ಕೈಗಾರಿಕಾ ವಲಯದಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ಸಿಗಲಿ: ಮೆಂಡನ್‌

ಉಡುಪಿ ತಾ| ಮಟ್ಟದ ತ್ತೈಮಾಸಿಕ ಕೆಡಿಪಿ ಸಭೆ

Team Udayavani, Nov 9, 2020, 10:30 PM IST

Udupi

ಉಡುಪಿ: ನಂದಿಕೂರು, ಬೆಳಪು ಸಹಿತ ಪ್ರಮುಖ ಕೈಗಾರಿಕೆ ವಲಯಗಳಲ್ಲಿ ಸ್ಥಳೀಯರಿಗೆ ಉದ್ಯೋಗದ ಅವಕಾಶ ನೀಡಬೇಕು ಎಂಬ ಕಾನೂನು ಇದ್ದರೂ ಹಲವು ಕೈಗಾರಿಕಾ ಸಂಸ್ಥೆಗಳು ಇದನ್ನು ಉಲ್ಲಂ ಸುತ್ತಿವೆ. ಭೂಮಿ ಕಳೆದುಕೊಂಡವರು ಹಾಗೂ ಸ್ಥಳೀಯ ಆಕಾಂಕ್ಷಿಗಳಿಗೆ ಉದ್ಯೋಗ ಕಲ್ಪಿಸಬೇಕು. ಸ್ಥಳೀಯರಿಗೆ ಎಷ್ಟು ಉದ್ಯೋಗಾವಕಾಶ ನೀಡಲಾಗಿದೆ ಎಂಬ ಬಗ್ಗೆ ವರದಿ ನೀಡುವಂತೆ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್‌. ಮೆಂಡನ್‌ ಅವರು ಕೈಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉಡುಪಿ ತಾಲೂಕು ಮಟ್ಟದ ತ್ತೈಮಾಸಿಕ ಕೆಡಿಪಿ ಸಭೆಯು ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಉಡುಪಿ ತಾ|ನಲ್ಲಿ ಈ ಬಾರಿ ಉಂಟಾದ ನೆರೆಗೆ 79 ಮನೆಗಳು ಸಂಪೂರ್ಣ, 130 ಮನೆಗಳು ಭಾಗಶಃ, 135 ಅಲ್ಪಪ್ರಮಾಣ ಸಹಿತ ಒಟ್ಟು 344 ಮನೆಗಳಿಗೆ ಹಾನಿಯಾಗಿದೆ. 2.5 ಲಕ್ಷ ರೂ.ಗೂ ಅಧಿಕ ಪರಿಹಾರ ನೀಡಲಾಗಿದೆ. ಆರ್‌ಟಿಸಿ ಸಮಸ್ಯೆ, ಅಸಮರ್ಪಕ ದಾಖಲೆಯಿಂದಾಗಿ ಕೆಲವರಿಗೆ ಪರಿಹಾರ ವಿತರಣೆ ವಿಳಂಬವಾಗಿದೆ ಎಂದು ತಹಶೀಲ್ದಾರ್‌ ಪ್ರದೀಪ್‌ ಕುಡೇìಕರ್‌ ಮಾಹಿತಿ ನೀಡಿದರು.

ಉತ್ತಮ ಟಾಸ್ಕ್ ಪೋರ್ಸ್‌ ಅತ್ಯಗತ್ಯ
ಪ್ರಾಕೃತಿಕ ವಿಕೋಪ ಉಂಟಾದಾಗ ಅದನ್ನು ಸಮರ್ಥವಾಗಿ ನಿಭಾಯಿ ಸಲು ಜಿಲ್ಲೆಗೆ ಉತ್ತಮ ಟಾಸ್ಕ್ ಪೋರ್ಸ್‌
ಅತ್ಯಗತ್ಯ. ಈ ಬಾರಿ ನೆರೆಹಾನಿ ಸಂದರ್ಭ ಜಿಲ್ಲಾಡಳಿತ, ಸಂಘ-ಸಂಸ್ಥೆ, ಸ್ಥಳೀಯರು ರಕ್ಷಣ ಕಾರ್ಯಕ್ಕೆ ಉತ್ತಮ ರೀತಿಯಲ್ಲಿ ಸಹಕರಿಸಿದ್ದಾರೆ. ಕೊರೊನಾದಿಂದಾಗಿ ಆದಾಯ, ಪರಿಹಾರದ ಮೂಲಗಳು ನಿಂತು ಹೋಗಿದ್ದು, ಇಲಾಖೆಗಳು ಇದ್ದ ಸಂಪನ್ಮೂಲವನ್ನು ಸೂಕ್ತ ರೀತಿಯಲ್ಲಿ ವಿನಿಯೋಗ ಮಾಡಬೇಕು ಎಂದು ಶಾಸಕ ಲಾಲಾಜಿ ಮೆಂಡನ್‌ ತಿಳಿಸಿದರು.

