೋಟಗಾರಿಕೆ ಮತ್ತು ಸ್ಮಾರ್ಟ್‌ಸಿಟಿ ಹಾಗೂ ಇತರ ವಲಯಗಳಲ್ಲಿ ತರಬೇತಿಗೆ ಆದ್ಯತೆ ನೀಡಲಿದೆ. ಟಾಟಾ ಟೆಕ್ನಾಲಜಿಸ್‌ ಕಂಪನಿ ಹಾಗೂ ಸಹಭಾಗಿತ್ವದ ಇತರೆ ಕೈಗಾರಿಕೆಗಳಲ್ಲಿನ300 ತರಬೇತಿದಾರರು ಈ 150 ಐಟಿಐಗಳಲ್ಲಿ ತರಬೇತಿ ನೀಡಲಿದ್ದಾರೆ. ರಾಜ್ಯದ ಎಲ್ಲ ಸರ್ಕಾರಿ ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದ ಐಟಿಐಗಳಲ್ಲಿ ಆನ್‌ಲೈನ್‌ ತರಬೇತಿ ನೀಡಲಾಗುತ್ತದೆ. ಮೊದಲ ಹಂತದಲ್ಲಿ ಪೀಣ್ಯ, ಹೊಸೂರು ರಸ್ತೆ, ಬಳ್ಳಾರಿ, ಮೈಸೂರು, ದಾಸ್ತಿಕೊಪ್ಪ ಹಾಗೂಶಿಕಾರಿಪುರದ ಸರ್ಕಾರಿ ಐಟಿಐಗಳ ಉನ್ನತೀಕರಣ ಕೈಗೊಳ್ಳಲಾಗುವುದು.

ಟಾಪ್ ನ್ಯೂಸ್

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.