ಅಧಿಕಾರಿಗಳು ಮತ್ತು ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘರ್ಷ :10 ಅಂಗಡಿಗಳ ಪರವಾನಿಗೆ ಅಮಾನತು

Team Udayavani, Nov 7, 2020, 10:32 PM IST

ಅಧಿಕಾರಿಗಳು ಮತ್ತು ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘರ್ಷ :10 ಅಂಗಡಿಗಳ ಪರವಾನಿಗೆ ಅಮಾನತು

ಚಿಕ್ಕಬಳ್ಳಾಪುರ: ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರು ಮತ್ತು ಆಹಾರ ಇಲಾಖೆಯ ಅಧಿಕಾರಿಗಳ ನಡುವೆ ಸಂಘರ್ಷ ತಾರಕ್ಕೇರಿದ್ದು ಸಗಟು ಗೋದಾಮಿನಿಂದ ಪಡಿತರವನ್ನು ಎತ್ತುವಳಿ ಮಾಡಲು ನಿರಾಕರಿಸಿದ 10 ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರ ಪರವಾನಿಗೆಯನ್ನು ಅಮಾನತ್ತುಗೊಳಿಸಿ ಜಿಲ್ಲಾ ಆಹಾರ,ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ಉಪನಿರ್ದೇಶಕಿ ಪಿ.ಸವಿತಾ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹುದಗೂರಿನ ಎಸ್.ಎನ್.ಕುಸುಮ,ನರಸಾಪುರದ ಜಯಮ್ಮ,ಗೌರಿಬಿದನೂರಿನ ಟಿಎಪಿಸಿಎಂಎಸ್,ತೊಂಡೆಬಾವಿಯ ಮದನಗೋಪಾಲ್‍ರೆಡ್ಡಿ,ಮಾಚೇನಹಳ್ಳಿಯ ಎಂಕೆ ರಾಮಚಂದ್ರಪ್ಪ,ವಾಟದಹೊಸಹಳ್ಳಿ ವಿ.ಎಸ್.ಎಸ್.ಎನ್,ನಗರಗೆರೆ ವಿ.ಎಸ್.ಎಸ್.ಎನ್,ಬಯ್ಯಮ್ಮ ವೆಂಕಟಾಪುರ,ಹಾಲಗಾನಹಳ್ಳಿಯ ವೆಂಕಟೇಶ್‍ಬಾಬು ಹೆಚ್.ಎನ್. ಹಾಗೂ ತೋಕಲಹಳ್ಳಿಯ ವಿ.ಎಸ್.ಎಸ್.ಎನ್ ಸಂಘಗಳ ಪರವಾನಿಗೆಯನ್ನು ಅಮಾನತ್ತುಗೊಳಿಸಿ ಆಹಾರ ಇಲಾಖೆಯ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಪ್ರಸ್ತುತ 10 ಸರ್ಕಾರಿ ನ್ಯಾಯಬೆಲೆ ಅಂಗಡಿಗಳ ಪರವಾನಿಗೆಯನ್ನು ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ನಾಗರಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸಮೀಪದಲ್ಲಿ ಸಹಕಾರ ಸಂಘಗಳಿಂದ ನಡೆಯುತ್ತಿರುವ ಅಂಗಡಿಗಳಿಗೆ ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಮಾಡಿ ಸ್ಥಿರೀಕರಣಕ್ಕಾಗಿ ವರದಿ ಸಲ್ಲಿಸಲು ಗೌರಿಬಿದನೂರು ತಾಲೂಕಿನ ತಹಶೀಲ್ದಾರ್ ಅವರಿಗೆ ಆಹಾರ ಇಲಾಖೆಯ ಉಪನಿರ್ದೇಶಕರು ಆದೇಶದಲ್ಲಿ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ:ಕೋವಿಡ್ ವಿರುದ್ಧ ರಾಮ, ಸೀತೆಯರಂತೆ ಗೆದ್ದು ಬರೋಣ ಎಂದ ಇಂಗ್ಲೆಂಡ್‌ ಪ್ರಧಾನಿ

