ಹತ್ತಿ ಕೇಂದ್ರ ಪರಿಶೀಲಿಸಿದ ಜಿಲ್ಲಾಧಿಕಾರಿ


Team Udayavani, Nov 10, 2020, 5:50 PM IST

ಹತ್ತಿ ಕೇಂದ್ರ ಪರಿಶೀಲಿಸಿದ ಜಿಲ್ಲಾಧಿಕಾರಿ

ಯಾದಗಿರಿ: ಜಿಲ್ಲೆಯ ಹತ್ತಿ ಕೇಂದ್ರಗಳಲ್ಲಿನ ರೈತರಿಗೆ ದರದಲ್ಲಿ ಮೋಸ, ಸೂಟ್‌ ನೆಪದಲ್ಲಿ ರೈತರ ಕೆಲ ಕೆಜಿ ಹತ್ತಿಯನ್ನು ಕಸಿಯುತ್ತಿದ್ದ ದಲ್ಲಾಳಿಗಳಿಗೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಬಿಸಿ ಮುಟ್ಟಿಸಿದ್ದಾರೆ.

ಜಿಲ್ಲೆಯ ವಿವಿಧ ಕಡೆಗಳಲ್ಲಿ ರಸ್ತೆಯುದ್ದಕ್ಕೂ ತೆರೆದಿರುವ ಹತ್ತಿ ಕೇಂದ್ರಗಳು ರೈತರಿಂದ ಹತ್ತಿ ಖರೀದಿಸುತ್ತಿದ್ದು, ಮೊದಲೇ ಪ್ರವಾಹ, ಅತಿವೃಷ್ಟಿಯಿಂದ ತೊಂದರೆಗೀಡಾಗಿದ್ದ ರೈತರಗಾಯದ ಮೇಲೆ ಬರೆ ಎಳೆಯುತ್ತಿರುವ ಕುರಿತು “ಉದಯವಾಣಿ’ ನ.8ರಂದು ವರದಿ ಪ್ರಕಟಿಸಿತ್ತು.

ವರದಿಯಿಂದ ಎಚ್ಚೆತ್ತ ಜಿಲ್ಲಾಡಳಿತ ರೈತರಿಗೆಅನ್ಯಾಯವಾಗುತ್ತಿರುವುದನ್ನು ತೀವ್ರವಾಗಿಸ್ಪಂದಿಸಿದ್ದು, ಸೋಮವಾರ ನಗರದ ಹೊರವಲಯದ ಮುಂಡರಗಿ ರಸ್ತೆಯಮೌಲಾಲಿ ಅನ್ಪುರ್‌ ರೈಸ್‌ ಮಿಲ್‌ ಬಳಿಯಿರುವ ಹಾಗೂ ಇಂಪಿರಿಯಲ್‌ ಗಾರ್ಡನ್‌, ಯಾದಗಿರಿ ಬಸ್‌ ಕಾರ್ಯಾಗಾರ ಎದುರುಗಡೆ ತೆರೆದಿರುವ ಹತ್ತಿ ಖರೀದಿ ಕೇಂದ್ರಗಳಿಗೆ ಖುದ್ದಾಗಿ ಜಿಲ್ಲಾಧಿಕಾರಿ ಡಾ. ರಾಗಪ್ರಿಯ ಆರ್‌. ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹತ್ತಿ ಖರೀದಿ ಕೇಂದ್ರಗಳಲ್ಲಿ ರೈತರಿಗೆ ತೂಕ ಮತ್ತು ಅಳತೆಗಳಲ್ಲಿ ಅನ್ಯಾಯವಾಗುತ್ತಿದೆ ಎಂಬದೂರುಗಳ ಆಧಾರದಲ್ಲಿ ಅವರು ಅನಿರೀಕ್ಷಿತವಾಗಿ ನಗರದ ವಿವಿಧ ಹತ್ತಿ ಖರೀದಿ ಕೇಂದ್ರಗಳಿಗೆ ತೆರಳಿ ಅಲ್ಲಿನ ವಸ್ತುಸ್ಥಿತಿ ಅವಲೋಕಿಸಿದರು.

