ಭತ್ತ ಖರೀದಿಗೆ 5 ನೋಂದಣಿ ಕೇಂದ್ರ


Team Udayavani, Nov 8, 2020, 6:42 PM IST

ಭತ್ತ ಖರೀದಿಗೆ 5 ನೋಂದಣಿ ಕೇಂದ್ರ

ಯಾದಗಿರಿ: ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ ಭತ್ತ ಖರೀದಿಸಲು ಐದು ನೋಂದಣಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯ ಆರ್‌ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸುವ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ ಯಾದಗಿರಿ, ಸುರಪುರ ಹಾಗೂ ಶಹಾಪುರದ ಎಂಪಿಎಂಸಿಗಳಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ಆರಂಭಿಸಲಾಗುವುದು. ಬೇಡಿಕೆ ಮೇರೆಗೆ ಈ ಬಾರಿ ಹೆಚ್ಚುವರಿಯಾಗಿ ನಾಯಕಲ್‌ ಹಾಗೂ ವಡೇಗೆರಾಗಳಲ್ಲಿ ಭತ್ತ ಖರೀದಿ ಕೇಂದ್ರ ಪ್ರಾರಂಭಿಸಲಾಗುವುದು. ರೈತರು ನ.30ರಿಂದ ಡಿಸೆಂಬರ್‌ 30ರ ವರೆಗೆ ನೋಂದಣಿ ಮಾಡಿಕೊಳ್ಳಬೇಕು ಎಂದು ಹೇಳಿದರು.

2020-21ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರ 1.10 ಲಕ್ಷ ಮೆಟ್ರಿಕ್‌ ಟನ್‌ ಭತ್ತ ಖರೀದಿಗೆ ಆದೇಶಿಸಿದೆ. ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂಟಲ್‌ಗೆ 1868 ರೂ.ಗಳು ಹಾಗೂ ಗ್ರೇಡ್‌-ಎ ಭತ್ತ ಪ್ರತಿ ಕ್ವಿಂಟಲ್‌ಗೆ 1888 ರೂ.ಗಳ ಬೆಲೆ ನಿಗದಿಯಾಗಿದೆ. ಖರೀದಿಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತವನ್ನು ಜಿಲ್ಲೆಯ ಸಂಗ್ರಹಣಾ ಏಜೆನ್ಸಿಯನ್ನಾಗಿ ನೇಮಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ 32 ಅಕ್ಕಿ ಗಿರಣಿಗಳಿದ್ದು, ಅವುಗಳಲ್ಲಿ ಕಾರ್ಯನಿರತವಾಗಿರುವ ಗಿರಣಿಗಳನ್ನು ಪರಿಶೀಲಿಸಿ ವರದಿ ನೀಡಬೇಕು. ಅವುಗಳು ಹಲ್ಲಿಂಗ್‌ ಹಾಗೂ ಶೇಖರಣಾ ಸಾಮರ್ಥ್ಯಕ್ಕನುಗುಣವಾಗಿ ಸಂಗ್ರಹಣಾ ಕಾರ್ಯ ಮಾಡಬೇಕು. ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಲು ಪ್ರಚಾರ ಮಾಡಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಮಮದಾಪುರಗೆ ತಿಳಿಸಿದರು.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರ ವಿಜಯಲಕ್ಷ್ಮೀ ಶಿವಾಜಿ, ಎಂಪಿಎಂಸಿ ಸಹಾಯಕ ನಿರ್ದೇಶಕ ಭೀಮರಾಯ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.