ಚುನಾವಣಾ ಸಮರದ ಬಳಿಕ ಬಿಜೆಪಿ- ಕಾಂಗ್ರೆಸ್ ಟ್ವೀಟ್ ವಾರ್!
Team Udayavani, Nov 10, 2020, 5:00 PM IST
ಬೆಂಗಳೂರು: ರಾಜ್ಯದ ಎರಡು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ರಾಜರಾಜೇಶ್ವರಿ ನಗರ ಮತ್ತು ಶಿರಾ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಜಯ ಸಾಧಿಸಿದೆ. ಫಲಿತಾಂಶ ಹೊರಬೀಳುತ್ತಿದ್ದಂತೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಟ್ವೀಟ್ ವಾರ್ ಆರಂಭವಾಗಿದೆ.
ರಾಜ್ಯ ಬಿಜೆಪಿ ಮೊದಲು ಟ್ವೀಟ್ ಮಾಡಿದ್ದು, ಸಿದ್ದರಾಮಯ್ಯ ಅವರನ್ನು ಹಾಸ್ಯ ಮಾಡಿದೆ. ಸಿದ್ದರಾಮಯ್ಯ ಕಾಂಗ್ರೆಸ್ ನ ವಿದೂಷಕ ಎಂದಿದೆ.
“ಸಿದ್ದರಾಮಯ್ಯ: ರಾಜರಾಜೇಶ್ವರಿನಗರದಲ್ಲಿ ಬಿಜೆಪಿಯ ಅಲೆಯೇ ಇಲ್ಲ . . .
ಮತದಾರ: ಅಯ್ಯೋ ಸಿದ್ದರಾಮಯ್ಯನವರೇ ಇಲ್ಲಿ ನಿಮ್ಮ ಕಾಂಗ್ರೆಸ್ ಪಕ್ಷವೇ ಇಲ್ಲವಲ್ಲ! “ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಇದಕ್ಕೆ ಉತ್ತರಿಸಿರುವ ರಾಜ್ಯ ಕಾಂಗ್ರೆಸ್, “ಹಣಬಲ, ತೋಳ್ಬಲ, ಅಧಿಕಾರ ಬಲದಿಂದ ಗೆದ್ದ ಮಾತ್ರಕ್ಕೆ ಅಹಂ ತಲೆಗೇರಿಸಿಕೊಳ್ಳಬೇಡಿ ಎಂದು ತಿರುಗೇಟು ನೀಡಿದೆ.
ಇದನ್ನೂ ಓದಿ:ಶಿರಾ’ದಲ್ಲಿ ‘ರಾರಾ’ಜಿಸಿದ ಕಮಲ: ಬಿಎಸ್ ವೈ ಮತ್ತಷ್ಟು ಭದ್ರ, ಕೈ ರಣತಂತ್ರ ಛಿದ್ರ
ಇಂತಹ ಆಹಂಕಾರಗಳನ್ನ ಬಿಟ್ಟು ಕೋವಿಡ್ ನಿಂದ ಕಂಗೆಟ್ಟ ಜನತೆಯ ಕಷ್ಟಕ್ಕೆ ಸ್ಪಂದಿಸಿ, ಜಿಸ್ ಟಿ ಪಾಲು ತರಲಾಗದೆ ರಾಜ್ಯದ ಆರ್ಥಿಕ ಸ್ಥಿತಿ ಶೋಚನೀಯವಾಗಿದೆ, ಅದರತ್ತ ಗಮನಿಸಿ. ಗಾಂಭೀರ್ಯತೆ ಅರಿಯದ ನಿಮ್ಮ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಪ್ರಜ್ಞಾವಂತಿಕೆಯ ಟ್ಯೂಷನ್ ಕೊಡಿಸಿ ಟ್ವೀಟ್ ಮಾಡಿದೆ.
ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರು ಕಾಂಗ್ರೆಸ್ ನ ಟಿ,ಬಿ ಜಯಚಂದ್ರ ಅವರನ್ನು ಸೋಲಿಸಿದರೆ, ಆರ್.ಆರ್. ನಗರದಲ್ಲಿ ಕಾಂಗ್ರೆಸ್ ನ ಕುಸುಮಾ ವಿರುದ್ಧ ಮುನಿರತ್ನ ಭರ್ಜರಿ ಜಯ ಸಾಧಿಸಿದರು.
ಹಣಬಲ, ತೋಳ್ಬಲ, ಅಧಿಕಾರ ಬಲದಿಂದ ಗೆದ್ದ ಮಾತ್ರಕ್ಕೆ
ಅಹಂ ತಲೆಗೇರಿಸಿಕೊಳ್ಳಬೇಡಿ.ಇಂತಹ ಆಹಂಕಾರಗಳನ್ನ ಬಿಟ್ಟು ಕರೋನದಿಂದ ಕಂಗೆಟ್ಟ ಜನತೆಯ ಕಷ್ಟಕ್ಕೆ ಸ್ಪಂದಿಸಿ,
GST ಪಾಲು ತರಲಾಗದೆ ರಾಜ್ಯದ ಆರ್ಥಿಕ ಸ್ಥಿತಿ ಶೋಚನೀಯವಾಗಿದೆ,ಅದರತ್ತ ಗಮನಿಸಿ.ಗಾಂಭೀರ್ಯತೆ ಅರಿಯದ ನಿಮ್ಮ ಅಧ್ಯಕ್ಷ @nalinkateelರಿಗೆ ಪ್ರಜ್ಞಾವಂತಿಕೆಯ ಟ್ಯೂಷನ್ ಕೊಡಿಸಿ. https://t.co/ZLygD0Dg0Y
— Karnataka Congress (@INCKarnataka) November 10, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
MUST WATCH
ಹೊಸ ಸೇರ್ಪಡೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.