ಆಸ್ಟ್ರೇಲಿಯ ಪ್ರವಾಸ: ಕೊನೆಯ 2 ಟೆಸ್ಟ್‌ಗಳಿಗೆ ಕೊಹ್ಲಿ ಅನುಮಾನ
Team Udayavani, Nov 7, 2020, 11:22 PM IST
ಹೊಸದಿಲ್ಲಿ: ಮುಂಬರುವ ಆಸ್ಟ್ರೇಲಿಯ ಪ್ರವಾಸದ ವೇಳೆ ಟೀಮ್ ಇಂಡಿಯಾ ಕಪ್ತಾನ ವಿರಾಟ್ ಕೊಹ್ಲಿ ಅಂತಿಮ 2 ಟೆಸ್ಟ್ ಪಂದ್ಯಗಳಲ್ಲಿ ಆಡುವ ಸಂಭವ ಇಲ್ಲ ಎನ್ನಲಾಗಿದೆ. ಇದೇ ಸಮಯದಲ್ಲಿ ಅವರು ತಂದೆ ಆಗುತ್ತಿರುವುದೇ ಇದಕ್ಕೆ ಕಾರಣ.
ವಿರಾಟ್ ಕೊಹ್ಲಿ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮ ಅವರ ಹೆರಿಗೆ ದಿನಾಂಕ ಜನವರಿಯಲ್ಲಿ ನಿಗದಿಯಾಗಿದೆ. ಈ ಸಂದರ್ಭದಲ್ಲಿ ಪತ್ನಿಯ ಜತೆ ಇರಲು ಕೊಹ್ಲಿ ಭಾರತಕ್ಕೆ ವಾಪಸಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಆದರೆ ಈ ಕುರಿತು ಬಿಸಿಸಿಐಯಾಗಲಿ, ಕೊಹ್ಲಿಯಾಗಲಿ ಅಧಿಕೃತ ಹೇಳಿಕೆ ನೀಡಿಲ್ಲ.
“ಬಿಸಿಸಿಐ ಯಾವತ್ತೂ ಆಟಗಾರರ ಕುಟುಂಬಕ್ಕೆ ಗರಿಷ್ಠ ಆದ್ಯತೆ ನೀಡುತ್ತದೆ. ಒಂದು ವೇಳೆ ಕೊಹ್ಲಿ ಈ ಸಂದರ್ಭದಲ್ಲಿ ಬ್ರೇಕ್ ಬಯಸಿದ್ದೇ ಆದಲ್ಲಿ ತವರಿಗೆ ಮರಳಲು ಅವರಿಗೆ ಅವಕಾಶ ನೀಡಲಾಗುವುದು. ಆಗ ಕೊಹ್ಲಿ ಮೊದಲೆರಡು ಟೆಸ್ಟ್ ಪಂದ್ಯಗಳಿಗಷ್ಟೇ ಲಭ್ಯರಿರುತ್ತಾರೆ’ ಎಂದು ಹೆಸರು ಹೇಳಬಯಸದ ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.