ಕೊರೊನಾ ಸಂಕಷ್ಟದಲ್ಲಿರುವ ನಾಗರಿಕರಿಗೆ ಅನುಕೂಲ ಕಲ್ಪಿಸುವ ಕೇಂದ್ರ ಮತ್ತು ರಾಜ್ಯ ಸರ್ಕಾರ ಆಹಾರ ಭದ್ರತೆ ಕಾಯ್ದೆ 2013ರನ್ವಯ ಜಿಲ್ಲೆಯಲ್ಲಿ ಅನ್ನಭಾಗ್ಯ ಮತ್ತು ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯನ್ನು ಜಾರಿಗೊಳಿಸಲಾಗಿದೆ ಈ ಯೋಜನೆಯಡಿ ಪಡಿತರಚೀಟಿದಾರರಿಗೆ ಉಚಿತವಾಗಿ ಆಹಾರಧಾನ್ಯಗಳನ್ನು ವಿತರಿಸಲಾಗುತ್ತಿದ್ದು ಆದರೇ ಜಿಲ್ಲೆಯ ಗೌರಿಬಿದನೂರು ತಾಲೂಕಿನಲ್ಲಿ ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರು ಮತ್ತು ಆಹಾರ ಇಲಾಖೆಯ ಅಧಿಕಾರಿಗಳ ನಡುವೆ ಹೊಂದಾಣಿಕೆಯ ಕೊರತೆಯಿಂದ ಶೀತಲ ಸಮರ ನಡೆಯುತ್ತಿದೆ ಆಹಾರ ಇಲಾಖೆಯ ಅಧಿಕಾರಿಗಳ ಧೋರಣೆ ವಿರುಧ್ಧ ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೌರಿಬಿದನೂರು ತಾಲೂಕಿನಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ಮತ್ತು ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರ ನಡುವೆ ಭುಗಲೆದ್ದಿರುವ ವಿವಾದ ಮತ್ತು ಸಮಸ್ಯೆಯನ್ನು ಬಗೆಹರಿಸಲು ಆಹಾರ ಇಲಾಖೆಯ ಉಪನಿರ್ದೇಶಕರು ಸಂಧಾನ ನಡೆಸುವ ಕೆಲಸ ಮಾಡಿದ್ದಾರೆ ಎನ್ನಲಾಗಿದೆ ಆದರೂ ಸಹ ಆಹಾರ ಇಲಾಖೆಯ ಅಧಿಕಾರಿಗಳು ಮತ್ತು ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರ ನಡುವೆ ಸಂಘರ್ಷ ತಾರಕ್ಕೇರಿ ಪರಸ್ಪರ ಏಕವಚನದಲ್ಲಿ ಬೈದಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:ತುಮಕೂರು :ತನಿಖೆಯ ವೇಳೆ ಪೋಲೀಸರ ಮೇಲೆ ಮಚ್ಚಿನಿಂದ ದಾಳಿ ನಡೆಸಿದ ಆರೋಪಿ ಕಾಲಿಗೆ ಗುಂಡಿನ ಏಟು!

