ಭೀಮಾ ತೀರದ ಭೈರಗೊಂಡ ಮೇಲೆ ಗುಂಡಿನ ದಾಳಿ ಪ್ರಕರಣ: ಮತ್ತೆ ಐವರ ಬಂಧನ
Team Udayavani, Nov 7, 2020, 12:23 PM IST
ವಿಜಯಪುರ: ಭೀಮಾತೀರದ ರೌಡಿಶೀಟರ್ ಮಹಾದೇವ ಸಾಹುಕಾರ್ ಭೈರಗೊಂಡ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಪೊಲೀಸರು ಮತ್ತೆ ಐವರು ಆರೋಪಗಳನ್ನು ಬಂಧಿಸಿದ್ದಾರೆ.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಬಂಧಿತರ ಕುರಿತು ಮಾಹಿತಿ ನೀಡಿದ ಎಸ್ಪಿ ಅನುಪಮ್ ಅಗರವಾಲ, ಅತಾಲಟ್ಟಿ ಗ್ರಾಮದ ಯಾಶೀನ್ ರಮಜಾನಸಾಬ ದಂದರಗಿ (25), ಕರೆಪ್ಪ ಊರ್ಫ್ ಗೂಳಿ ಮಹಾದೇವ ಸೊನ್ನದ (25), ಸಿದ್ದು ಊರ್ಫ್ ಸಿದರಾಯ ಬಸಪ್ಪ ಬೊಮ್ಮನಜೋಗಿ (34), ಅಲಿಯಾಬಾದ ಗ್ರಾಮದ ಸಂಜು ಊರ್ಫ್ ಸಚಿನ ತುಕಾರಾಮ ಮಾನವರ (28) ಹಾಗೂ ಚಡಚಣದ ರವಿ ಧರೆಪ್ಪ ಬಂಡಿ (20) ಬಂಧಿತ ಆರೋಪಿಗಳು ಎಂದು ವಿವರಿಸಿದರು.
ಇದನ್ನೂ ಓದಿ:ಗುಂಡೇಟಿನಿಂದ ಗಾಯಗೊಂಡ ಮಹಾದೇವ ಭೈರಗೊಂಡ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರ
ಬಂಧಿತರಿಂದ 2 ಕಂಟ್ರಿ ಪಿಸ್ತೂಲ್, 5 ಜೀವಂತ ಗುಂಡು, 4 ಮೊಬೈಲ್, 1 ಆಟೋ ರಿಕ್ಷಾ, 1 ಮಚ್ಚು ವಶಕ್ಕೆ ಪಡೆಯಲಾಗಿದೆ.
ಈವರೆಗೆ ಒಟ್ಟು 7 ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ. ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಎಎಸ್ಪಿ ಡಾ.ರಾಮ ಅರಸಿದ್ದಿ, ಡಿವೈಎಸ್ ಪಿ ಲಕ್ಷ್ಮಿನಾರಾಯಣ, ಸಂಕದ ಸಿಪಿಐಗಳಾದ ಎಂ.ಕೆ. ದ್ಯಾಮಣ್ಣವರ, ರವೀಂದ್ರ ನಾಯ್ಕೋಡಿ, ಸುನೀಲ ಕಾಂಬಳೆ, ಸುರೇಶ ಬೆಂಡೆಗುಂಬಳ, ಬಸವರಾಜ ಮೂಕರ್ತಿಹಾಳ ಹಾಗೂ ಪಿಎಸ್ ಐ ತಂಡ ಯಶಸ್ವಿಯಾಗಿದೆ ಎಂದು ಶ್ಲಾಘಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.