ನಗರದಲ್ಲಿ ಟ್ರಾಫಿಕ್ ಜಾಮ್ ಹಿನ್ನೆಲೆ – ಶಾಸಕ ಕಾಮತ್ ತುರ್ತು ಸಭೆ

Team Udayavani, Nov 9, 2020, 7:10 PM IST

kAMTH

ಮಂಗಳೂರು: ನಗರದಲ್ಲಿ ಸ್ಮಾರ್ಟ್ ಯೋಜನೆಯ ಕಾಮಗಾರಿ ನಡೆಯುತ್ತಿರುವ‌ ಹಿನ್ನೆಲೆಯಲ್ಲಿ ಉಂಟಾದ ಟ್ರಾಫಿಕ್ ಜಾಮ್ ಸಮಸ್ಯೆಯ ಕುರಿತು‌ ಶಾಸಕ‌ ವೇದವ್ಯಾಸ್ ಕಾಮತ್ ಅವರು ತಕ್ಷಣವೇ ಸ್ಮಾರ್ಟ್ ಸಿಟಿ ಅಧಿಕಾರಿಗಳು, ಪೋಲಿಸ್ ಅಧಿಕಾರಿಗಳು, ಪಾಲಿಕೆ ಅಧಿಕಾರಿಗಳು, ಕೆಯುಡಿಎಫ್ಸಿ ಇಲಾಖೆಯ ಅಧಿಕಾರಿಗಳು ಹಾಗೂ ಬಸ್ ಮಾಲಕರ ಸಂಘದ ಅದ್ಯಕ್ಷರೊಂದಿಗೆ ಸಭೆ ನಡೆಸಿದರು.

ಆ ಕುರಿತು ಮಾತನಾಡಿರುವ ಶಾಸಕ ಕಾಮತ್, ನಗರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಯಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದ್ದೇನೆ. ಇಂದು ಪಿವಿಎಸ್ ಜಂಕ್ಷನ್ ನಿಂದ ನೇರವಾಗಿ ಕೆ.ಎಸ್ ರಾವ್ ರಸ್ತೆಗೆ ತೆರಳಲು ಅವಕಾಶ ಕಲ್ಪಿಸಿ ಕೊಡಬೇಕು. ಕೆ.ಎಸ್ ರಾವ್ ರಸ್ತೆಯಿಂದ ಹಳೆಯ ಸರ್ವಿಸ್ ಬಸ್ ಸ್ಟಾಂಡ್, ಮುಲ್ಕಿ ಸುಂದರ್ ರಾಮ್ ಶೆಟ್ಟಿ ರಸ್ತೆ (ಲೈಟ್ ಹೌಸ್ ಹಿಲ್ ರಸ್ತೆ) ಸಂಪರ್ಕ ಒದಗಿಸುವ‌ ನಿಟ್ಟಿನಲ್ಲಿ ಯೋಜನೆ ಸಿದ್ಧಪಡಿಸಲಾಗಿದೆ ಎಂದರು.

ಅದೇ ರೀತಿ ಕೆ.ಎಸ್ ರಾವ್ ರಸ್ತೆಯ ಮೂಲಕ ಬರುವ ವಾಹನಗಳು ವಿ.ಟಿ ರಸ್ತೆಗೆ ತಿರುಗಲು ಹಾಗೂ ಶರವು ದೇವಸ್ಥಾನ ರಸ್ತೆಯಿಂದ ಜಿ.ಎಚ್.ಎಸ್ ರಸ್ತೆಯ ಮೂಲಕ ಕ್ಲಾಕ್ ಟವರ್ ತೆರಳಲು ಅವಕಾಶ ಕಲ್ಪಿಸಿಕೊಡಬೇಕು. ಸ್ಟೇಟ್ ಬ್ಯಾಂಕ್ ಪರಿಸರದಿಂದ ಬರುವ‌ ವಾಹನಗಳಿಗೆ ಹಂಪನಕಟ್ಟೆ, ಕೆ.ಎಸ್ ರಾವ್ ರಸ್ತೆ, ಯೆನಪೋಯ ಆಸ್ಪತ್ರೆಯ ಮೂಲಕ ತೆರಳಲು ಅವಕಾಶ ಕಲ್ಪಿಸಲಾಗುತ್ತದೆ. ಅಥವ‌ ಕೆ.ಎಸ್ ರಾವ್ ರಸ್ತೆಯಿಂದ ಹಳೇ ಸರ್ವಿಸ್ ಬಸ್‌ ಸ್ಟ್ಯಾಂಡ್ ಮೂಲಕ‌ ಮುಲ್ಕಿ ಸುಂದರ್ ರಾಮ್ ಶೆಟ್ಟಿ ರಸ್ತೆಯ ಮೂಲಕ ಹೋಗಲು ಅವಕಾಶ‌ ನೀಡಲಾಗುತ್ತದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

