ಪಕ್ಷೇತರ ಸದಸ್ಯೆಗೆ ಒಲಿದ ಅದೃಷ್ಟ
ಕಾಂಗ್ರೆಸ್ ಬೆಂಬಲದಿಂದ ಪಪಂ ಅಧ್ಯಕ್ಷೆಯಾಗಿ ನೀಲಮ್ಮ-ಉಪಾಧ್ಯಕ್ಷರಾಗಿ ಗೌಡರ ಅವಿರೋಧ ಆಯ್ಕೆ
Team Udayavani, Nov 7, 2020, 7:09 PM IST
ನಿಡಗುಂದಿ: ಕೊನೆ ಕ್ಷಣದವರೆಗೂ ತೀವ್ರ ಕುತೂಹಲ ಕೆರಳಿಸಿದ್ದ ನಿಡಗುಂದಿ ಪಟ್ಟಣ ಪಂಚಾಯತ್ ಅಧ್ಯಕ್ಷೆಯಾಗಿ ಕಾಂಗ್ರೆಸ್ ಬೆಂಬಲಿತ ಪಕ್ಷೇತರ ಸದಸ್ಯೆ ನೀಲಮ್ಮ ದೊಡಮನಿ, ಉಪಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಶಂಕರಲಿಂಗ ಗೌಡರ ಶುಕ್ರವಾರ ನಡೆದ ಚುನಾವಣೆಯಲ್ಲಿ ಅವಿರೋಧ ಆಯ್ಕೆಯಾದರು.
ಚುನಾವಣಾಧಿಕಾರಿಯಾಗಿದ್ದ ತಹಶೀಲ್ದಾರ್ ಶಿವಲಿಂಗಪ್ರಭು ವಾಲಿ ಆಯ್ಕೆಯನ್ನು ಘೋಷಿಸಿದರು. ಶಾಸಕ, ಸಂಸದರು ಸೇರಿ 18 ಜನ ಸದಸ್ಯರಲ್ಲಿ ಸಂಸದ ಹಾಗೂ ಕಾಂಗ್ರೆಸ್ ಪಕ್ಷದ ಸದಸ್ಯ ಚುನಾವಣಾ ಪ್ರಕ್ರಿಯೆಗೆ ಗೈರು ಹಾಜರಾದರು.
ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಪಕ್ಷೇತರ ಸದಸ್ಯೆ ನೀಲಮ್ಮ ದೊಡಮನಿ ಹಾಗೂ ಕಾಂಗ್ರೆಸ್‌ನ ಅನ್ನಪೂರ್ಣ ವಡವಡಗಿ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿಯಿಂದ ಶಿವಲೀಲಾ ಗೂಗಿಹಾಳ ಹಾಗೂ ಅನ್ನಪೂರ್ಣ ಉಳ್ಳಿ ನಾಮಪತ್ರ ಸಲ್ಲಿಸಿದ್ದರು.
ಮಧ್ಯಾಹ್ನ 1ಕ್ಕೆ ಬಂದ ಶಾಸಕ ಶಿವಾನಂದ ಪಾಟೀಲ ಕಾಂಗ್ರೆಸ್ ಪಕ್ಷದಿಂದ ನೀಲಮ್ಮ ದೊಡಮನಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಎಂದು ಘೋಷಿಸಿದರು. ಕಾಂಗ್ರೆಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದ ಅನ್ನಪೂರ್ಣ ವಡವಡಗಿ ನಾಮಪತ್ರ ಹಿಂದಕ್ಕೆ ಪಡೆದರು.
ಬಿಜೆಪಿಯಲ್ಲಿ ಗೊಂದಲ: ಕಳೆದ ಬಾರಿ ಅಧ್ಯಕ್ಷ ಚುನಾವಣೆಗೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಶಂಕರ ರೇವಡಿ ಬಿಜೆಪಿ ಬೆಂಬಲಿಸಬಹುದೆಂಬ ನಿರೀಕ್ಷೆ ಇಟ್ಟು ಕೊಂಡಿತ್ತು. ಆದರೆ ಅವರು ಚುನಾವಣಾ ಪ್ರಕ್ರಿಯೆಯಿಂದಲೇ ದೂರ ಉಳಿದು ಯಾರ ಸಂಪರ್ಕಕ್ಕೂ ಸಿಗದೇ ಇದ್ದದ್ದು ಬಿಜೆಪಿಗೆ ತೀವ್ರ ಹಿನ್ನಡೆಯಾಯಿತು. ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮತ ಚಲಾಯಿಸಲು ನಿಡಗುಂದಿಗೆ ಆಗಮಿಸಿದ್ದ ಸಂಸದ ರಮೇಶ ಜಿಗಜಿಣಗಿ ಬಿಜೆಪಿ ಅಭ್ಯರ್ಥಿ ಸೋಲುವ ಹಿನ್ನಲೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿಲ್ಲ. ರಾಷ್ಟ್ರೀಯ ಪಕ್ಷವಾಗಿ ಸೋಲಲಿ, ಗೆಲ್ಲಲಿ ಸ್ಪ ರ್ಧಿಸುತ್ತೇವೆ ಎಂದು ಮಾಜಿ ಸಚಿವ ಎಸ್ ಕೆ. ಬೆಳ್ಳುಬ್ಬಿ ಘೋಷಿಸಿದ್ದರು. ಅನ್ನಪೂರ್ಣ ಉಳ್ಳಿ ಬಿಜೆಪಿ ಅಭ್ಯರ್ಥಿ ಎಂದು ಘೋಷಿಸಿದ್ದರು. ಆ ಪ್ರಕಾರ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದ ಶಿವಲೀಲಾ ಗೂಗಿಹಾಳ ನಾಮಪತ್ರ ಹಿಂದಕ್ಕೆ ಪಡೆದರು.
