ಹೊನ್ನಾಳಿ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಆಡಳಿತ


Team Udayavani, Nov 10, 2020, 6:22 PM IST

ಹೊನ್ನಾಳಿ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಆಡಳಿತ

ಹೊನ್ನಾಳಿ: ಇಲ್ಲಿನ ಪಟ್ಟಣ ಪಂಚಾಯಿತಿ ನೂತನಅಧ್ಯಕ್ಷರಾಗಿ 14ನೇ ವಾರ್ಡ್‌ ಸದಸ್ಯ ಕೆ.ವಿ. ಶ್ರೀಧರ ಹಾಗೂ ಉಪಾಧ್ಯಕ್ಷೆಯಾಗಿ 7ನೇ ವಾರ್ಡ್‌ ಸದಸ್ಯೆ ರಂಜಿತ ಚನ್ನಪ್ಪ ಅವಿರೋಧವಾಗಿ ಆಯ್ಕೆಯಾದರು.

ಸೋಮವಾರ ಪಪಂ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಇವರಿಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ತಹಶೀಲ್ದಾರ್‌ತುಷಾರ್‌ ಬಿ. ಹೂಸೂರು ಘೋಷಿಸಿದರು. ಪಟ್ಟಣ ಪಂಚಾಯಿತಿ ಸದಸ್ಯರ ಚುನಾವಣೆ ನಡೆದು 2 ವರ್ಷಗಳಾಗಿದ್ದರೂ ಚುನಾಯಿತ ಸದಸ್ಯರುಗಳು ಅಧಿಕೃತವಾಗಿ ಅಧಿಕಾರವಿಲ್ಲದೆ ಬೇಸರಗೊಂಡಿದ್ದರು. ಇತ್ತೀಚೆಗೆ ಸರ್ಕಾರ ಸ್ಥಳೀಯಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ  ಯನ್ನು ಪ್ರಕಟಿಸಿದ್ದರಿಂದ ಸದಸ್ಯರ ಕಾಯುವಿಕೆಗೆ ತೆರೆ ಬಿದ್ದಂತಾಗಿತ್ತು. ಪಟ್ಟಣದಲ್ಲಿ ಒಟ್ಟು 18 ವಾರ್ಡ್‌ಗಳಿದ್ದು, ಚುನಾವಣೆಯಲ್ಲಿ ಬಿಜೆಪಿಯ 10, ಕಾಂಗ್ರೆಸ್‌ನ 5 ಹಾಗೂ 3 ಪಕ್ಷೇತರರು ಆಯ್ಕೆಯಾಗಿದ್ದರು. ಅಧ್ಯಕ್ಷ ಸ್ಥಾನ ಹಿಂದುಳಿದ “ಅ’ ವರ್ಗ ಹಾಗೂ ಉಪಾಧ್ಯಕ್ಷರ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಕೆ.ವಿ. ಶ್ರೀಧರ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರಂಜಿತ ಚನ್ನಪ್ಪ ಮಾತ್ರ ನಾಮಪತ್ರ ಸಲ್ಲಿಸಿದ್ದರು.

ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಂತರ ಮಾತನಾಡಿದ ಸಂಸದ ಜಿ.ಎಂ. ಸಿದ್ದೇಶ್ವರ, ಚುನಾವಣೆ ಸಂದರ್ಭಗಳಲ್ಲಿ ಮಾತ್ರ ಪಕ್ಷ ಭೇದವಿರಬೇಕು. ಚುನಾವಣೆ ಮುಗಿದು ಅಧಿಕಾರ ವಹಿಸಿಕೊಂಡ ನಂತರ ಪಕ್ಷ ಭೇದ ಮರೆತು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು. ಈ ಮೂಲಕ ಮತ ನೀಡಿದ ಮತದಾರರಿಗೆ ನ್ಯಾಯ ಒದಗಿಸಬೇಕು ಎಂದು ಕಿವಿಮಾತು ಹೇಳಿದರು.

ಸಿ.ಎಂ. ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಮಾತನಾಡಿ, ಹೊನ್ನಾಳಿ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸಲು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರದಿಂದ ಹಸಿರು ನಿಶಾನೆ ದೊರಕಲಿದೆ. ಜನತೆಗೆ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆಗಾಗಿ 17 ಕೋಟಿ ರೂ. ಗಳ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದೂ ಕೂಡ ಮಂಜೂರಾಗಲಿದೆ ಎಂದು ತಿಳಿಸಿದರು.

ಜಿಪಂ ಅಧ್ಯಕ್ಷೆ ದೀಪಾ ಜಗದೀಶ್‌, ಸದಸ್ಯೆ ಉಮಾರಮೇಶ್‌, ಸುರೇಂದ್ರ ನಾಯ್ಕ, ಬಿಜೆಪಿ ತಾಲೂಕುಅಧ್ಯಕ್ಷ ಜೆ.ಕೆ. ಸುರೇಶ್‌, ನ್ಯಾಮತಿ ತಾಪಂ ಅಧ್ಯಕ್ಷರವಿಕುಮಾರ್‌, ಉಪಾಧ್ಯಕ್ಷ ಮರಿಕನ್ನಪ್ಪ, ಹೊನ್ನಾಳಿ ತಾಪಂ ಉಪಾಧ್ಯಕ್ಷ ಕೆ.ಎಲ್‌. ರಂಗಪ್ಪ, ತಿಪ್ಪೇಶಪ್ಪ ಇದ್ದರು.

ಟಾಪ್ ನ್ಯೂಸ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.