ಅದೇ ರೀತಿ ಶಾರದಾ ವಿದ್ಯಾಲಯ ರಸ್ತೆಯಲ್ಲಿ‌ ಸಂಚಾರಕ್ಕೆ ಅವಕಾಶ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಈಗಾಗಲೇ ಪ್ರಗತಿ ಹಂತದಲ್ಲಿರುವ‌ ಬಂದರ್ ಪ್ರದೇಶದಲ್ಲಿ ರಾತ್ರಿಯ ವೇಳೆ ಕಾಮಗಾರಿ ನಡೆಸಿ ಹಗಲು ಹೊತ್ತಿನಲ್ಲಿ ಸಂಚಾರಕ್ಕೆ ತೊಡಕಾಗದಂತೆ ಕಾರ್ಯ ನಿರ್ವಹಿಸಲು ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನಾಳೆಯಿಂದ ಜನರಿಗೆ ಸಮಸ್ಯೆಯಾಗದಂತೆ ಮತ್ತು ಟ್ರಾಫಿಕ್‌ ಸಮಸ್ಯೆ ಉದ್ಭವಿಸದಂತೆ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೂ ಸೂಚಿಸಲಾಗಿದೆ ಎಂದರು.

ಸಭೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಸಚೇತರಕಾದ ಪ್ರೇಮಾನಂದ ಶೆಟ್ಟಿ, ಸ್ಥಾಯಿ ಸಮಿತಿ ಅದ್ಯಕ್ಷರಾದ ಜಗದೀಶ್ ಶೆಟ್ಟಿ ಬೋಳೂರು, ಪೂರ್ಣಿಮಾ ಎಂ, ಸಹಾಯಕ ಆಯುಕ್ತರಾದ ಮದನ್ ಮೋಹನ್,ಸಂಚಾರಿ ಉಪ ವಿಭಾಗ ಸಹಾಯಕ ಪೊಲೀಸ್ ಆಯುಕ್ತರಾದ ನಟರಾಜ್, ಸಂಚಾರ ಪಶ್ಚಿಮ ಪೊಲೀಸ್ ಠಾಣೆ ನಿರೀಕ್ಷಕರಾದ ಜಯಾನಂದ, ಬಸ್ ಮಾಲಕರ ಸಂಘದ ಅಧ್ಯಕ್ಷರಾದ‌ ದಿಲ್ ರಾಜ್ ಆಳ್ವ, ಸ್ಮಾರ್ಟ್ ಸಿಟಿ ಅಧಿಕಾರಿಗಳು, ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು, ಕೆಯುಡಿಎಫ್ಸಿ ಅಧಿಕಾರಿಗಳು, ನಾಗರಿಕ ಹಿತರಕ್ಷಣಾ ಸಮಿತಿಯ ಹನುಮಂತ್ ಕಾಮತ್ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ

5(1

Mangaluru: 7 ಕೆರೆ, ಪಾರ್ಕ್‌ ಅಭಿವೃದ್ಧಿಗೆ ಅಮೃತ 2.0

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.