ಮದ್ಯಸೇವನೆ, ಅವಿವಾಹಿತರ ಸಹಜೀವನಕ್ಕೆ ಯುಎಇ ಅಸ್ತು
Team Udayavani, Nov 8, 2020, 6:45 AM IST
ದುಬಾೖ: ಕಠಿನ ಇಸ್ಲಾಮಿಕ್ ಕಾನೂನಿಗೆ ಹೆಸರಾಗಿದ್ದ ಯುನೈಟೆಡ್ ಅರಬ್ ಎಮಿರೇಟ್ಸ್, ದೇಶದ ಇಸ್ಲಾ ಮಿಕ್ ವೈಯಕ್ತಿಕ ಕಾನೂನುಗಳನ್ನು ಸಡಿಲಗೊಳಿಸಿ, ಕ್ರಾಂತಿಕಾರಕ ಹೆಜ್ಜೆಯಿಟ್ಟಿದೆ.
ವಿದೇಶಿ ಪ್ರಜೆಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಅವಿ ವಾಹಿತ ಜೋಡಿಗಳು ಯುಎಇ ನೆಲದಲ್ಲಿ ಸಹಜೀವನ ನಡೆಸಲು ಅನುಮತಿ ಕಲ್ಪಿಸಲಾಗಿದೆ. ಆಲ್ಕೋಹಾಲ್ ನಿರ್ಬಂಧ ಸಡಿಲಗೊಳಿಸಲಾಗಿದೆ. ಮರ್ಯಾದಾ ಹತ್ಯೆ ವಿಮುಕ್ತಿಗೆ ಕಾನೂನು ಜಾರಿಗೊಳಿಸಲಾಗಿದೆ. ಇತ್ತೀಚೆ ಗಷ್ಟೇ ಯುಎಇ ಸರಕಾರವು ಕಾರ್ಮಿಕ ಸ್ನೇಹಿ ಕಾನೂನು ಘೋಷಿಸುವ ಮೂಲಕ ಕಠಿಣ ನಿರ್ಬಂಧಗಳಿಂದ ವಲಸೆ ಕಾರ್ಮಿಕರನ್ನು ಮುಕ್ತಗೊಳಿಸುವ ನಿರ್ಧಾರ ಕೈಗೊಂಡಿತ್ತು. ಅದರ ಬೆನ್ನಲ್ಲೇ ಈಗ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಗೌರವ ನೀಡುವ ಮತ್ತಷ್ಟು ಕ್ರಮಗಳನ್ನು ಕೈಗೊಂಡಿದೆ.
ಮುಕ್ತ ಸ್ವಾತಂತ್ರ್ಯ
ಇದುವರೆಗೆ ಯುಎಇಯಲ್ಲಿ ಅವಿವಾಹಿತ ಜೋಡಿಗಳು ಒಟ್ಟಿಗೆ ಜೀವನ ನಡೆಸಲು ನಿಷಿದ್ಧವಿತ್ತು. ಮದ್ಯ ಖರೀದಿ, ಮಾರಾಟ, ಮನೆಗಳಲ್ಲಿ ಮದ್ಯ ಬಳಸಲು ಲೈಸೆನ್ಸ್ ಹೊಂದಬೇಕಿತ್ತು. ಮದ್ಯಸೇವನೆಗೆ ಈಗ ಮುಕ್ತ ಸ್ವಾತಂತ್ರ್ಯ ಕಲ್ಪಿಸಲಾಗಿದೆ.
ದೇಶದ ಗ್ರಹಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದ ಕಠಿಣ ಕಾನೂನುಗಳನ್ನು ಯುಎಇ ಸರಕಾರ ಹಂತಹಂತವಾಗಿ ಕೈಬಿಡುತ್ತಿದೆ. ವಿಶೇಷವಾಗಿ ವಿದೇಶಿ ಹೂಡಿಕೆದಾರರು, ಉದ್ಯಮಿಗಳು ಮತ್ತು ಪ್ರವಾಸಿಗರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹೊಸ ಕಾನೂನುಗಳನ್ನು ಅಳವಡಿಸಿಕೊಳ್ಳುತ್ತಿದೆ. ಅಲ್ಲದೆ, ಸದ್ಯದಲ್ಲೇ ಯುಎಇಯಲ್ಲಿ ವರ್ಲ್ಡ್ ಎಕ್ಸ್‌ಪೋ ನಡೆಯಲಿದ್ದು, 2.5 ಕೋಟಿ ಮಂದಿ ಭೇಟಿ ನೀಡಲಿದ್ದಾರೆ. ಈ ಕಾರ್ಯಕ್ರಮವು ಭಾರೀ ಪ್ರಮಾಣದ ವಾಣಿಜ್ಯ ಚಟುವಟಿಕೆಗಳಿಗೆ ಉತ್ತೇಜನ ನೀಡಲಿರುವ ಹಿನ್ನೆಲೆಯಲ್ಲಿ ಸರಕಾರವು ಕಠಿಣ ನಿರ್ಬಂಧಗಳನ್ನು ಸಡಿಲಿಸುತ್ತಿರುವುದು
ಮಹತ್ವ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Earthquakes: ಎವರೆಸ್ಟ್ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dinner Politics: ಡಿಸಿಎಂ ಡಿಕೆಶಿ ದೂರು; ಕಾಂಗ್ರೆಸ್ ಡಿನ್ನರ್‌ಗೆ ಹೈ ಕಮಾಂಡ್ ತಡೆ
Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್ ಮುಕ್ತವಾಯಿತೇ?
Budget Allocation: ಇನ್ನೆರಡು ತಿಂಗಳಲ್ಲಿ ಶೇ. 45 ಪ್ರಗತಿ ಸಾಧ್ಯವೇ?: ಆರ್.ಅಶೋಕ್
Politics Discussion: ದಿಲ್ಲಿಯಲ್ಲಿ ಜೆಡಿಎಸ್ ಶಾಸಕರು-ಡಿ.ಕೆ.ಶಿವಕುಮಾರ್ ಮುಖಾಮುಖಿ
HMP Virus: ಎಚ್‌ಎಂಪಿ ವೈರಸ್ ಭೀತಿ ಬೇಡ, ಪರೀಕ್ಷೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.