ಗೌರಿಬಿದನೂರು ತಾಲೂಕಿನಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ಕ್ಷಮೆಯಾಚಿಸುವರೆಗೆ ಗೋದಾಮುಗಳಿಂದ ಆಹಾರಧಾನ್ಯಗಳನ್ನು ಎತ್ತುವಳಿ ಮಾಡಲು ಯಾರು ಹೋಗಬಾರದೆಂದು ನಿರ್ಧರಿಸಿದ್ದಾರೆ ಕೊನೆಗೂ ಗೌರಿಬಿದನೂರು ತಾಲೂಕಿನಲ್ಲಿರುವ 111 ಸರ್ಕಾರಿ ನ್ಯಾಯಬೆಲೆ ಅಂಗಡಿಗಳ ಪೈಕಿ ಕೇವಲ ಮೇಳ್ಯ ಗ್ರಾಮದ ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರು ಹೊರತುಪಡಿಸಿ ಬೇರೆ ಯಾರು ಸಹ ಆಹಾರಧಾನ್ಯಗಳನ್ನು ಗೋದಾಮಿನಿಂದ ಎತ್ತುವಳಿ ಮಾಡಿಲ್ಲವೆಂದು ಆಹಾರ ಇಲಾಖೆಯ ಶಿರಸ್ತೆದಾರ ಮತ್ತು ಆಹಾರ ನಿರೀಕ್ಷಕರು ಉಪನಿದೇಶಕರಿಗೆ ವರದಿ ಸಲ್ಲಿಸಿದ ಹಿನ್ನೆಲೆಯಲ್ಲಿ ಆಹಾರ ಇಲಾಖೆಯ ಉಪನಿದೇಶಕರು ಕರ್ನಾಟಕ ಅಗತ್ಯ ವಸ್ತುಗಳ(ಸಾವಿಪ) ನಿಯಂತ್ರಣ ಆದೇಶ 2016 ರನ್ವಯ ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ಪಡೆದ ಎಲ್ಲಾ ಪ್ರಾಧಿಕರಣದಾರರು ಸರ್ಕಾರದ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕಾಗಿರುತ್ತದೆ ಆದರೇ ತಿಂಗಳ 5ನೇ ತಾರೀಖನೊಳಗೆ ಆಹಾರಧಾನ್ಯಗಳನ್ನು ಎತ್ತುವಳಿ ಮಾಡಲು ನಿರ್ಲಕ್ಷ್ಯವಹಿಸಿರುವ ವಿಚಾರವನ್ನು ಗಂಭೀರವಾಗಿ ಆಹಾರ ಇಲಾಖೆಯ ಉಪನಿರ್ದೇಶಕರು 10 ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರ ಪರವಾನಿಗೆಯನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಗೌರಿಬಿದನೂರು ತಾಲೂಕಿನಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ಮತ್ತು ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರ ನಡುವೆ ಹೊಂದಾಣಿಕೆಯ ಕೊರತೆಯಿಂದ ಗೋದಾಮಿನಿಂದ ಆಹಾರಧಾನ್ಯಗಳನ್ನು ಎತ್ತುವಳಿ ಮಾಡಲು ನಿರ್ಲಕ್ಷ್ಯವಹಿಸಿರುವ 10 ಸರ್ಕಾರಿ ನ್ಯಾಯಬೆಲೆ ಅಂಗಡಿಗಳ ಪರವಾನಿಗೆಯನ್ನು ಅಮಾನತ್ತುಗೊಳಿಸಿದ್ದೇವೆ ಪಡಿತರಿಚೀಟಿದಾರರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಯನ್ನು ಮಾಡಲಾಗಿದೆ ಸಮಸ್ಯೆಯನ್ನು ಬಗೆಹರಿಸಲು ಗೌರಿಬಿದನೂರು ತಾಲೂಕಿನಲ್ಲಿ ಆಹಾರ ಇಲಾಖೆಯ ಅಧಿಕಾರಿಗಳನ್ನು ಬದಲಾಯಿಸಲು ಕ್ರಮ ಕೈಗೊಳ್ಳಲಾಗಿದೆ.

– ಪಿ.ಸವಿತಾ ಉಪನಿರ್ದೇಶಕಿ ಆಹಾರ,ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ

ಟಾಪ್ ನ್ಯೂಸ್

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Panth–Iyer

IPL Auction: 27 ಕೋ. ರೂ. ಒಡೆಯ ರಿಷಭ್‌ ಪಂತ್‌ಗೆ ಸಿಗುವುದು 18.90 ಕೋಟಿ ಮಾತ್ರ!

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Panth–Iyer

IPL Auction: 27 ಕೋ. ರೂ. ಒಡೆಯ ರಿಷಭ್‌ ಪಂತ್‌ಗೆ ಸಿಗುವುದು 18.90 ಕೋಟಿ ಮಾತ್ರ!

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.