ಕ್ಷಯಮುಕ್ತ ಗ್ರಾಮ ಘೋಷಣೆಗೆ ಸಲಹೆ
Team Udayavani, Nov 10, 2020, 6:27 PM IST
ಬಳ್ಳಾರಿ: ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕ್ಷಯಮುಕ್ತ ಗ್ರಾಮಗಳನ್ನು ಗುರುತಿಸಿ ಅವುಗಳನ್ನು ಟಿಬಿ ಮುಕ್ತ ಗ್ರಾಮವೆಂದು ಘೋಷಿಸಬೇಕು ಮತ್ತು ಈ ಕುರಿತು ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಪಂ ಸಿಇಒ ಕೆ.ಆರ್.ನಂದಿನಿ ಸೂಚನೆ ನೀಡಿದರು.
ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಕ್ಷಯವೇದಿಕೆ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಎಲ್ಲಾ 237 ಗ್ರಾಮ ಪಂಚಾಯಿತಿಗಳಲ್ಲಿ ಏಕಕಾಲಕ್ಕೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚನೆ ನೀಡಿದ ಜಿಪಂ ಸಿಇಒ ನಂದಿನಿಅವರು ಪೋರ್ಟಬಲ್ ಎಕ್ಸರೇ ಮೂಲಕ ಸಿಬಿನ್ಯಾಟ್ ವಾಹನವನ್ನು ಸಿದ್ದಪಡಿಸಿ ಜಿಲ್ಲೆಯಲ್ಲಿ ಮಾದರಿಯಾಗಿ ಕಾರ್ಯಕ್ರಮವನ್ನು ಅನುಷ್ಠಾನ ಮಾಡಬೇಕು ಎಂದು ತಿಳಿಸಿದರು.
ಕ್ಷಯರೋಗವನ್ನು ಆರಂಭದಲ್ಲಿಯೇಪತ್ತೆಹಚ್ಚಿ ಶೀಘ್ರ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಅಧಿಕಾರಿಗಳು ಮುಂದಾಗಬೇಕು ಮತ್ತು ಕ್ಷಯರೋಗಕ್ಕೆ ಸಂಬಂಧಿಸಿದಂತೆ ನೋಂದಣಿ, ವರದಿ ಮಾಡಿಕೊಳ್ಳುವಿಕೆ, ಚಿಕಿತ್ಸೆಗೆ ಸಂಬಂಧಿಸಿದಂತೆ ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸಬೇಕು. ಯಾವ ರೀತಿಯ ಲಕ್ಷಣಗಳುಬಂದರೇ ಕ್ಷಯರೋಗ ಬರುವ ಸಾಧ್ಯತೆ ಇದೆ. ಅದನ್ನು ನಾವು ಹೇಗೆ ಗೊತ್ತು ಮಾಡಿಕೊಳ್ಳಬೇಕುಎಂಬುದರ ಕುರಿತು ಹೆಚ್ಚಿನ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ತಿಳಿಸಿದರು.
ಹಡಗಲಿ, ಸಂಡೂರು, ಹರಪನಳ್ಳಿ, ಕೂಡ್ಲಿಗಿ ಮತ್ತು ಬಳ್ಳಾರಿ ತಾಲೂಕುಗಳಲ್ಲಿ ಕ್ಷಯರೋಗ ಪತ್ತೆ ಹಚ್ಚುವಿಕೆಯನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವಂತೆ ತಿಳಿಸಿದ ಅವರು ಮತ್ತು 15 ದಿನಗಳಿಗೊಮ್ಮೆ ಈ ಕುರಿತು ಸಭೆ ಕರೆದುಪರಿಶೀಲನೆ ನಡೆಸಿ ನಿಗಾವಹಿಸಬೇಕು. ಹೆಚ್ಚು ಹೆಚ್ಚು ಕಫ ಪರೀಕ್ಷೆಯನ್ನು ಮಾಡುವ ಮೂಲಕ ರೋಗ ನಿರ್ಧಾರವನ್ನು ಕ್ರಮ ಕೈಗೊಳ್ಳುವುದು.ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ತಾಲೂಕ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಬರುವರೋಗಿಗಳಲ್ಲಿ ಶಂಕಿತರನ್ನು ಪರೀಕ್ಷೆ ಮಾಡುವಮೂಲಕ ಹಾಗೂ ಸಕಾಲದಲ್ಲಿ ಚಿಕಿತ್ಸೆ ನೀಡುವುದಕ್ಕೆ ಮುಂದಾಗಬೇಕು. ಜತೆಗೆ ಖಾಸಗಿ ವೈದ್ಯರು ತಮ್ಮ ಬಳಿ ಚಿಕಿತ್ಸೆಗೆ ಆಗಮಿಸುವ ರೋಗಿಗಳಲ್ಲಿ ಕಫ ಪರೀಕ್ಷೆಗೆ ಸೂಚಿಸುವುದು, ಕ್ಷಯ ಖಚಿತವಾದ ನಂತರ ಅಗತ್ಯ ಮಾಹಿತಿಯನ್ನು ಇಲಾಖೆಗೆ ತಿಳಿಸಲು ಐಎಂಎ ಜೊತೆಯಲ್ಲಿ ಸಭೆ ಹಮ್ಮಿಕೊಳ್ಳಬೇಕು ಎಂದರು.
6 ವರ್ಷದೊಳಗಿನ ಮಕ್ಕಳ ಹಾಗೂ ಇತರೆ ಶಂಕಿತರನ್ನು ತಕ್ಷಣವೇ ಕಫ ಪರೀಕ್ಷೆಗಾಗಿ ಮನವೊಲಿಸುವುದು ಮತ್ತು ಕಡ್ಡಾಯವಾಗಿ ಪರೀಕ್ಷೆಯನ್ನು ಮಾಡಿಸಲು ಸೂಚಿಸಿದ ಜಿಪಂ ಸಿಇಒ ನಂದಿನಿ ಅವರು ಕ್ಷಯರೋಗಕ್ಕೆ ಸಂಬಂಧಿತ ಕಾರ್ಯಕ್ರಮಗಳ ಕ್ರಿಯಾ ಯೋಜನೆ ರಚಿಸಿ ಅನುದಾನವನ್ನು ಆಯಾ ಕಾರ್ಯಕ್ರಮವಾರು ವೆಚ್ಚ ಭರಿಸಲು ಸೂಚಿಸಿದರು. ಕ್ಷಯರೋಗದಿಂದ ಮುಕ್ತರಾದ ಕೆಲವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಸಭೆಯಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನ ಅಧಿಕಾರಿ ಡಾ| ಇಂದ್ರಾಣಿ, ಡಿಎಚ್‌ಒ ಡಾ| ಜನಾರ್ಧನ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಎನ್. ಬಸರೆಡ್ಡಿ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ| ಅನಿಲಕುಮಾರ್ ಸೇರಿದಂತೆ ತಾಲೂಕು ಆರೋಗ್ಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.