ಕೊಡೇರಿ ಕಿರುಬಂದರಿನಲ್ಲಿ ಮೀನು ಹರಾಜು ಪ್ರಕ್ರಿಯೆಯ ಸಂದರ್ಭ 2 ಗುಂಪುಗಳ ನಡುವೆ ಮಾರಾಮಾರಿ


Team Udayavani, Nov 7, 2020, 2:46 PM IST

koderi

ಬೈಂದೂರು: ಕೊಡೇರಿ ಕಿರುಬಂದರಿನಲ್ಲಿ ಮೀನು ಹರಾಜು ಪ್ರಕ್ರಿಯೆಯ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ ಎಂದು ವರದಿಯಾಗಿದೆ.

ನಾಡದೋಣಿ ಮೀನುಗಾರರ ಸಂಘ ಹಾಗೂ ಕಿರಿಮಂಜೇಶ್ವರ ಕೊಡೇರಿ ತಂಡಗಳ ನಡುವೆ ಈ ಗಲಾಟೆ ನಡೆದಿದ್ದು, ಮೀನುಗಾರಿಕೆ ಇಲಾಖೆ ‘ಮೀನು ಹರಾಜು ಪ್ರಕ್ರಿಯೆ’ಗೆ ಅನುಮತಿ ನೀಡಿರುವುದು ಈ ವಾಗ್ವಾದಕ್ಕೆ ಕಾರಣ ಎನ್ನಲಾಗಿದೆ.

ಕೊಡೇರಿ ಕಿರು ಬಂದರಿನಲ್ಲಿ ಮೀನುಗಾರಿಕೆ  ಮತ್ತು ಬಂದರು ಇಲಾಖೆಯ ಅವೈಜ್ಞಾನಿಕ ಮತ್ತು   ಅಸಮರ್ಪಕ  ಕಾಮಗಾರಿಯಿಂದ  ಕಿರಿಮಂಜೇಶ್ವರ ಗ್ರಾಮದ  ಜನತೆಗೆ ಅನ್ಯಾಯವಾಗುತ್ತಿದೆಯೆಂದು ಮೀನುಗಾರರು ಮತ್ತು ಊರಿನ ನಾಗರೀಕರು ಈ ಹಿಂದೆ  ಪ್ರತಿಭಟನೆ ನಡೆಸಿದ್ದರು.

ಮೀನು ಹರಾಜು ಪ್ರಾಂಗಣವನ್ನು ಕೊಡೇರಿ  ಪಶ್ಚಿಮ ಭಾಗದ ಕಿರಿದಾದ ಸಮುದ್ರದ ದಂಡೆಯ ಮೇಲೆ ನಿರ್ಮಾಣ ಮಾಡಿರುವುದು ಸಂಪೂರ್ಣ ಅವೈಜ್ಞಾನಿಕವಾಗಿದೆ. ಅಲ್ಲದೇ, ಈ ಭಾಗದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾಮಗಾರಿ ನಡೆಸಿದರೂ ಒಂದಲ್ಲ ಒಂದು ರೀತಿಯ ಸಮಸ್ಯೆ ಎದುರಾಗುತ್ತದೆ. ಮೀನು ಹರಾಜು ಪ್ರಾಂಗಣದಲ್ಲಿ ಯಾವುದೇ ಮೂಲಸೌಕರ್ಯ ಇಲ್ಲ. ಕೊಡೇರಿಯ ಮೀನುಗಾರರು ಹೋಗಲು ಸೇತುವೆಯೂ ಇಲ್ಲ. ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಅವೈಜ್ಞಾನಿಕ ಧೋರಣೆಯಿಂದ ಕೊಡೇರಿ ಮೀನುಗಾರರು ಸಮಸ್ಯೆ ಎದುರಿಸುವಂತಾಗಿದೆ. ಯಾವುದೇ ಮೂಲಸೌಕರ್ಯ ಇಲ್ಲದೇ ಈ ಪ್ರಾಂಗಣದಲ್ಲಿ ಮೀನು ಹರಾಜಿಗೆ ಅವಕಾಶ ನೀಡಬಾರದು ಎಂದು ಮೀನುಗಾರರು ಆಗ್ರಹಿಸಿದ್ದರು.

ಇದನ್ನೂ ಓದಿ:  ನಟ ವಿಜಯ್ V/S ತಂದೆ: ಮಗನ ಹೆಸರಿನಲ್ಲಿ ರಾಜಕೀಯ ಪಕ್ಷದ ಹೆಸರು ನೋಂದಣಿ, ಏನಿದು ಜಟಾಪಟಿ?

ಜಟ್ಟಿ ಭಾಗದಲ್ಲಿ ಡ್ರಜ್ಜಿಂಗ್ ಮಾಡುವುದರಿಂದ ಕೊಡೇರಿಯ ನಿವಾಸಿಗಳಿಗೆ ಇನ್ನಷ್ಟು ಸಮಸ್ಯೆಯಾಗಲಿದೆ. ಈಗಾಗಲೇ ಕುಡಿಯುವ ನೀರಿನ ಅಭಾವವಿದೆ, ಮುಂದೇ ಬಾವಿ ನೀರು ಸಂಪೂರ್ಣ ಉಪ್ಪಾಗಿ ನಿತ್ಯೋಪಯೋಗಕ್ಕೇ ನೀರಿನ ಸಮಸ್ಯೆ ಎದುರಾಗುವ ಆತಂಕ ನಿರ್ಮಾಣವಾಗಿದೆ. ಹಾಗೆಯೇ ಪಶ್ಚಿಮ ದಂಡೆಯು ಕುಸಿತ ಗೊಂಡಿರುವುದರಿಂದ ನೀರಿನ ರಭಸಕ್ಕೆ ಇನ್ನಷ್ಟು ಹಾನಿಯಾಗುವ ಸಾಧ್ಯತೆಗಳಿರುತ್ತವೆ. ಹೀಗಾಗಿ ಯಾವುದೇ ಕಾರಣಕ್ಕೂ ಮೀನು ಹರಾಜು ಪ್ರಾಂಗಣದಲ್ಲಿ ಅಭಿವೃದ್ಧಿ ಕಾಮಗಾರಿ ಮಾಡಬಾರದು ಮತ್ತು ಮೀನು ಹರಾಜಿಗೂ ಅವಕಾಶ ನೀಡಬಾರದು ಎಂದು ಅಧಿಕಾರಿಗಳನ್ನು ಒತ್ತಾಯಿಸಿದ್ದರು.

ಇದನ್ನೂ ಓದಿ:  ಚೆಕ್ ಬೌನ್ಸ್ ಪ್ರಕರಣ: ಸಿದ್ದಾರ್ಥ್ ಹೆಗ್ಡೆ ಪತ್ನಿ ಮಾಳವಿಕಾಗೆ ಬಿಗ್ ರಿಲೀಫ್ ನೀಡಿದ ಕೋರ್ಟ್

ಈ ಕಾರಣದಿಂದ  ಇಂದಿನ  ಹರಾಜು ಪ್ರಕ್ರಿಯೆಯ ಸಂದರ್ಭದಲ್ಲಿ ಎರಡು ಬಣಗಳ ನಡುವೆ ಮಾರಾಮಾರಿ ನಡೆದಿದೆ ಎಂದು ವರದಿಯಾಗಿದೆ.

ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.