ಹತ್ತಿ ಖರೀದಿ ಕೇಂದ್ರಗಳಿಂದ ರೈತರಿಗೆ ನೀಡಲಾದ ಬಿಲ್‌ಗ‌ಳನ್ನ ಪರಿಶೀಲಿಸಿದರು. ಈ ವೇಳೆ ಅನ ಧಿಕೃತ ಕಡಿತಗಳ ಮೂಲಕ ರೈತರಿಂದ ಹಣ ವಸೂಲಿ ಮಾಡುತ್ತಿರುವ ಖರೀದಿದಾರರ ವಿರುದ್ಧ ಪ್ರಕರಣ ದಾಖಲಿಸುವಂತೆ ಸ್ಥಳದಲ್ಲಿದ್ದ ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಂದಾಯ ನಿರೀಕ್ಷಕರು ನಾಲ್ವರು ಖರೀದಿದಾರರ ವಿರುದ್ಧ ಪ್ರಕರಣ ದಾಖಲಿಸಿರುವ ಮಾಹಿತಿ ಲಭ್ಯವಾಗಿದೆ.

ಕಾಯ್ದೆ ತಿದ್ದುಪಡಿಯಿಂದ ತೊಂದರೆ: ಸರ್ಕಾರ ಕೃಷಿ ಮಾರಾಟ ಕಾಯ್ದೆಯನ್ನು ತಿದ್ದುಪಡಿ ಮಾಡಿರುವುದು ಕೃಷಿ ಮಾರಾಟ ಇಲಾಖೆ ಅಧಿಕಾರಿಗಳ ಪಾಡು ಹಲ್ಲಿಲ್ಲದ ಹಾವಿನಂತಾಗಿದೆ. ಅನಧಿಕೃತ ಖರೀದಿದಾರರ ಮೇಲೆ ಕ್ರಮ ಕೈಗೊಳ್ಳುವ ಯಾವುದೇ ಅಧಿಕಾರ ಕೃಷಿ ಮಾರುಕಟ್ಟೆ ಅಧಿಕಾರಿಗಳಿಗಿಲ್ಲ ಎನ್ನಲಾಗುತ್ತಿದೆ.

ಕಳೆದ ಬಾರಿ ಅನಧಿಕೃತ ಹತ್ತಿ ಖರೀದಿ ಕೇಂದ್ರಗಳ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು 23 ಲಕ್ಷಕ್ಕೂ ಅಧಿಕ ದಂಡ ವಿಧಿಸಿ 196 ಪ್ರಕರಣಗಳನ್ನು ದಾಖಲಿಸಿದ್ದರು. ಆದರೇ ಇತ್ತೀಚೆಗಷ್ಟೇ ಕಾಯ್ದೆ ತಿದ್ದುಪಡಿಯಂತೆ ಯಾರಿಗಾದರೂ ರೈತರು ತಮ್ಮ ಉತ್ಪನ್ನಗಳನ್ನು ಮಾರಬಹುದಾಗಿದ್ದು, ಕಾಯ್ದೆಯಲ್ಲಿ ಹಲವು ಸಡಿಲಿಕೆ ಇರುವುದರಿಂದ ಅಧಿಕೃತ ಪರವಾನಗಿ ಪಡೆಯದಿದ್ದರೂ ರೈತರಿಂದ ಖರೀದಿಸಲು ಅವಕಾಶವಿದೆ ಎಂದು ಕೃಷಿ ಮಾರಾಟ ಇಲಾಖೆ ಅಧಿಕಾರಿಯೊಬ್ಬರುಮಾಹಿತಿ ನೀಡಿದ್ದಾರೆ. ಇದರಿಂದಾಗಿ ರೈತರು ಮತ್ತಷ್ಟು ಅನ್ಯಾಯಕ್ಕೊಳಗಾಗುವ ಆತಂಕ ಎದುರಾಗಿದೆ.

ಹತ್ತಿ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗಿದ್ದು, ರೈತರಿಂದ ಅನಧಿ ಕೃತ ಕಡಿತಗಳ ಮೂಲಕ ಹಣ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.  –ಡಾ.ರಾಗಪ್ರಿಯಾ, ಡಿಸಿ.

ಟಾಪ್ ನ್ಯೂಸ್

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.