ಚೆಕ್ ಬೌನ್ಸ್ ಪ್ರಕರಣ: ಸಿದ್ದಾರ್ಥ್ ಹೆಗ್ಡೆ ಪತ್ನಿ ಮಾಳವಿಕಾಗೆ ಬಿಗ್ ರಿಲೀಫ್ ನೀಡಿದ ಕೋರ್ಟ್
Team Udayavani, Nov 7, 2020, 2:20 PM IST
ಚಿಕ್ಕಮಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಕಾಫಿ ಡೇ ಸಿದ್ದಾರ್ಥ್ ಹೆಗ್ಡೆ ಪತ್ನಿ ಮಾಳವಿಕಾ ಅವರಿಗೆ ಸದ್ಯ ರಿಲೀಫ್ ಸಿಕ್ಕಿದೆ. ಇಂದು ಕೋರ್ಟ್ ಗೆ ಹಾಜರಾದ ಮಾಳವಿಕ ಅವರಿಗೆ ಜಾಮೀನು ನೀಡಲಾಗಿದೆ.
ಕಾಫಿ ಬೆಳೆಗಾರರ ಕೋಟ್ಯಾಂತರ ರೂಪಾಯಿ ಸಾಲ ಉಳಿಸಿಕೊಂಡಿದ್ದ ಹಿನ್ನಲೆಯಲ್ಲಿ ಕಾಫಿ ಬೆಳೆಗಾರರು ಎಬಿಸಿ ಸಂಸ್ಥೆ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನಲೆಯಲ್ಲಿ ನ್ಯಾಯಾಲಯವು ಮಾಳವಿಕಾ ಸೇರಿದಂತೆ 8 ಮಂದಿಗೆ ನೋಟಿಸ್ ನೀಡಿತ್ತು.
ಆದರೆ ಕೋರ್ಟ್ ಗೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಮಾಳವಿಕಾಗೆ ಬಂಧನ ವಾರಂಟ್ ಹೊರಡಿಸಿದ್ದರು. ಇದೀಗ ಮಾಳವಿಕಾ ಅವರು ಮೂಡಿಗೆರೆ ಜೆಎಂಎಫ್ಸಿ ಕೋರ್ಟ್ ಗೆ ಹಾಜರಾಗಿದ್ದು, ಮಾಳವಿಕಾ ಸೇರಿದಂತೆ ಐವರಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಕಾಫಿ ಬೆಳೆಗಾರ ನಂದೀಶ್ ಕೆ ಎಂಬುವವರು ಚೆಕ್ ಬೌನ್ಸ್ ಪ್ರಕರಣವನ್ನು ದಾಖಲಿಸಿದ್ದರು. ಎಬಿಸಿ ಕಂಪನಿ 45 ಲಕ್ಷ ಹಣ ನೀಡಬೇಕು ಆದರೆ ಕೇವಲ 4 ಲಕ್ಷ ಮಾತ್ರ ನೀಡಿದೆ, ಉಳಿದ ಹಣವನ್ನು ಚೆಕ್ ನಲ್ಲಿ ನಮೂದಿಸಿಲ್ಲ, ಅವರು ನೀಡಿದ್ದ ಚೆಕ್ ಕೂಡ ಬೌನ್ಸ್ ಆಗಿದೆ ಎಂದು ನಂದೀಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.