ಕೆಐಎಡಿಬಿ ಭೂ ಸ್ವಾಧೀನ ಪ್ರಕ್ರಿಯೆ ರದ್ದಿಗೆ ಆಗ್ರಹ


Team Udayavani, Nov 8, 2020, 5:20 PM IST

mandya-tdy-1

ಮಂಡ್ಯ: ನಾಗಮಂಗಳ ತಾಲೂಕಿನ ಬೆಳ್ಳೂರು ಹೋಬಳಿಯ ಚನ್ನಾಪುರ, ಬೀಚನಹಳ್ಳಿ, ಹಟ್ನ ಮತ್ತು ಬಿಳಗುಂದ ಗ್ರಾಮಗಳ ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕೆ ಸ್ವಾಧೀನಪಡಿಸಿಕೊಳ್ಳುತ್ತಿರುವುದನ್ನು ವಿರೋಧಿಸಿ ಕೆಐಎಡಿಬಿ ಭೂ ಸ್ವಾಧೀನ ಪ್ರಕ್ರಿಯೆ ವಿರೋಧ ಹೋರಾಟಗಾರರ ಸಮಿತಿ ವತಿಯಿಂದ ರೈತ ಸಂಘದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ರೈತರು ಹಾಗೂ ಗ್ರಾಮಸ್ಥರು, ಸರ್ಕಾರ ಹಾಗೂ ಸಂಸದೆ ಸುಮಲತಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಜಮೀನೇ ಜೀವನದ ಜೀವಾಳ: ಗ್ರಾಮಸ್ಥರಾದ ನಾವು ಮೂಲ ಕೃಷಿಕರಾಗಿದ್ದು, ಬೆಳೆಯುವ ಬೆಳೆಗಳಿಂದ ಜೀವನ ನಿರ್ವಹಣೆ ಮಾಡುತ್ತಿದ್ದೇವೆ. ಬೆಳೆಗಳ ಆದಾಯದ ಮೇಲೆಯೇ ಅವಲಂಬಿತರಾಗಿದ್ದು, ಮಕ್ಕಳ ವಿದ್ಯಾಭ್ಯಾಸ, ಮದುವೆ, ಆರೋಗ್ಯ ಹಾಗೂ ಇತರೆ ಸೌಲಭ್ಯಗಳಿಗೆ ಜಮೀನನ್ನೇ ನಂಬಿದ್ದೇವೆ. ಬಾಳೆ, ತೆಂಗು, ಅಡಿಕೆ, ರಾಗಿ, ಭತ್ತ, ಎಳ್ಳು, ಜೋಳ, ಅಲಸಂದೆ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆದು, ಹಸು, ಎಮ್ಮೆ, ಕುರಿ, ಮೇಕೆಯಂತಹ ಸಾಕು ಪ್ರಾಣಿಗಳನ್ನು ಸಾಕಿ ಹೈನುಗಾರಿಕೆಯನ್ನೂ ಮಾಡುತ್ತಾ ಜೀವನ ಸಾಗಿಸುತ್ತಿದ್ದೇವೆ ಎಂದು ಅಳಲು ತೋಡಿಕೊಂಡರು.