ಚುನಾವಣಾ ಪ್ರಕ್ರಿಯೆ ಆರಂಭಗೊಳ್ಳುವ ಮೊದಲು ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಅನ್ನಪೂರ್ಣ ಉಳ್ಳಿ ಕೂಡಾ ಸೋಲುವ ಭೀತಿಯಿಂದ ನಾಮಪತ್ರ ಹಿಂದಕ್ಕೆ ಪಡೆದು ಅಚ್ಚರಿ ಮೂಡಿಸಿದರು. ಇದು ನೀಲಮ್ಮ ದೊಡಮನಿ ಅವಿರೋಧ ಆಯ್ಕೆಗೆ ದಾರಿಯಾಯಿತು. ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಶಂಕರಲಿಂಗ ಗೌಡರ ಒಬ್ಬರೇ ನಾಮಪತ್ರ ಸಲ್ಲಿಸಿದ್ದು ಅವರು ಅವಿರೋಧ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೂ ಬಿಜೆಪಿ ಸ್ಪರ್ಧಿಸದಿರುವುದು ಹಲವು ಬಿಜೆಪಿ ಕಾರ್ಯಕರ್ತರ
ಆಕ್ರೋಶಕ್ಕೂ ಕಾರಣವಾಯಿತು. ಒಟ್ಟಾರೆ ಬಿಜೆಪಿಯಲ್ಲಿ ಗೊಂದಲದ ವಾತಾವರಣ ನಿರ್ಮಾಣಕ್ಕೆ ಕಾರಣವಾಯಿತು. ಪಕ್ಷ ಸೂಚಿಸಿದ್ದರೂ ಅಧ್ಯಕ್ಷ ಸ್ಥಾನಕ್ಕೆ ಸ್ಪ ರ್ಧಿಸದ ಅನ್ನಪೂರ್ಣ ಉಳ್ಳಿ ಮೇಲೆ ಪಕ್ಷ ವಿರೋಧಿ ಚಟುವಟಿಕೆಯ ಕ್ರಮ ಕೈಗೊಳ್ಳುವಂತೆ ಹಲವು ಬಿಜೆಪಿ ಕಾರ್ಯಕರ್ತರು ಮಂಡಳಅಧ್ಯಕ್ಷರಿಗೆ ಒತ್ತಾಯಿಸಿದ ಘಟನೆಯೂ ನಡೆಯಿತು. ವಿಜಯೋತ್ಸವ: ಆಯ್ಕೆಯಾದ ನೀಲಮ್ಮ ದೊಡಮನಿ ಹಾಗೂ ಶಂಕರಲಿಂಗ ಗೌಡರ ಅವರ ವಿಜಯೋತ್ಸವ ಜರುಗಿತು. ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದರೂ ಪರಿಶಿಷ್ಟ ಜಾತಿಗೆ ಸೇರಿದ ನನ್ನನ್ನು ಕಾಂಗ್ರೆಸ್ ಪಕ್ಷ ಪಪಂ ಅಧ್ಯಕ್ಷರನ್ನಾಗಿ ಮಾಡಿತು. ಶಾಸಕ ಶಿವಾನಂದ ಪಾಟೀಲ ಹಾಗೂ ಪಪಂ ಸದಸ್ಯರಿಗೆ ಧನ್ಯವಾದ ಅರ್ಪಿಸುತ್ತೇನೆ. ಲಭ್ಯವಿರುವ ಆರು ತಿಂಗಳ ಅವಧಿ ಯಲ್ಲಿ ಪಟ್ಟಣದಸರ್ವಾಂಗೀಣ ಅಭಿವೃದ್ಧಿ ಗೆ ಶ್ರಮಿಸುತ್ತೇನೆ. –ನೀಲಮ್ಮ ದೊಡಮನಿ, ಪಪಂ ನೂತನ ಅಧ್ಯಕ್ಷೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.