ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಇಲಾಖೆ ಸಿದ್ಧತೆ
Team Udayavani, Nov 11, 2020, 5:45 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಶಿಕ್ಷಕ ಮಿತ್ರ ಆ್ಯಪ್ ಮೂಲಕ ಮಾಹಿತಿಯ ಸಂಗ್ರಹವೂ ಆಗುತ್ತಿದೆ. ಉಪಚುನಾವಣೆ ಹಾಗೂ ವಿಧಾನ ಪರಿತಷ್ ಚುನಾವಣೆ ನೀತಿ ಸಂಹಿತೆಯಿಂದ ವರ್ಗಾವಣೆ ಪ್ರಕ್ರಿಯೆ ಆರಂಭವಾಗಿರಲಿಲ್ಲ. ಈಗ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಬುಧವಾರಕ್ಕೆ ನೀತಿ ಸಂಹಿತೆ ಮುಗಿಯಲಿದೆ. ಹೀಗಾಗಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ಸಿಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಶಿಕ್ಷಣ ಇಲಾಖೆ ಸಿದ್ಧಪಡಿಸಿರುವ ವರ್ಗಾವಣೆ ವೇಳಾಪಟ್ಟಿಗೆ ಸರಕಾರದಿಂದ ಈಗಾಗಲೇ ಅನುಮೋದನೆ ದೊರೆತಿದೆ. ವೇಳಾಪಟ್ಟಿಯನುಸಾರ ವರ್ಗಾವಣೆ ನಡೆಸುವ ಸಂಬಂಧ ಸರಕಾರದಿಂದ ಅಧಿಕೃತ ಆದೇಶ ಹೊರಬೀಳಬೇಕಿದೆ. ಕೌನ್ಸೆಲಿಂಗ್ ಸೇರಿದಂತೆ ಬಹುತೇಕ ಪ್ರಕ್ರಿಯೆಗಳು ಆನ್‌ಲೈನ್ ಮೂಲಕವೇ ನಡೆಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಮಾಹಿತಿ ತಿದ್ದುಪಡಿಗೆ ಅವಕಾಶ
ಶಾಲಾ ಶಿಕ್ಷಕರ ವರ್ಗಾವಣೆ ಹಿನ್ನೆಲೆಯಲ್ಲಿ ಶಿಕ್ಷಕರ ಸೇವಾ ಮಾಹಿತಿ ತಿದ್ದುಪಡಿಗೆ ಉಪ ನಿರ್ದೇಶಕರ ಹಂತದಲ್ಲಿ ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಹಂತದ ಕಚೇರಿಗಳಲ್ಲಿರುವ ಶಿಕ್ಷಕರ ಮಾಹಿತಿ ತಿದ್ದುಪಡಿ ಜವಾಬ್ದಾರಿಯನ್ನು ಡಿಡಿಒ ಅವರಿಗೆ ವಹಿಸಲಾಗಿದೆ. ಶಿಕ್ಷಕರ ಸೇವಾ ಮಾಹಿತಿಯಲ್ಲಿ ತಪ್ಪುಗಳಿ ರುವ ಬಗ್ಗೆ ಅಥವಾ ಆ ಕಾರಣದಿಂದ ವರ್ಗಾವಣೆ ಅಥವಾ ಇತರ ಸೇವಾ ಸೌಲಭ್ಯದಿಂದ ಶಿಕ್ಷಕರು ವಂಚಿತರಾಗಿರುವ ಬಗ್ಗೆ ದೂರು ಬಂದರೆ, ಸಂಬಂಧಪಟ್ಟ ಉಪನಿರ್ದೇಶಕರು ಹಾಗೂ ಡಿಡಿಒಗಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!
MUST WATCH
ಹೊಸ ಸೇರ್ಪಡೆ
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.