ಕೈಗಾರಿಕೆಗಳಿಂದ ಜಲಾಶಯ ಕಲುಷಿತ: ಜಮೀನಿನ ಪರಿಸರದಲ್ಲಿ4-5ಕೆರೆಗಳಿದ್ದು, ವಾರ್ಷಿಕವಾಗಿ ಕೆರೆಗಳ ನೀರಿನಿಂದ 2 ಬೆಳೆ ಬೆಳೆಯುತ್ತಿದ್ದೇವೆ. ಅಲ್ಲದೆ, ಕೆರೆಗಳಿಂದ ಕೊಳವೆ ಬಾವಿಳ ಅಂತರ್ಜಲಮಟ್ಟ ಸುಸ್ಥಿತಿಯಲ್ಲಿದೆ. ತಲಾತಲಾಂತರಗಳಿಂದ ಜಮೀನನ್ನು ನಂಬಿ ಜೀವನ ನಡೆಸುತ್ತಿರುವಾಗ ಸರ್ಕಾರ ಏಕಾಏಕಿ ನಮ್ಮ ಫ‌ಲವತ್ತಾದ ಜಮೀನನ್ನು ಕೈಗಾರಿಕಾ ಉದ್ದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಪ್ರಾರಂಭ ಮಾಡಿರುವುದು ಸರಿಯಲ್ಲ. ಇದು ಗ್ರಾಮದ ಕುಟುಂಬಗಳ ಮರಣ ಶಾಸನವಾಗಿದೆ. ಇದರಿಂದ ನಾವೆಲ್ಲರೂ ಬೀದಿಗೆ ಬೀಳಲಿದ್ದೇವೆ. ಕೈಗಾರಿಕೆಗಳು ಬರುವುದರಿಂದ ಪಕ್ಕದಲ್ಲಿಯೇ ಮಾರ್ಕೋನಹಳ್ಳಿ ಜಲಾಶಯ ಇದ್ದು, ಕೈಗಾರಿಕೆಗಳಿಂದ ಜಲಾಶಯವೂ ಕಲುಷಿತಗೊಂಡು ನಾವೆಲ್ಲರೂ ಕಲುಷಿತ ನೀರು ಕುಡಿಯಬೇಕಾಗುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೆ ಭೂ ಸ್ವಾಧೀನಪಡಿಸಿಕೊಳ್ಳಬಾರದು. ಈ ಪ್ರಕ್ರಿಯೆಯನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್‌.ಕೆಂಪೂಗೌಡ, ಸಾಮಾಜಿಕ ಕಾರ್ಯಕರ್ತ ಕೆ.ಆರ್‌.ರವೀಂದ್ರ, ರವಿ ಕುಮಾರ್‌, ವರದರಾಜು, ಕವಿತಾ, ಮಹೇಶ್‌, ರಂಗನಾಥ, ಭರತ್‌, ಗಿರೀಶ್‌, ಬಸವರಾಜು, ಬಸವಯ್ಯ, ಬೆಟ್ಟಸ್ವಾಮಿ, ರೇಖಾ ಸೇರಿದಂತೆ ಮಹಿಳೆಯರು, ರೈತರು ಭಾಗವಹಿಸಿದ್ದರು.

ರೈತನಿಂದ ವಿಷದ ಬಾಟಲ್‌ ಹಿಡಿದು ಆತ್ಮಹತ್ಯೆಗೆ ಯತ್ನ :  ಸಂಸದೆ ಸುಮಲತಾ ಅವರು ನಮ್ಮ ಮನವಿ ಸ್ವೀಕರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತ ಮಹಿಳೆ ಕೆಂಪಾಜಮ್ಮ ಅವರು ವಿಷದ ಬಾಟಲ್‌ ಹಿಡಿದು ಆತ್ಮಹತ್ಯೆಗೆಯತ್ನ ನಡೆಸಿದಘಟನೆ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂಸದೆ ಸುಮಲತಾ ನೇತೃತ್ವದಲ್ಲಿಕಬ್ಬು ಬೆಳೆಗಾರರ ಸಭೆ ನಿಗದಿಯಾಗಿತ್ತು. ಅದರಂತೆ ಸುಮಲತಾ ಅವರಿಗೆ ಮನವಿ ನೀಡಲುಕೆಐಎಡಿಬಿ ಭೂ ಸ್ವಾಧೀನ ಪ್ರಕ್ರಿಯೆ ವಿರೋಧಿ ಸಮಿತಿಯ ಗ್ರಾಮಸ್ಥರು ಕಾದುಕುಳಿತ್ತಿದ್ದರು. ಆದರೆ, ಸುಮಲತಾ ಅವರು ಮನವಿ ಸ್ವೀಕರಿಸದೆ ಸಭೆಗೆ ಹೋಗಿದ್ದರಿಂದ ಗ್ರಾಮಸ್ಥರು ಹಾಗೂ ರೈತರು ಆಕ್ರೋಶ ವ್ಯಕ್ತಪಡಿಸಿದರು. ಮೊದಲು ನಮ್ಮ ಮನವಿ ಸ್ವೀಕರಿಸಬೇಕು ಎಂದು ಪಟ್ಟು ಹಿಡಿದರು. ಈ ಸಂದರ್ಭದಲ್ಲಿ ಹಟ್ನ ಗ್ರಾಮದ ರೈತ ರಮೇಶ್‌ ವಿಷದ ಬಾಟಲ್‌ ಹಿಡಿದು ಸುಮಲತಾ ಅವರು ಮನವಿ ಸ್ವೀಕರಿಸಿ ಸಮಸ್ಯೆಕುರಿತು ಚರ್ಚಿಸದಿದ್ದರೆ ವಿಷಕುಡಿದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಮುಂದಾದಾಗ ಸ್ಥಳದಲ್ಲಿದ್ದ ರೈತರು ಆತನನ್ನು ತಡೆದು ಸಮಾಧಾನಪಡಿಸಿದರು. ನಂತರ ಸುಮಲತಾ ಸಭೆಯಿಂದ ಹೊರಬಂದು ಮನವಿ ಸ್ವೀಕರಿಸಿ ಇದರ ಬಗ್ಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

ಟಾಪ್ ನ್ಯೂಸ್

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

MNG-hosp

Mangaluru: ವೆನ್ಲಾಕ್‌ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.