ವಿದ್ಯುತ್ ದರ ಏರಿಕೆ ಕೈ ಬಿಡದಿದ್ದರೆ ಹೋರಾಟ
Team Udayavani, Nov 10, 2020, 11:32 AM IST
ಬೆಂಗಳೂರು: ಕೋವಿಡ್ ದಿಂದಾಗಿ ಜನ ಸಾಮಾನ್ಯರ ಬದುಕು ದಯನೀಯ ಸ್ಥಿತಿಯಲ್ಲಿದ್ದು, ಈ ಸಮಯದಲ್ಲಿ ವಿದ್ಯುತ್ ದರ ಹೆಚ್ಚಿಸುವ ಸರ್ಕಾರದ ನಿರ್ಧಾರಖಂಡನೀಯ. ಈ ನಿರ್ಧಾರವನ್ನು ಕೂಡಲೇ ಹಿಂಪಡೆಯದಿದ್ದರೆ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೋವಿಡ್ ಪಿಡುಗಿನಿಂದ ದೇಶ ತತ್ತರಿಸಿದೆ. ಈ ಸಮಯದಲ್ಲಿ ಎಲ್ಲರೂ ಮಾನವೀಯತೆಗೆ ಗೌರವ ತೋರಿ ನಡೆದುಕೊಳ್ಳುತ್ತಿದ್ದಾರೆ. ಸರ್ಕಾರಕ್ಕೆ ಎಲ್ಲರೂ ಸಂಪೂರ್ಣ ಸಹಕಾರ ನೀಡುತ್ತ ಬಂದಿದ್ದೇವೆ. ಕೋವಿಡ್ ಸಮಸ್ಯೆಯಿಂದ ದೇಶದಆರ್ಥಿಕಪರಿಸ್ಥಿತಿಹದಗೆಟ್ಟಿದೆ.ಉದ್ಯಮ ನಡೆಸುತ್ತಿರುವವರಿಂದ ಸಣ್ಣ ವ್ಯಾಪಾರಿಗಳವರೆಗೂ, ಉದ್ಯೋಗದಾತರಿಂದ ಉದ್ಯೋಗಿಗಳವರೆಗೂ, ಪ್ರತಿ ವರ್ಗದ ಜನ ಸಂಕಷ್ಟ ಎದುರಿಸುತ್ತಿದ್ದಾರೆ. ಜನರು ಕೆಲಸ ಇಲ್ಲದೆ, ಆದಾಯ ಇಲ್ಲದೆಕಂಗಾಲಾಗಿದ್ದಾರೆ. ಜನರ ನೆರವಿಗಾಗಿ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ ಮಾಡಿತ್ತು. ಇದರಲ್ಲಿ ಯಾರಿಗೆ ಸಹಾಯವಾಗಿದೆ ಎಂದು ಕೇಳಿದರೂ ಸರ್ಕಾರ ಉತ್ತರ ನೀಡಿಲ್ಲ. ಈ ಸಮಯದಲ್ಲಿ ಪಾಲಿಕೆ, ಪಂಚಾಯ್ತಿ ಮಟ್ಟದಲ್ಲಿಒಂದು ವರ್ಷ ಆಸ್ತಿ ತೆರಿಗೆ ರದ್ದು ಮಾಡುವಂತೆ ಆಗ್ರಹಿಸಲಾಗಿತ್ತು. ಇದಕ್ಕೆ ಸರ್ಕಾರ ಸ್ಪಂದಿಸಲಿಲ್ಲ. ಈಮಧ್ಯೆ ಎಲ್ಲ ವಹಿವಾಟಿಗೂ ಸರ್ಕಾರ ನಿರ್ಬಂಧ ಹೇರಿತ್ತು. ಎಲ್ಲರೂ ಇದಕ್ಕೆ ಸಹಕಾರ ನೀಡಿದ್ದರು. ರಾಜ್ಯದಲ್ಲಿ ಮಳೆ ಹೆಚ್ಚಾದಾಗ ಹಾಗೂ ಸೌರಶಕ್ತಿಯಿಂದ ವಿದ್ಯುತ್ ಉತ್ಪಾದನೆ ಹೆಚ್ಚಾಗುತ್ತದೆ. ಇಂತಹ ಸಂದರ್ಭದಲ್ಲಿ ಕರ್ನಾಟಕದಲ್ಲಿ ವಿದ್ಯುತ್ ದರ ಹೆಚ್ಚಿಸಲು ಸರ್ಕಾರ ಕೆಇಆರ್‌ಸಿಗೆ ಪ್ರಸ್ತಾವನೆ ಸಲ್ಲಿಸಿತ್ತು. ಸಂಸ್ಥೆ ಪ್ರತಿ ಯೂನಿಟ್ ಗೆ 40 ಪೈಸೆ ಹೆಚ್ಚಿಸಿದೆ. ಕೈಗಾರಿಕೆ, ವ್ಯಾಪಾರಿ, ರೈತರು ಹಾಗೂ ಮಧ್ಯಮ ವರ್ಗದ ಜನರ ವಿರುದ್ಧ ಈ ತೀರ್ಮಾನ ಕೈಗೊಳ್ಳಲಾಗಿದೆ. ಸರ್ಕಾರ ಕೂಡಲೇ ಈ ನಿರ್ಧಾರ ಕೈಬಿಡಬೇಕು. ಹಿಂದಿನ ದರವನ್ನೇ ಮುಂದುವರೆಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆ ಎಚ್ಚರಿಕೆ : ಮಳೆ ಹೆಚ್ಚಾಗಿ ವಿದ್ಯುತ್ ಉತ್ಪಾದನೆ ಹೆಚ್ಚಾಗಿರುವ ಹೊತ್ತಲ್ಲಿ ಸರ್ಕಾರ ವಿದ್ಯುತ್ ದರಕಡಿಮೆ ಮಾಡಬಹುದಿತ್ತು. ಆದರೆ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ಒಂದು ವೇಳೆ ಸರ್ಕಾರ ಒಂದು ವಾರದ ಒಳಗಾಗಿ ಈ ನಿರ್ಧಾರ ಕೈಬಿಡದಿದ್ದರೆ, ನ.17ರಿಂದ20 ರವರೆಗೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ, ಎಸ್ಕಾಂ ಸಂಸ್ಥೆಗಳ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
Loophole: ನಿಮ್ಮ ಪಡಿತರ ಅಪಾಯದಲ್ಲಿ? ಸೇವಿಸುವ ಆಹಾರ ಎಷ್ಟು ಸುರಕ್ಷಿತ?
Winter Session: ಇಂದಿನಿಂದ “ಉತ್ತರ’ ಅಧಿವೇಶನ; 3 ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆ
Waqf: ಪ್ರಕರಣ ಮುಚ್ಚಿಹಾಕಲು ಕಾಂಗ್ರೆಸ್‌ನವರಿಂದಲೇ ಲಂಚದ ಆಮಿಷ: ಮಾಣಿಪ್ಪಾಡಿ ಆರೋಪ
MUST WATCH
ಹೊಸ ಸೇರ್ಪಡೆ
Sagara: ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ
ಆಳ್ವಾಸ್ ವಿರಾಸತ್‌ಗೆ ತೆರೆ; ಮೂಡುಬಿದಿರೆಯಲ್ಲಿ 6 ದಿನ ಕಳೆಗಟ್ಟಿದ್ದ ಸಂಭ್ರಮ
Bigg Boss Telugu 8: ಬಿಗ್‌ಬಾಸ್ ತೆಲುಗು ಗೆದ್ದ ಮೈಸೂರಿನ ಹುಡುಗ: ಯಾರು ಈ ನಿಖಿಲ್?
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
Someshwar Beach: ತಂಗಿ ಗಂಡನ ಪಿಂಡ ಪ್ರದಾನಕ್ಕೆ ಬಂದಿದ್ದ ಮಹಿಳೆ ನೀರುಪಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.