ಪೌಷ್ಟಿಕ ತೋಟ ನಿರ್ಮಿಸಿ
ನರೇಗಾ ಯೋಜನೆಯಿಂದ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿಯೂ ಪೌಷ್ಟಿಕ ತೋಟ ನಿರ್ಮಾಣ ಮಾಡಬೇಕು. ಇದಕ್ಕೆ ಪಂಚಾಯತ್‌ ನೆರವು ಪಡೆದುಕೊಳ್ಳಬೇಕು. ಈ ಬಗ್ಗೆ ಶೀಘ್ರ ಕಾರ್ಯೋನ್ಮುಖ ವಾಗುವಂತೆ ತಾ.ಪಂ. ಕಾರ್ಯ ನಿರ್ವಹಣ ಅಧಿಕಾರಿ ಮೋಹನ್‌ರಾಜ್‌ ತಿಳಿಸಿದರು. ಅಲೆವೂರಿನಲ್ಲಿ 1.60 ಕೋ.ರೂ.ವೆಚ್ಚದಲ್ಲಿ ಯುಜಿಡಿ ಕಾಮಗಾರಿ ನಡೆಯುತ್ತಿದೆ. ಆದರೆ ಕಾಮಗಾರಿಯ ಬಗ್ಗೆ ಇದುವರೆಗೂ ವರದಿ ನೀಡಿಲ್ಲ ಶೀಘ್ರದಲ್ಲಿಯೇ ವರದಿ ಸಿದ್ದಪಡಿಸಿ ನೀಡುವಂತೆ ಶಾಸಕರು ಹಾಗೂ ಕಾರ್ಯನಿರ್ವಹಣಾಧಿಕಾರಿಗಳು ಅಧಿಕಾರಿಗಳಿಗೆ ತಿಳಿಸಿದರು.

ಕೆಲಸ ಪೂರ್ಣಗೊಂಡರೂ ಹಣ ಬಂದಿಲ್ಲ
ಶಿಕ್ಷಣ ಇಲಾಖೆಯ ಸೇರ್ಪಡೆ- ಮಾರ್ಪಾಡು ಯೋಜನೆಯಲ್ಲಿ ಶಾಲೆ ಗಳಿಗೆ ಶೌಚಾಲಯ ನಿರ್ಮಾಣ ಸಹಿತ ವಿವಿಧ ಕಾಮಗಾರಿಗಳು 2019ನೇ ಸಾಲಿನಲ್ಲಿ ನಡೆದಿದ್ದು, ಬಿಲ್‌ ಲ್ಯಾಪ್ಸ್‌ ಆದ ಕಾರಣ ಹಣ ಇನ್ನೂ ಬಂದಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸಿ ಶೀಘ್ರದಲ್ಲಿ ಹಣ ಬಿಡುಗಡೆಯಾಗುವಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಬಿಇಒ ಮಂಜುಳಾ ಕೇಳಿಕೊಂಡರು. ಈ ಬಗ್ಗೆ ಪರಿಶೀಲಿಸುವುದಾಗಿ ಕಾರ್ಯ ನಿರ್ವಹಣಾಧಿಕಾರಿಗಳು ತಿಳಿಸಿದರು.

ತಾಲೂಕು ಪಂಚಾಯತ್‌ ಅಧ್ಯಕ್ಷೆ ಸಂಧ್ಯಾ ಕಾಮತ್‌, ಉಪಾಧ್ಯಕ್ಷ ಶರತ್‌ ಬೈಲಕೆರೆ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಶಿಲ್ಪಾ ರವೀಂದ್ರ ಕೋಟ್ಯಾನ್‌, ತಹಶೀಲ್ದಾರ್‌ ಪ್ರದೀಪ್‌ ಕುಡೇಕರ್‌ ಉಪಸ್ಥಿತರಿದ್ದರು.

ಬಾಲ್ಯವಿವಾಹ: ಜಾಗೃತಿ ಮೂಡಿಸಿ
ವಲಸೆ ಕಾರ್ಮಿಕರು ಅನ್ಯಜಿಲ್ಲೆಯಿಂದ ಬಂದು ಇಲ್ಲಿ ಪ್ರಗ್ನೆನ್ಸಿ ಮಾಡುತ್ತಾರೆ. ಈ ಬಗ್ಗೆ ತಹಶೀಲ್ದಾರ್‌ ಅವರ ನೇತೃತ್ವದಲ್ಲಿ ಜಾಗೃತಿ ಮೂಡಿಸಬೇಕು. ಇಂತಹ ಪ್ರಕರಣಗಳು ಕಂಡುಬಂದರೆ ಮಕ್ಕಳು ಪೋಕ್ಸೋ ಕಾಯ್ದೆ ಸಹಿತ ಇತರ ಸಮಸ್ಯೆ ಗಳನ್ನು ಎದುರಿಸಬೇಕಾಗುತ್ತದೆ. ಬಾಲ್ಯವಿವಾಹದ ಬಗ್ಗೆ ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸಲು ಸಹಕರಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಕೇಳಿಕೊಂಡರು.

ನರೇಗಾ ಯೋಜನೆಯ ಸದುಪಯೋಗವಾಗಲಿ
ನರೇಗಾ ಯೋಜನೆಯ ಮೂಲಕ ಹಲವು ರೀತಿಯ ಸೌಲಭ್ಯಗಳನ್ನು ಪಡೆದು ಕೊಳ್ಳಲು ಸಾಧ್ಯವಿದೆ. ಬಚ್ಚಲುಗುಂಡಿ ನಿರ್ಮಾಣಕ್ಕೆ 1 ಕುಟುಂಬಕ್ಕೆ 14 ಸಾವಿರ ರೂ., ವಸ್ತುಗಳಿಗಾಗಿ 8,300 ರೂ., 5,700 ರೂ. ಕೂಲಿ ಸಿಗುತ್ತದೆ. ಇಂತಹ ಹಲವು ಸೌಲಭ್ಯಗಳಿದ್ದು ಜನರು ಇದನ್ನು ಸದುಪಯೋಗಿಸಿಕೊಳ್ಳಬೇಕು ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಬಚ್ಚಲುಗುಂಡಿ ನಿರ್ಮಾಣದ ಗುರಿಸಾಧನೆಯನ್ನು ಹೆಚ್ಚಳ ಮಾಡುವಂತೆ ಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದರು.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.